IND vs BAN: 2ನೇ ಟೆಸ್ಟ್‌ಗೆ ಭಾರತ ತಂಡ ಪ್ರಕಟ
India vs Bangladesh: ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ ಅಶ್ವಿನ್ (113) ಅವರ ಶತಕದ ನೆರವಿನಿಂದ 376 ರನ್ ಕಲೆಹಾಕಿತು.
ಬಾಂಗ್ಲಾದೇಶ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾದ 16 ಸದಸ್ಯರನ್ನೇ ದ್ವಿತೀಯ ಪಂದ್ಯಕ್ಕೂ ಮುಂದುವರೆಸಲಾಗಿದ್ದು,. ಹೀಗಾಗಿ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದಕ್ಕೂ ಮುನ್ನ ಮೊದಲ ಪಂದ್ಯಕ್ಕಾಗಿ ಮಾತ್ರ ಭಾರತ ತಂಡವನ್ನು ಘೋಷಿಸಲಾಗಿತ್ತು.
ಹೀಗಾಗಿ ದುಲೀಪ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರು ದ್ವಿತೀಯ ಟೆಸ್ಟ್‌ಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೀಗ ಮೊದಲ ಪಂದ್ಯಕ್ಕೆ ಆಯ್ಕೆಯಾದ ಬಳಗವನ್ನೇ ಮುಂದುವರೆಸುವುದಾಗಿ ಬಿಸಿಸಿಐ ತಿಳಿಸಿದೆ. ಹೀಗಾಗಿ ಕಾನ್ಪುರದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಕಂಡು ಬರುವುದಿಲ್ಲ.
ದ್ವಿತೀಯ ಟೆಸ್ಟ್ ಯಾವಾಗ ಶುರು?
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ಇನ್ನು ಸರಣಿ ಡ್ರಾ ಮಾಡಿಕೊಳ್ಳಬೇಕಿದ್ದರೆ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಗೆಲ್ಲಲೇಬೇಕು. ಹೀಗಾಗಿ ಈ ಪಂದ್ಯವು ಪ್ರವಾಸಿ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಟೀಮ್ ಇಂಡಿಯಾ ಪರಾಕ್ರಮ:
ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ ಅಶ್ವಿನ್ (113) ಅವರ ಶತಕದ ನೆರವಿನಿಂದ 376 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಬಾಂಗ್ಲಾದೇಶ್ ತಂಡವು ಕೇವಲ 149 ರನ್ಗಳಿಗೆ ಆಲೌಟ್ ಆಗಿದೆ.
ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತದ ಪರ ಶುಭ್ಮನ್ ಗಿಲ್ (119) ಹಾಗೂ ರಿಷಭ್ ಪಂತ್ (109) ಶತಕ ಬಾರಿಸಿ ಮಿಂಚಿದ್ದರು. ಅಲ್ಲದೆ 4 ವಿಕೆಟ್ ನಷ್ಟದೊಂದಿಗೆ 287 ರನ್ಗಳಿಸಿ ಟೀಮ್ ಇಂಡಿಯಾ ಡಿಕ್ಲೇರ್ ಘೋಷಿಸಿದೆ.
ಇದನ್ನೂ ಓದಿ: Team India: ಟೆಸ್ಟ್‌ನಲ್ಲಿ ಸೋಲನ್ನೇ ಸೋಲಿಸಿದ ಟೀಮ್ ಇಂಡಿಯಾ
ಅತ್ತ ಮೊದಲ ಇನಿಂಗ್ಸ್ನಲ್ಲಿ 227 ರನ್ಗಳ ಹಿನ್ನಡೆ ಅನುಭವಿಸಿದ್ದ ಬಾಂಗ್ಲಾದೇಶ್ ತಂಡವು ಕೊನೆಯ ಇನಿಂಗ್ಸ್ನಲ್ಲಿ 515 ರನ್ಗಳ ಗುರಿ ಪಡೆಯಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಬಾಂಗ್ಲಾ ತಂಡವು 234 ರನ್ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನು 280 ರನ್ಗಳ ಅಂತರದಿಂದ ಗೆದ್ದುಕೊಂಡಿದೆ.
ದ್ವಿತೀಯ ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.