WI vs IND 1st T20I: ಇಂದು ಭಾರತ-ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯ: ಪಾಂಡ್ಯ ಪಡೆಯ ಪ್ಲಾನ್ ಏನು?

IND vs WI 1st T20I: ಇಂದು ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ರೋಹಿತ್, ಕೊಹ್ಲಿ, ಸಿರಾಜ್, ಜಡೇಜಾ ರಂತಹ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಹೆಚ್ಚು ಯುವ ಆಟಗಾರರಿಂದಲೇ ಕೂಡಿದೆ.

WI vs IND 1st T20I: ಇಂದು ಭಾರತ-ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯ: ಪಾಂಡ್ಯ ಪಡೆಯ ಪ್ಲಾನ್ ಏನು?
IND vs WI 2nd T20I
Follow us
Vinay Bhat
|

Updated on: Aug 03, 2023 | 7:21 AM

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ (India vs West Indies) ಕ್ರಿಕೆಟ್ ತಂಡ ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈಗಾಗಲೇ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಹಾಗೂ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ (Team India) ಟಿ20 ಸರಣಿ ಮೇಲೂ ಕಣ್ಣಿಟ್ಟಿದೆ. ಇಂದು ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ರೋಹಿತ್, ಕೊಹ್ಲಿ (Virat Kohli), ಸಿರಾಜ್, ಜಡೇಜಾ ರಂತಹ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಹೆಚ್ಚು ಯುವ ಆಟಗಾರರಿಂದಲೇ ಕೂಡಿದೆ.

ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ್ದ ಯಶಸ್ವಿ ಜೈಸ್ವಾಲ್ ಟಿ20 ಸರಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದು ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಶುಭ್​ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡಬಹುದು. ಸೂರ್ಯಕುಮಾರ್ ಯಾದವ್ ಮಹತ್ವದ ಪಾತ್ರವಹಿಸಲಿದ್ದಾರೆ. ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಇದ್ದು ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಮತ್ತೊಬ್ಬ ಆಲ್ರೌಂಡರ್ ಆಗಿ ಅಕ್ಷರ್ ಪಟೇಲ್ ಇದ್ದಾರೆ.

Smriti Mandhana: ದಿ ಹಂಡ್ರೆಡ್ ಲೀಗ್​ನಲ್ಲಿ ಅಬ್ಬರಿಸಿದ ಸ್ಮೃತಿ ಮಂಧಾನ

ಇದನ್ನೂ ಓದಿ
Image
Asia Cup 2023: ಏಷ್ಯಾಕಪ್​ಗೆ ರಾಹುಲ್- ಶ್ರೇಯಸ್ ಡೌಟ್! ಬಿಸಿಸಿಐಗೆ ತಲೆನೋವಾದ ತಂಡದ ಮಧ್ಯಮ ಕ್ರಮಾಂಕ
Image
IND vs WI 1st T20: ಭಾರತ-ವೆಸ್ಟ್ ಇಂಡೀಸ್ ಟಿ20: ಎಷ್ಟು ಗಂಟೆಗೆ ಶುರು? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
Image
ICC Test Rankings: ಟೆಸ್ಟ್ ಬೌಲರ್​ಗಳ ರ‍್ಯಾಂಕಿಂಗ್: ಅಗ್ರ ಹತ್ತರಲ್ಲಿ ಮೂವರು ಭಾರತೀಯರಿಗೆ ಸ್ಥಾನ
Image
Asia Cup 2023: ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನ್ ತಂಡದ ಮಾಸ್ಟರ್​ ಪ್ಲ್ಯಾನ್

ಏಕದಿನ ಸರಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದ ಕುಲ್ದೀಪ್ ಯಾದವ್ ಟಿ20ಯಲ್ಲಿ ಕಣಕ್ಕಿಳಿಯುವುದು ಅನುಮಾನ. ಯುಜ್ವೇಂದ್ರ ಚಹಲ್​ಗೆ ಅವಕಾಶ ಸಿಗಬಹುದು. ಅರ್ಶ್​ದೀಪ್ ಸಿಂಗ್, ಉಮ್ರಾನ್ ಮಲಿಕ್ ಹಾಗೂ ಮುಖೇಶ್ ಕುಮಾರ್ ಪ್ರಮುಖ ವೇಗಿಗಳಾಗಿದ್ದಾರೆ. ಇವರ ಜೊತೆಗೆ ಆವೇಶ್ ಖಾನ್, ರವಿ ಬಿಷ್ಟೋಯಿ ಆಯ್ಕೆ ಕೂಡ ತಂಡಕ್ಕಿದೆ.

ಇತ್ತ ವಿಂಡೀಸ್ ಪರ ವಿಕೆಟ್ ಕೀಪರ್/ಬ್ಯಾಟ್ಸ್‌ಮನ್ ಶಾಯ್ ಹೋಪ್ ಮತ್ತು ವೇಗದ ಬೌಲರ್ ಇಶಾನೆ ಥೋಮಸ್ ಟಿ20 ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಟಿ20 ಸರಣಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದ ಶಿಮ್ರೋನ್ ಹೆಟ್ಮೆರ್ ಕೂಡ ಇದ್ದಾರೆ. ಇವರು ಆಗಸ್ಟ್ 2022 ರಲ್ಲಿ, ನ್ಯೂಜಿಲೆಂಡ್ ವಿರುದ್ಧದ ಟಿ20 ಯಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಭರ್ಜರಿ ಫಾರ್ಮ್​ನಲ್ಲಿರುವ ಸ್ಫೋಟಕ ಬ್ಯಾಟರ್ ನಿಕೋಲಸ್ ಪೂರನ್ ತಂಡ ಸೇರಿಕೊಂಡಿದ್ದಾರೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ FanCode ಮತ್ತು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್.

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಶಿಮ್ರೋನ್ ಹೆಟ್ಮೆರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ಒಶಾನೆ ಥೋಮಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ