IND vs AUS: ಬ್ರಿಸ್ಬೇನ್ ಟೆಸ್ಟ್​ಗೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ

India's Likely Playing XI for Gabba Test: ಭಾರತದ ಆಸ್ಟ್ರೇಲಿಯಾ ಪ್ರವಾಸದ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಅಶ್ವಿನ್ ಮತ್ತು ಹರ್ಷಿತ್ ರಾಣಾ ಅವರನ್ನು ತಂಡದಿಂದ ಕೈಬಿಟ್ಟು ವಾಷಿಂಗ್ಟನ್ ಸುಂದರ್ ಮತ್ತು ಆಕಾಶ್ ದೀಪ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳಿವೆ. ಇದರ ಜೊತೆಗೆ 3ನೇ ಟೆಸ್ಟ್​ಗೆ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ.

IND vs AUS: ಬ್ರಿಸ್ಬೇನ್ ಟೆಸ್ಟ್​ಗೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Dec 13, 2024 | 4:34 PM

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗಾಗಿ ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಡಿರುವ ಎರಡು ಪಂದ್ಯಗಳಲ್ಲಿ ಗೆಲುವು- ಸೋಲಿನ ರುಚಿಕಂಡಿದೆ. ಹೀಗಾಗಿ ನಾಳೆಯಿಂದ ನಡೆಯಲ್ಲಿರುವ ಮೂರನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ ಇದೆ. ಏಕೆಂದರೆ ಈ ಟೆಸ್ಟ್ ಪಂದ್ಯದ ಸೋಲು- ಗೆಲುವಿನ ಮೇಲೆ ರೋಹಿತ್ ಪಡೆಯ ಡಬ್ಲ್ಯುಟಿಸಿ ಫೈನಲ್ ಹಾದಿ ನಿರ್ಧಾರವಾಗಲಿದೆ. ಹೀಗಾಗಿ ಬ್ರಿಸ್ಬೇನ್​ನಲ್ಲಿ ನಡೆಯಲ್ಲಿರುವ 3ನೇ ಟೆಸ್ಟ್ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಂಬ ಇರಾದೆಯಲ್ಲಿರುವ ನಾಯಕ ರೋಹಿತ್ ಶರ್ಮಾ, ತಂಡದಲ್ಲಿ ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳು ಈಗಾಗಲೇ ಗೋಚರಿಸಿವೆ. ಇದೀಗ ಹೊರಬಿದ್ದಿರುವ ತಾಜಾ ಮಾಹಿತಿಯ ಪ್ರಕಾರ, ಗಾಬಾ ಟೆಸ್ಟ್​ಗೆ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳಾಗುವ ಸಾಧ್ಯತೆಗಳಿದೆ ಎಂದು ವರದಿಯಾಗಿದೆ.

ಅಶ್ವಿನ್-ಹರ್ಷಿತ್​ಗೆ ಕೋಕ್?

ಬ್ರಿಸ್ಬೇನ್ ಟೆಸ್ಟ್ ಗೆದ್ದುಕೊಳ್ಳುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಲು ಹೊರಟಿರುವ ನಾಯಕ ರೋಹಿತ್ ಶರ್ಮಾ ಸಮತೋಲಿತ ತಂಡವನ್ನು ಕಣಕ್ಕಿಳಿಸಲು ಚಿಂತಿಸಿದ್ದಾರೆ. ಹೀಗಾಗಿ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆಗಳನ್ನು ಮಾಡಲಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಅನುಭವಿ ಸ್ಪಿನ್ನರ್‌ಗಳಾದ ಆರ್ ಅಶ್ವಿನ್ ಮತ್ತು ಹರ್ಷಿತ್ ರಾಣಾ ಅವರನ್ನು ಮೂರನೇ ಟೆಸ್ಟ್​ನಿಂದ ಕೈಬಿಡಲಾಗುತ್ತದೆ ಎಂದು ವರದಿಯಾಗಿದೆ.

ಅಶ್ವಿನ್ ಬದಲಿಗೆ ಕಳೆದ ಬಾರಿಯ ಪ್ರವಾಸದಲ್ಲಿ ಗಾಬಾ ಟೆಸ್ಟ್ ಗೆಲುವಿನ ಹೀರೋ ಆಗಿದ್ದ ವಾಷಿಂಗ್ಟನ್ ಸುಂದರ್ ಅವರನ್ನು ತಂಡದಲ್ಲಿ ಆಡಿಸುವ ಬಗ್ಗೆ ರೋಹಿತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2021 ರಲ್ಲಿ ಇದೇ ಮೈದಾನದಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದ ಸುಂದರ್, ಆ ಪಂದ್ಯದಲ್ಲಿ ಕ್ರಮವಾಗಿ 62 ಮತ್ತು 22 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು. ಇತ್ತ ಬೌಲಿಂಗ್​ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದ ಸುಂದರ್ 4 ಪ್ರಮುಖ ವಿಕೆಟ್​ಗಳನ್ನು ಉರುಳಿಸಿದ್ದರು. ಹೀಗಾಗಿ ಗಾಬಾದಲ್ಲಿ ಅವರು ಆಡುವುದು ಖಚಿತವಾಗಿದೆ.

ನಾಲ್ವರು ವೇಗಿಗಳೊಂದಿಗೆ ಕಣಕ್ಕೆ

ಹಾಗೆಯೇ ತಂಡದಲ್ಲಿ ಎರಡನೇ ಬದಲಾವಣೆಯಾಗಿ ಹರ್ಷಿತ್ ರಾಣಾ ಬದಲಿಗೆ ಆಕಾಶ್ ದೀಪ್ ಕಣಕ್ಕಿಳಿಯಬಹುದು. ವರದಿಯ ಪ್ರಕಾರ, ಬ್ರಿಸ್ಬೇನ್‌ನಲ್ಲಿ ನಡೆದ ನೆಟ್ ಸೆಷನ್‌ನಲ್ಲಿ ಹರ್ಷಿತ್ ಕಡಿಮೆ ಬೌಲಿಂಗ್ ಮಾಡಿದರು. ಆದರೆ ಆಕಾಶ್ ದೀಪ್ ಹೆಚ್ಚು ಬೌಲಿಂಗ್ ಅಭ್ಯಾಸ ಮಾಡಿದ್ದಾರೆ. ಜತೆಗೆ ಬ್ಯಾಟಿಂಗ್ ಅಭ್ಯಾಸ ಕೂಡ ನಡೆಸಿದ್ದಾರೆ. ಇದರ ಜೊತೆಗೆ ಬ್ರಿಸ್ಬೇನ್‌ನಲ್ಲಿ ವೇಗದ ಬೌಲರ್‌ಗಳು ಸಹಾಯ ಪಡೆಯುವ ನಿರೀಕ್ಷೆಯಿರುವ ಕಾರಣ ಟೀಂ ಇಂಡಿಯಾ 4 ವೇಗಿಗಳೊಂದಿಗೆ ಕಣಕ್ಕಿಳಿಯಬಹುದು ಎನ್ನಲಾಗುತ್ತಿದೆ.

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್