IND vs WI 2nd Test: ಇಂದಿನಿಂದ ಭಾರತ- ವೆಸ್ಟ್ ಇಂಡೀಸ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾ ಪ್ಲೇಯಿಂಗ್ XI ನಲ್ಲಿ ಬದಲಾವಣೆ?

|

Updated on: Jul 20, 2023 | 7:37 AM

ಎರಡನೇ ಟೆಸ್ಟ್ ಕೂಡ ಭಾರತದ ಪಾಲಾದರೆ ಕೆರಿಬಿಯನ್ ನಾಡಲ್ಲಿ ತನ್ನ ಅಜೇಯ ಗೆಲುವಿನ ಓಟವನ್ನು ಮುಂದುವರೆಸಲಿದೆ. ಅತ್ತ ವೆಸ್ಟ್ ಇಂಡೀಸ್​ಗೆ ಈ ಟೆಸ್ಟ್ ಬಹುಮುಖ್ಯವಾಗಿದ್ದು, ತವರಿನಲ್ಲಿ ಮಾನ ಉಳಿಸಿಕೊಳ್ಳಲು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.

IND vs WI 2nd Test: ಇಂದಿನಿಂದ ಭಾರತ- ವೆಸ್ಟ್ ಇಂಡೀಸ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾ ಪ್ಲೇಯಿಂಗ್ XI ನಲ್ಲಿ ಬದಲಾವಣೆ?
IND vs WI 2nd Test
Follow us on

ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಎರಡನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಟ್ರಿನಿಡಾಡ್​ನ (Trinidad) ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಈ ಮ್ಯಾಚ್ ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ (Team India) 141 ರನ್​ಗಳ ಇನ್ನಿಂಗ್ಸ್ ಜಯ ಸಾಧಿಸಿತ್ತು. ಹೀಗಾಗಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಈಗಾಗಲೇ ಉಭಯ ತಂಡಗಳು ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದ್ದು, ಕಣಕ್ಕಿಳಿಯುವ ಹುಮ್ಮಸ್ಸಿನಲ್ಲಿದೆ.

ಎರಡನೇ ಟೆಸ್ಟ್ ಕೂಡ ಭಾರತದ ಪಾಲಾದರೆ ಕೆರಿಬಿಯನ್ ನಾಡಲ್ಲಿ ತನ್ನ ಅಜೇಯ ಗೆಲುವಿನ ಓಟವನ್ನು ಮುಂದುವರೆಸಲಿದೆ. ಅತ್ತ ವೆಸ್ಟ್ ಇಂಡೀಸ್​ಗೆ ಈ ಟೆಸ್ಟ್ ಬಹುಮುಖ್ಯವಾಗಿದ್ದು, ತವರಿನಲ್ಲಿ ಮಾನ ಉಳಿಸಿಕೊಳ್ಳಲು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಅನುಮಾನ ಎನ್ನಲಾಗುತ್ತಿದೆ. ಮುಖೇಶ್ ಕುಮಾರ್ ಮತ್ತು ನವ್​ದೀಪ್ ಸೈನಿ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಮೊದಲ ಟೆಸ್ಟ್​ನಲ್ಲಿ ವೈಫಲ್ಯ ಅನುಭವಿಸಿರುವ ಶುಭ್​ಮನ್ ಗಿಲ್​ಗೆ ಮತ್ತೊಂದು ಅವಕಾಶ ಸಿಗಬಹುದು. ಕಳೆದ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಯಶಸ್ವಿ ಜೈಸ್ವಾಲ್ ಹಾಗೂ ಇಶಾನ್ ಕಿಶನ್ ಮೇಲೆ ಮತ್ತಷ್ಟು ನಿರೀಕ್ಷೆಯಿದೆ.

ಇದನ್ನೂ ಓದಿ
Ashes 2023: 600 ಟೆಸ್ಟ್ ವಿಕೆಟ್; ಆ್ಯಶಸ್​ನಲ್ಲಿ ಮತ್ತೊಂದು ದಾಖಲೆ ಬರೆದ ಸ್ಟುವರ್ಟ್ ಬ್ರಾಡ್..!
IND vs WI: ಇಂಡೊ-ವಿಂಡೀಸ್ 2ನೇ ಟೆಸ್ಟ್​: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Asia Cup 2023: 15 ದಿನಗಳಲ್ಲಿ ಭಾರತ-ಪಾಕಿಸ್ತಾನ್​ 3 ಬಾರಿ ಮುಖಾಮುಖಿ..?
Virat Kohli: ವಿಶ್ವ ದಾಖಲೆಯೊಂದಿಗೆ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

India A vs Pakistan A: ಸಾಯಿ ಸೆಂಚುರಿ: ಪಾಕಿಸ್ತಾನವನ್ನು ಬಗ್ಗು ಬಡಿದ ಭಾರತ

ವೆಸ್ಟ್ ಇಂಡೀಸ್ ತಂಡದಲ್ಲಿ ಬದಲಾವಣೆ ಖಚಿತ ಎನ್ನಬಹುದು. ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾಗಗಳಲ್ಲಿ ಹೊಸ ಮುಖಗಳನ್ನು ಕಾಣುವ ಸಾಧ್ಯತೆ ಇದೆ. ವಿಂಡೀಸ್​ಗೆ ಕ್ರೀಸ್ ಕಚ್ಚಿ ನಿಂತು ಆಡುವ ಆಟಗಾರನ ಅವಶ್ಯಕತೆಯಿದೆ. ವಿಶೇಷ ಎಂದರೆ ಅಂಕಿ ಅಂಶಗಳನ್ನು ಗಮನಿಸಿದರೆ ಭಾರತ ವಿರುದ್ಧ ವೆಸ್ಟ್ ಇಂಡೀಸ್ ಮೇಲುಗೈ ಸಾಧಿಸಿದೆ. ಈವರೆಗಿನ 51 ಟೆಸ್ಟ್ ಪಂದ್ಯಗಳಲ್ಲಿ ಭಾರತ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ವಿಂಡೀಸ್ 16 ಪಂದ್ಯಗಳಲ್ಲಿ ಜಯ ಸಾಧಿಸಿದೆ. 26 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ಎರಡನೇ ಟೆಸ್ಟ್ ಸ್ಥಳೀಯ ಕಾಲಮಾನದ ಪ್ರಕಾರ 9:30 AM ಹಾಗೂ ಭಾರತೀಯ ಕಾಲಮಾನದ ಪ್ರಕಾರ 7.30 PM ರಿಂದ ಪ್ರಾರಂಭವಾಗಲಿದೆ. ದೂರದರ್ಶನ (ಡಿಡಿ) ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಲೈವ್ ವೀಕ್ಷಿಸಬಹುದು. ಅಂತೆಯೆ ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್​ಗಳಲ್ಲಿ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಇರಲಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.

ವೆಸ್ಟ್ ಇಂಡೀಸ್ ತಂಡ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜರ್ಮೈನ್ ಬ್ಲಾಕ್‌ವುಡ್ (ಉಪನಾಯಕ), ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲಿಕ್ ಅಥಾನಾಜೆ, ರಹಕೀಮ್ ಕಾರ್ನ್‌ವಾಲ್, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಝಾರಿ ಜೋಸೆಫ್, ರೇಮನ್ ರೈಫರ್, ಕೆಮರ್ ರೋಚ್, ತೇಜ್​ನರೈನ್ ಚಂದ್ರಪಾಲ್, ಕಿರ್ಕ್ ಮೆಕ್​ಕೆಂಝಿ, ಜೊಮೆಲ್ ವಾರ್ರಿಕನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ