AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಅಡಿಲೇಡ್‌ ಟೆಸ್ಟ್; ಆಸ್ಟ್ರೇಲಿಯಾಕ್ಕೆ ಮೊದಲ ದಿನದ ಗೌರವ

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಡಿಲೇಡ್ ಡೇ-ನೈಟ್ ಟೆಸ್ಟ್‌ನ ಮೊದಲ ದಿನದ ಆಟ ಅಂತ್ಯಗೊಂಡಿದ್ದು, ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ಒಂದು ವಿಕೆಟ್ ನಷ್ಟದಲ್ಲಿ 86 ರನ್ ಗಳಿಸಿದೆ. ಇನ್ನು ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 180 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ನಿತೀಶ್ 942) ರಾಹುಲ್ (37) ಮತ್ತು ಗಿಲ್ (31) ಮಾತ್ರ ಕೊಂಚ ಗಮನಾರ್ಹ ಪ್ರದರ್ಶನ ನೀಡಿದರು.

IND vs AUS: ಅಡಿಲೇಡ್‌ ಟೆಸ್ಟ್; ಆಸ್ಟ್ರೇಲಿಯಾಕ್ಕೆ ಮೊದಲ ದಿನದ ಗೌರವ
ಆಸ್ಟ್ರೇಲಿಯಾ ತಂಡ
ಪೃಥ್ವಿಶಂಕರ
|

Updated on:Dec 06, 2024 | 5:29 PM

Share

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಂದಿನಿಂದ ಆರಂಭವಾಗಿರುವ ಅಡಿಲೇಡ್ ಡೇ ನೈಟ್ ಟೆಸ್ಟ್‌ನ ಮೊದಲ ದಿನದ ಆಟ ಮುಕ್ತಾಯಗೊಂಡಿದೆ. ಈ ಮೊದಲ ದಿನದಾಟದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 180 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ದಿನದಾಟದ ಅಂತ್ಯಕ್ಕೆ ತನ್ನ ಮೊದಲ ಇನಿಂಗ್ಸ್‌ನಲ್ಲಿ ಒಂದು ವಿಕೆಟ್‌ಗೆ 86 ರನ್ ಗಳಿಸಿದೆ. ಸದ್ಯ ಮಾರ್ನಸ್ ಲಬುಶೇನ್ 20 ರನ್ ಹಾಗೂ ನಾಥನ್ ಮೆಕ್‌ಸ್ವೀನಿ 38 ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಇವರಿಬ್ಬರ ನಡುವೆ ಇದುವರೆಗೆ 62 ರನ್‌ಗಳ ಜೊತೆಯಾಟವಿದೆ. ಆಸ್ಟ್ರೇಲಿಯಾ ದಿನದಾಟದಂತ್ಯಕ್ಕೆ ಕೇವಲ 1 ವಿಕೆಟ್ ಕಳೆದುಕೊಂಡಿದ್ದು, ಆರಂಭಿಕ ಉಸ್ಮಾನ್ ಖವಾಜಾ ಜಸ್ಪ್ರೀತ್ ಬುಮ್ರಾ ಬೌಲಿಂಗ್​ನಲ್ಲಿ ರೋಹಿತ್ ಶರ್ಮಾಗೆ ಕ್ಯಾಚಿತ್ತು ನಿರ್ಗಮಿಸಿದರು.

ಭಾರತಕ್ಕೆ ಕಳಪೆ ಆರಂಭ

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಯಶಸ್ವಿ ಪಂದ್ಯದ ಮೊದಲ ಎಸೆತದಲ್ಲೇ ಎಲ್‌ಬಿಡಬ್ಲ್ಯೂ ಆಗಿ ಔಟಾದರು. ಅವರು ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಇದಾದ ಬಳಿಕ ಕೆಎಲ್ ರಾಹುಲ್ ಮತ್ತು ಶುಭ್​ಮನ್ ಗಿಲ್ ನಡುವೆ ಎರಡನೇ ವಿಕೆಟ್‌ಗೆ 69 ರನ್‌ಗಳ ಜೊತೆಯಾಟವಿತ್ತು. ಸ್ಟಾರ್ಕ್ ಈ ಜೊತೆಯಾಟವನ್ನು ಮುರಿದರು. ಆರಂಭಿಕ ರಾಹುಲ್ 37 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

ಮಧ್ಯಮ ಕ್ರಮಾಂಕದ ವೈಫಲ್ಯ

ರಾಹುಲ್ ಔಟಾದ ಕೂಡಲೇ ಟೀಂ ಇಂಡಿಯಾದ ವಿಕೆಟ್‌ಗಳ ಸುರಿಮಳೆಯಾಯಿತು. 4ನೇ ಕ್ರಮಾಂಕದಲ್ಲಿ ಬಂದ ವಿರಾಟ್ ಕೊಹ್ಲಿ ಏಳು ರನ್ ಗಳಿಸಿ ಔಟಾದರೆ, ಶುಭ್​ಮನ್ ಗಿಲ್ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕ ರೋಹಿತ್ ಶರ್ಮಾ ಮೂರು ರನ್ ಗಳಿಸಿ ಔಟಾದರು. ಒಂದು ಸಮಯದಲ್ಲಿ ಭಾರತದ ಸ್ಕೋರ್ ಒಂದು ವಿಕೆಟ್‌ಗೆ 69 ರನ್ ಆಗಿದ್ದರೆ, ಸ್ವಲ್ಪ ಸಮಯದ ನಂತರ ಅದು ಐದು ವಿಕೆಟ್‌ಗೆ 87 ರನ್ ಆಯಿತು. ಅಂದರೆ ಭಾರತ 18 ರನ್ ಗಳಿಸುವಷ್ಟರಲ್ಲಿ ಇನ್ನೂ ನಾಲ್ಕು ವಿಕೆಟ್ ಕಳೆದುಕೊಂಡಿತ್ತು.

ನಿತೀಶ್ ಏಕಾಂಗಿ ಹೋರಾಟ

ಇದಾದ ಬಳಿಕ ರಿಷಬ್ ಪಂತ್ ಕೂಡ 21 ರನ್ ಗಳಿಸಿ ಔಟಾದರು. ಅಶ್ವಿನ್, ನಿತೀಶ್ ರೆಡ್ಡಿ ಅವರೊಂದಿಗೆ ಇನ್ನಿಂಗ್ಸ್ ನಿಭಾಯಿಸಲು ಪ್ರಯತ್ನಿಸಿದರು ಮತ್ತು ಏಳನೇ ವಿಕೆಟ್‌ಗೆ 32 ರನ್‌ಗಳ ಜೊತೆಯಾಟವನ್ನು ಮಾಡಿದರು. ಆದರೆ ಮತ್ತೆ ದಾಳಿಗಿಳಿದ ಸ್ಟಾರ್ಕ್ ಅಶ್ವಿನ್ ವಿಕೆಟ್ ಉರುಳಿಸಿ ಈ ಜೊತೆಯಾಟ ಮುರಿದರು. ಹರ್ಷಿತ್ ರಾಣಾ ಮತ್ತು ಜಸ್ಪ್ರೀತ್ ಬುಮ್ರಾ ಖಾತೆ ತೆರೆಯದೆ ಔಟಾದರು. ಕೊನೆಯಲ್ಲಿ 54 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 42 ರನ್ ಗಳಿಸಿದ ನಿತೀಶ್ ಸ್ಟಾರ್ಕ್‌ಗೆ ಆರನೇ ಬಲಿಯಾಗುವ ಮೂಲಕ ಭಾರತದ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Fri, 6 December 24

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ