ಪಾಕ್ ಪಡೆಗೆ ಹೀನಾಯ ಸೋಲು: ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್

WTC 2025: ಒಂದು ವೇಳೆ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನ್ ತಂಡವನ್ನು ಈ ಸರಣಿಯಲ್ಲಿ ವೈಟ್ ವಾಶ್ ಮಾಡಿದರೆ ಪ್ಯಾಟ್ ಕಮಿನ್ಸ್ ಪಡೆ ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಮೇಲೇರಲಿದೆ. ಅತ್ತ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಖಾತೆ ತೆರೆಯಲು ಸೌತ್ ಆಫ್ರಿಕಾ ಕೂಡ ಸಜ್ಜಾಗಿದೆ.

ಪಾಕ್ ಪಡೆಗೆ ಹೀನಾಯ ಸೋಲು: ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್
IND - PAK
Edited By:

Updated on: Dec 18, 2023 | 8:57 AM

ಪರ್ತ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 487 ರನ್ ಪೇರಿಸಿದರೆ, ಪಾಕಿಸ್ತಾನ್ 271 ರನ್​ಗಳಿಗೆ ಆಲೌಟ್ ಆಯಿತು.
ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟದೊಂದಿಗೆ 233 ರನ್​ ಬಾರಿಸಿ ಆಸ್ಟ್ರೇಲಿಯಾ ಡಿಕ್ಲೇರ್ ಮಾಡಿಕೊಂಡಿತು. ಅದರಂತೆ ದ್ವಿತೀಯ ಇನಿಂಗ್ಸ್​ನಲ್ಲಿ 449 ರನ್​ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು ಕೇವಲ 89 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು 360 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್:

ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ್ ತಂಡವು ಹೀನಾಯವಾಗಿ ಸೋತಿರುವುದು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಪಾಯಿಂಟ್ಸ್​ ಟೇಬಲ್​ನಲ್ಲಿ ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯಕ್ಕೂ ಮುನ್ನ ಪಾಕ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು.
ಇದೀಗ ಹೀನಾಯ ಸೋಲಿನೊಂದಿಗೆ ಪಾಕ್ ತಂಡ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಇತ್ತ 2ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ.

ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಭಾರತ ತಂಡ ಗೆಲುವಿನ ಶೇಕಡಾವಾರು 66.67 ಹೊಂದಿದ್ದರೆ, ಪಾಕಿಸ್ತಾನ್ ತಂಡ ಕೂಡ 66.67% ಹೊಂದಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಮತ್ತೆ ಅಗ್ರಸ್ಥಾನಕ್ಕೇರಲು ಪಾಕ್ ತಂಡಕ್ಕೆ ಉತ್ತಮ ಅವಕಾಶವಿದೆ.

ಇದನ್ನೂ ಓದಿ: IPL 2024 Auction: ಮೊದಲ ಸುತ್ತಿನಲ್ಲಿ ಹರಾಜಾಗುವ ಆಟಗಾರರು ಯಾರು ಗೊತ್ತಾ?

ಆದರೆ ಇತ್ತ ಟೀಮ್ ಇಂಡಿಯಾ ಕೂಡ ಡಿಸೆಂಬರ್ ತಿಂಗಳಾಂತ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮೂಲಕ ಪಾಕಿಸ್ತಾನ್ ಅಗ್ರಸ್ಥಾನ ಅಲಂಕರಿಸಿದರೂ, ಟೀಮ್ ಇಂಡಿಯಾಗೆ ಮತ್ತೆ ನಂಬರ್ ಸ್ಥಾನಕ್ಕೇರಲು ಅವಕಾಶ ಇರಲಿದೆ.

ಒಂದು ವೇಳೆ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನ್ ತಂಡವನ್ನು ಈ ಸರಣಿಯಲ್ಲಿ ವೈಟ್ ವಾಶ್ ಮಾಡಿದರೆ ಪ್ಯಾಟ್ ಕಮಿನ್ಸ್ ಪಡೆ ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಮೇಲೇರಲಿದೆ. ಅತ್ತ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಖಾತೆ ತೆರೆಯಲು ಸೌತ್ ಆಫ್ರಿಕಾ ಕೂಡ ಸಜ್ಜಾಗಿದೆ. ಹೀಗಾಗಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಟೆಸ್ಟ್ ಸರಣಿಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ಸ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ ತರಬಹುದು.