AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತ್ರಿವರ್ಣ ಧ್ವಜಕ್ಕೆ ಅವಮಾನ; ಖಲಿಸ್ತಾನ್ ಬೆಂಬಲಿಗರ ವಿರುದ್ಧ ತಿರುಗಿಬಿದ್ದ ಭಾರತೀಯರು

IND vs AUS: ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ವೇಳಿ ಖಲಿಸ್ತಾನಿ ಬೆಂಬಲಿಗರು ಮೈದಾನದ ಹೊರಗೆ ಗದ್ದಲ ಸೃಷ್ಟಿಸಿದ್ದಾರೆ. ಖಲಿಸ್ತಾನ್ ಬೆಂಬಲಿಗರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದು, ಭಾರತೀಯ ಅಭಿಮಾನಿಗಳು ಕೂಡ ಅವರಿಗೆ ತಕ್ಕ ತಿರುಗೇಟು ನೀಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

IND vs AUS: ತ್ರಿವರ್ಣ ಧ್ವಜಕ್ಕೆ ಅವಮಾನ; ಖಲಿಸ್ತಾನ್ ಬೆಂಬಲಿಗರ ವಿರುದ್ಧ ತಿರುಗಿಬಿದ್ದ ಭಾರತೀಯರು
ಭಾರತ- ಖಲಿಸ್ತಾನಿ ಬೆಂಬಲಿಗರು
ಪೃಥ್ವಿಶಂಕರ
|

Updated on: Dec 26, 2024 | 9:45 PM

Share

ಮೆಲ್ಬೋರ್ನ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಆಟಕ್ಕೆ ಸಂಬಂಧಿಸಿದಂತೆ ಚರ್ಚೆಯಾಗಿದ್ದಕ್ಕಿಂತ ಇತರ ಕಾರಣಗಳಿಗೆ ಸಾಕಷ್ಟು ಸುದ್ದಿಯಾಗುತ್ತಿದೆ. ಮೈದಾನದ ಒಳಗೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದರೆ, ಮತ್ತೊಂದೆಡೆ ಮೈದಾನದ ಹೊರಗೆ ಮೆಲ್ಬೋರ್ನ್‌ನಲ್ಲಿ ನೆಲೆಸಿರುವ ಭಾರತೀಯ ನಾಗರಿಕರು ಮತ್ತು ಖಲಿಸ್ತಾನ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾಹಿತಿಯ ಪ್ರಕಾರ, ಮೆಲ್ಬೋರ್ನ್ ಕ್ರಿಕೆಟ್ ಮೈದಾನದ ಹೊರಗೆ ಜಮಾಯಿಸಿದ್ದ ಅನೇಕ ಖಲಿಸ್ತಾನ್ ಬೆಂಬಲಿಗರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ. ಅವರನ್ನು ನೋಡಿ ಅಲ್ಲಿದ್ದ ಭಾರತೀಯ ಅಭಿಮಾನಿಗಳು ಕೂಡ ತ್ರಿವರ್ಣ ಧ್ವಜವನ್ನು ಬೀಸುವ ಮೂಲಕ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.

ಭಾರತೀಯರಿಂದ ತಕ್ಕ ತಿರುಗೇಟು

ವಾಸ್ತವವಾಗಿ ಇಂದಿನಿಂದ ಅಂದರೆ ಡಿಸೆಂಬರ್ 26 ರಿಂದ ಆರಂಭವಾಗಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಮೆಲ್ಬೋರ್ನ್ ಕ್ರಿಕೆಟ್ ಮೈದಾನಕ್ಕೆ ಆಗಮನಿಸಿದ್ದರು. ಆತಿಥೇಯ ಆಸ್ಟ್ರೇಲಿಯಾ ತಂಡದ ಅಭಿಮಾನಿಗಳು ಮಾತ್ರವಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಅಭಿಮಾನಿಗಳು ಕೂಡ ತ್ರಿವರ್ಣ ಧ್ವಜವನ್ನು ಹಿಡಿದು ಮೈದಾನಕ್ಕೆ ಬಂದಿದ್ದರು. ಅನೇಕ ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಉಪಸ್ಥಿತರಿದ್ದರು. ಈ ಸಮಯದಲ್ಲಿ ಕ್ರೀಡಾಂಗಣದ ಬಳಿಕ ಬಂದ ಕೆಲವು ಖಲಿಸ್ತಾನಿ ಬೆಂಬಲಿಗರು ತಮ್ಮ ಹಳದಿ ಧ್ವಜವನ್ನು ಪ್ರದರ್ಶಿಸುತ್ತಾ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ. ವರದಿಗಳ ಪ್ರಕಾರ, ಈ ಖಲಿಸ್ತಾನ್ ಬೆಂಬಲಿಗರು ಟಿಕೆಟ್ ಇಲ್ಲದೆ ಕ್ರೀಡಾಂಗಣಕ್ಕೆ ಪ್ರವೇಶಿಸಲು ಬಯಸಿದ್ದರು. ಆದರೆ ಭದ್ರತಾ ಸಿಬ್ಬಂದಿ ಅವರನ್ನು ತಡೆದಿದ್ದಾರೆ.

ತ್ರಿವರ್ಣ ಧ್ವಜಕ್ಕೂ ಅಪಮಾನ

ಮೈದಾನದೊಳಕ್ಕೆ ಪ್ರವೇಶಿಸಿ ಅಲ್ಲಿ ಭಾರತದ ವಿರುದ್ಧ ಘೋಷಣೆ ಕೂಗುವುದು ಅವರ ಯೋಜನೆಯಾಗಿತ್ತು. ಆದರೆ ಅದು ಸಾಧ್ಯವಾಗದಿದ್ದಾಗ ಕೆಲವು ಖಲಿಸ್ತಾನಿ ಬೆಂಬಲಿಗರು ಕ್ರೀಡಾಂಗಣದ ಹೊರಗೆ ಭಾರತದ ವಿರುದ್ಧ ಘೋಷಣೆಗಳನ್ನು ಕೂಗಿದಲ್ಲದೆ ಕೆಲವು ದುಷ್ಕರ್ಮಿಗಳು ಭಾರತದ ತ್ರಿವರ್ಣ ಧ್ವಜಕ್ಕೂ ಅಪಮಾನ ಮಾಡಿದ್ದಾರೆ. ಇದೆಲ್ಲವನ್ನು ನೋಡಿ ಅಲ್ಲಿದ್ದ ಅನೇಕ ಭಾರತೀಯ ಅಭಿಮಾನಿಗಳು ತಮ್ಮ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದು, ಖಲಿಸ್ತಾನ್ ಬೆಂಬಲಿಗರ ಸಮೀಪಕ್ಕೆ ಬಂದಿದ್ದಾರೆ. ಜೊತೆಗೆ ಖಲಿಸ್ತಾನಿ ಬೆಂಬಲಿಗರ ವಿರುದ್ಧ ತಾವು ಕೂಡ ಘೋಷಣೆಗಳನ್ನು ಕೂಗಿದ್ದಾರೆ. ಎರಡೂ ಕಡೆಯವರು ಪರಸ್ಪರ ಹತ್ತಿರ ಬಂದು ಪರಿಸ್ಥಿತಿ ಕೈ ಮೀರುವ ಮುನ್ನವೇ ಅಲ್ಲಿದ್ದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಖಾಲಿಸ್ತಾನಿ ಬೆಂಬಲಿಗರನ್ನು ಅಲ್ಲಿಂದ ಹೊರ ಹಾಕಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ