AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ- ಆಸೀಸ್ ಕೊನೆಯ ಟಿ20 ಪಂದ್ಯಕ್ಕೆ ಮಳೆಯಾತಂಕ

IND vs AUS 5th T20, Brisbane Weather Update: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ನವೆಂಬರ್ 8ರಂದು ಬ್ರಿಸ್ಬೇನ್‌ನಲ್ಲಿ ನಡೆಯಲಿದೆ. ಸರಣಿ ನಿರ್ಣಾಯಕವಾಗಿರುವ ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲು ಎರಡೂ ತಂಡಗಳು ಸಜ್ಜಾಗಿವೆ. ಆದರೆ, ಬ್ರಿಸ್ಬೇನ್‌ನಲ್ಲಿ ಮಳೆಯ ಆತಂಕ ಎದುರಾಗಿದೆ.

IND vs AUS: ಭಾರತ- ಆಸೀಸ್ ಕೊನೆಯ ಟಿ20 ಪಂದ್ಯಕ್ಕೆ ಮಳೆಯಾತಂಕ
Ind Vs Aus
ಪೃಥ್ವಿಶಂಕರ
|

Updated on:Nov 07, 2025 | 10:25 PM

Share

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ನವೆಂಬರ್ 8 ರ ಶನಿವಾರ ಬ್ರಿಸ್ಬೇನ್‌ನಲ್ಲಿ (Brisbane) ನಡೆಯಲಿದೆ. ಸರಣಿ ನಿರ್ಧಾರಕ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ಅಂತ್ಯತ ಮಹತ್ವದ್ದಾಗಿದೆ. ಈ ಅಂತಿಮ ಪಂದ್ಯದಲ್ಲಿ ಭಾರತ ಗೆದ್ದರೆ  ಅಥವಾ ಮಳೆಯಿಂದ ಪಂದ್ಯ ರದ್ದಾದರೆ 2-1 ಅಂತರದಿಂದ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಇತ್ತ ಆತಿಥೇಯ ಆಸ್ಟ್ರೇಲಿಯಾ ಗೆದ್ದರೆ ಸರಣಿ 2-2 ರಿಂದ ಸಮಬಲಗೊಳ್ಳಲಿದೆ. ಆದ್ದರಿಂದ ಎರಡೂ ತಂಡಗಳು ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿವೆ. ಆದರೆ ಈ ಪಂದ್ಯಕ್ಕೆ ಮಳೆಯ ಆತಂಕ ಎದುರಾಗಿದೆ.

ಬ್ರಿಸ್ಬೇನ್‌ ಹವಾಮಾನ ಹೇಗಿರುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಐದನೇ ಮತ್ತು ಅಂತಿಮ ಟಿ20 ಅಂತರರಾಷ್ಟ್ರೀಯ ಪಂದ್ಯ ನವೆಂಬರ್ 8 ರಂದು ನಡೆಯಲಿದೆ. ಹವಾಮಾನ ಮುನ್ಸೂಚನೆಗಳ ಪ್ರಕಾರ ಶನಿವಾರ ಬ್ರಿಸ್ಬೇನ್‌ನಲ್ಲಿ ತಾಪಮಾನ 29 ರಿಂದ 22 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ. ಶನಿವಾರ ಬ್ರಿಸ್ಬೇನ್‌ನಲ್ಲಿ ಮಳೆ ಬೀಳುವ ಮುನ್ಸೂಚನೆ ಇದ್ದು, ಇದು ಐದನೇ ಟಿ20 ಪಂದ್ಯದ ಮೇಲೆ ಪರಿಣಾಮ ಬೀರಬಹುದು. ಹೌದು, ಹವಾಮಾನ ಮುನ್ಸೂಚನೆಯ ಪ್ರಕಾರ, ನವೆಂಬರ್ 8 ರಂದು ಮಳೆಯಾಗುವ ಸಾಧ್ಯತೆ ಹಗಲಿನಲ್ಲಿ ಶೇ. 55 ಮತ್ತು ರಾತ್ರಿ ಶೇ. 29 ರಷ್ಟಿದೆ. ಹಾಗೆಯೇ ಗಂಟೆಗೆ 13 ರಿಂದ 19 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.

ಏಕೈಕ ಟಿ20 ಪಂದ್ಯ ನಡೆಡಿದೆ

ಆಸ್ಟ್ರೇಲಿಯಾದ ಐತಿಹಾಸಿಕ ಬ್ರಿಸ್ಬೇನ್ ಗಬ್ಬಾ ಕ್ರೀಡಾಂಗಣ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟಿ20ಪಂದ್ಯವನ್ನು ಆಯೋಜಿಸುತ್ತದೆ. ಈ ಸ್ಥಳದಲ್ಲಿ ಟೀಂ ಇಂಡಿಯಾದ ಟಿ20 ದಾಖಲೆಯು ವಿಶೇಷವಾಗಿಲ್ಲ. ಏಕೆಂದರೆ ಇಲ್ಲಿಯವರೆಗೆ ಈ ಮೈದಾನದಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿರುವ ಭಾರತ ಇದರಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ.

IND vs AUS: ಆಸೀಸ್ ವಿರುದ್ಧ 4ನೇ ಟಿ20 ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದ ಭಾರತ

ಅಂತಿಮ ಪಂದ್ಯ ನಿರ್ಣಾಯಕ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯಲ್ಲಿ ಇಲ್ಲಿಯವರೆಗೆ ಭಾರತ ಮೇಲುಗೈ ಸಾಧಿಸಿದೆ. ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಟಿ20 ಮಳೆಯಿಂದಾಗಿ ರದ್ದಾಗಿತ್ತು. ಮೆಲ್ಬೋರ್ನ್‌ನಲ್ಲಿ ನಡೆದ ಎರಡನೇ ಟಿ20ಯಲ್ಲಿ ಆಸ್ಟ್ರೇಲಿಯಾ ತಂಡ, ಭಾರತವನ್ನು ಸೋಲಿಸಿತು. ಹೋಬಾರ್ಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು. ಆದ್ದರಿಂದ, ಸರಣಿಯ ಅಂತಿಮ ಪಂದ್ಯ ನಿರ್ಣಾಯಕವಾಗಿರುತ್ತದೆ. ಈ ಪಂದ್ಯವನ್ನು ಭಾರತ ಗೆದ್ದರೆ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಳ್ಳುತ್ತದೆ. ಇತ್ತ ಆತಿಥೇಯರು ಈ ಪಂದ್ಯವನ್ನು ಗೆದ್ದರೆ ಸರಣಿ 2-2 ಅಂತರದಿಂದ ಸಮಬಲಗೊಳುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Fri, 7 November 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!