India Squad: ಭಾರತ ಮಹಿಳಾ ತಂಡ ಪ್ರಕಟ: ಕನ್ನಡತಿ ಆಯ್ಕೆ
India Womens Squad: ಏಕದಿನ ಹಾಗೂ ಟಿ20 ತಂಡಗಳನ್ನು ಎಂದಿನಂತೆ ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್ಗಳಾಗಿ ಎರಡೂ ತಂಡಗಳಲ್ಲೂ ಯಾಸ್ತಿಕಾ ಭಾಟಿಯಾ ಹಾಗೂ ರಿಚಾ ಘೋಷ್ ಆಯ್ಕೆಯಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್ಗಳ ಸರಣಿಗಾಗಿ ಭಾರತ ಮಹಿಳಾ ತಂಡವನ್ನು (India Womens Squad) ಪ್ರಕಟಿಸಲಾಗಿದೆ. ಒಟ್ಟು 6 ಪಂದ್ಯಗಳ ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡಗಳಲ್ಲಿ ಕರ್ನಾಟಕದ ಯುವ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಸ್ಥಾನ ಪಡೆದಿದ್ದಾರೆ. ಶ್ರೇಯಾಂಕಾ ಈ ಹಿಂದೆಯೇ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು. ಆದರೀಗ ಏಕದಿನ ತಂಡದಲ್ಲೂ ಅವಕಾಶ ದೊರೆತಿರುವುದು ವಿಶೇಷ.
ಇನ್ನು ಏಕದಿನ ಹಾಗೂ ಟಿ20 ತಂಡಗಳನ್ನು ಎಂದಿನಂತೆ ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್ಗಳಾಗಿ ಎರಡೂ ತಂಡಗಳಲ್ಲೂ ಯಾಸ್ತಿಕಾ ಭಾಟಿಯಾ ಹಾಗೂ ರಿಚಾ ಘೋಷ್ ಆಯ್ಕೆಯಾಗಿದ್ದಾರೆ.
ಭಾರತ-ಆಸ್ಟ್ರೇಲಿಯಾ ವೇಳಾಪಟ್ಟಿ:
ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಣ ಸರಣಿಯು ಡಿಸೆಂಬರ್ 28 ರಿಂದ ಶುರುವಾಗಲಿದೆ. ಈ ಸರಣಿಯ ಮೂರು ಪಂದ್ಯಗಳು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಜನವರಿ 5 ರಿಂದ ಟಿ20 ಸರಣಿ ಶುರುವಾಗಲಿದ್ದು, ಈ ಸರಣಿಯ ಎಲ್ಲಾ ಪಂದ್ಯಗಳಿಗೆ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಭಾರತ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರೊಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್ ಕೌರ್, ಶ್ರೇಯಾಂಕ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್.
ಇದನ್ನೂ ಓದಿ: IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!
ಭಾರತ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರೊಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ.
ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ | ||||
S. No. | ದಿನಾಂಕ | ಸಮಯ | ಪಂದ್ಯ | ಸ್ಥಳ |
1 | 28-ಡಿಸೆಂಬರ್-23 | 01.30 PM IST | ODI | ವಾಂಖೆಡೆ ಸ್ಡೇಡಿಯಂ, ಮುಂಬೈ |
2 | 30-ಡಿಸೆಂಬರ್-23 | 01.30 PM IST | ODI | ವಾಂಖೆಡೆ ಸ್ಡೇಡಿಯಂ, ಮುಂಬೈ |
3 | 02-ಜನವರಿ-24 | 01.30 PM IST | ODI | ವಾಂಖೆಡೆ ಸ್ಡೇಡಿಯಂ, ಮುಂಬೈ |
ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ | ||||
1 | 05-ಜನವರಿ-24 | 07.00 PM IST | T20I | ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ |
2 | 07-ಜನವರಿ-24 | 07.00 PM IST | T20I | ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ |
3 | 09-ಜನವರಿ-24 | 07.00 PM IST | T20I | ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ |
Published On - 7:26 am, Tue, 26 December 23