IND vs SA: ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; ಧವನ್ಗೆ ನಾಯಕತ್ವ, ಹೊಸಬರಿಗೆ ಅವಕಾಶ
IND vs SA: ಆಫ್ರಿಕಾ ವಿರುದ್ಧದ ಟಿ20 ಸರಣಿ ಬಳಿಕ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಗಾಗಿ ಬಿಸಿಸಿಐ ಆಯ್ಕೆ ಸಮಿತಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ.

ಆಫ್ರಿಕಾ ವಿರುದ್ಧದ ಟಿ20 ಸರಣಿ ಬಳಿಕ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಗಾಗಿ ಬಿಸಿಸಿಐ (BCCI) ಆಯ್ಕೆ ಸಮಿತಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಶಿಖರ್ ಧವನ್ (Shikhar Dhawan) ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಏಕದಿನ ಸರಣಿಯಲ್ಲಿ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಮೊದಲ ಬಾರಿಗೆ ಇಬ್ಬರು ಆಟಗಾರರಿಗೆ ಅವಕಾಶ ಸಿಕ್ಕಿದೆ. ಸದ್ಯ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 3 ಟಿ20 ಪಂದ್ಯಗಳ ಸರಣಿ ನಡೆಯುತ್ತಿದ್ದು, ಭಾರತ 1-0 ಮುನ್ನಡೆ ಸಾಧಿಸಿದ್ದು, ಎರಡನೇ ಪಂದ್ಯ ಭಾನುವಾರ ಗುವಾಹಟಿಯಲ್ಲಿ ನಡೆಯಲಿದೆ. ಏತನ್ಮಧ್ಯೆ, ಮಂಡಳಿಯು ಸಂಜೆ ತಡವಾಗಿ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದ್ದು, ಅಕ್ಟೋಬರ್ 6 ರಿಂದ ಸರಣಿ ಆರಂಭವಾಗಲಿದೆ.
ಏಕದಿನ ಸರಣಿಗೆ ಆಯ್ಕೆಯಾದ ತಂಡದಲ್ಲಿ ಮುಖೇಶ್ ಕುಮಾರ್, ರಜತ್ ಪಾಟಿದಾರ್ ಮತ್ತು ಶಹಬಾಜ್ ನದೀಮ್ ಅವರ ಹೆಸರುಗಳು ಅಚ್ಚರಿ ಮೂಡಿಸಿವೆ. ಅದೆ ಬಹುನಿರೀಕ್ಷಿತ ಹೆಸರಾದ ಮೊಹಮ್ಮದ್ ಶಮಿ ಈ ಟೂರ್ನಿಯಲ್ಲೂ ಅವಕಾಶ ಪಡೆದಿಲ್ಲ. ಮುಖೇಶ್ ಕುಮಾರ್ಗೆ ಟೀಂ ಇಂಡಿಯಾದ ಬಾಗಿಲು ತೆರೆದಿದೆ. ಇದೇ ವೇಳೆ ಶಹಬಾಜ್ ಅಹ್ಮದ್ ಕೂಡ ಚೊಚ್ಚಲ ಬಾರಿಗೆ ಏಕದಿನ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ಮೂವರು ಮೀಸಲು ಆಟಗಾರರಿಗೆ ಅವಕಾಶ
ಈ ವರ್ಷ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರರಾಗಿ ಆಯ್ಕೆಯಾಗಿರುವ 3 ಆಟಗಾರರಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವಕಾಶ ಸಿಕ್ಕಿದೆ. ಟಿ20 ವಿಶ್ವಕಪ್ ತಂಡದಲ್ಲಿ 4 ಆಟಗಾರರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಿದ್ದು, ಅದರಲ್ಲಿ ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ ಮತ್ತು ರವಿ ಬಿಷ್ಣೋಯ್ ಈ ಸರಣಿಯಲ್ಲಿ ಆಡಲಿದ್ದಾರೆ.
ಮೊಹಮ್ಮದ್ ಶಮಿ ಔಟ್
ಈ ಸರಣಿಯಲ್ಲಿ ಮೊಹಮ್ಮದ್ ಶಮಿಗೆ ಅವಕಾಶ ಸಿಕ್ಕಿಲ್ಲ. ಹೀಗಿರುವಾಗ ಸಂಪೂರ್ಣ ಫಿಟ್ ಆಗಿರುವ ಅವರು ಟೀಂ ಇಂಡಿಯಾ ಜೊತೆ ವಿಶ್ವಕಪ್ಗೆ ಆಸ್ಟ್ರೇಲಿಯಕ್ಕೆ ತೆರಳಲಿದ್ದಾರೆ ಎಂಬ ಊಹಾಪೋಹ ಹಬ್ಬಿದೆ. ಕೊರೊನಾದಿಂದಾಗಿ ಅವರು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು, ಆದರೆ ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಇಂದಿನಿಂದ ಅಭ್ಯಾಸ ಕೂಡ ಆರಂಭಿಸಿದ್ದಾರೆ
? NEWS ?: India’s squad for ODI series against South Africa announced. #TeamIndia | #INDvSA | @mastercardindia
— BCCI (@BCCI) October 2, 2022
ಭಾರತ ಏಕದಿನ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದುಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್
Published On - 6:32 pm, Sun, 2 October 22
