
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ನವೆಂಬರ್ 8 ರ ಶನಿವಾರ ಬ್ರಿಸ್ಬೇನ್‌ನಲ್ಲಿ (Brisbane) ನಡೆಯಲಿದೆ. ಸರಣಿ ನಿರ್ಧಾರಕ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ಅಂತ್ಯತ ಮಹತ್ವದ್ದಾಗಿದೆ. ಈ ಅಂತಿಮ ಪಂದ್ಯದಲ್ಲಿ ಭಾರತ ಗೆದ್ದರೆ ಅಥವಾ ಮಳೆಯಿಂದ ಪಂದ್ಯ ರದ್ದಾದರೆ 2-1 ಅಂತರದಿಂದ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಇತ್ತ ಆತಿಥೇಯ ಆಸ್ಟ್ರೇಲಿಯಾ ಗೆದ್ದರೆ ಸರಣಿ 2-2 ರಿಂದ ಸಮಬಲಗೊಳ್ಳಲಿದೆ. ಆದ್ದರಿಂದ ಎರಡೂ ತಂಡಗಳು ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿವೆ. ಆದರೆ ಈ ಪಂದ್ಯಕ್ಕೆ ಮಳೆಯ ಆತಂಕ ಎದುರಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಐದನೇ ಮತ್ತು ಅಂತಿಮ ಟಿ20 ಅಂತರರಾಷ್ಟ್ರೀಯ ಪಂದ್ಯ ನವೆಂಬರ್ 8 ರಂದು ನಡೆಯಲಿದೆ. ಹವಾಮಾನ ಮುನ್ಸೂಚನೆಗಳ ಪ್ರಕಾರ ಶನಿವಾರ ಬ್ರಿಸ್ಬೇನ್‌ನಲ್ಲಿ ತಾಪಮಾನ 29 ರಿಂದ 22 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ. ಶನಿವಾರ ಬ್ರಿಸ್ಬೇನ್‌ನಲ್ಲಿ ಮಳೆ ಬೀಳುವ ಮುನ್ಸೂಚನೆ ಇದ್ದು, ಇದು ಐದನೇ ಟಿ20 ಪಂದ್ಯದ ಮೇಲೆ ಪರಿಣಾಮ ಬೀರಬಹುದು. ಹೌದು, ಹವಾಮಾನ ಮುನ್ಸೂಚನೆಯ ಪ್ರಕಾರ, ನವೆಂಬರ್ 8 ರಂದು ಮಳೆಯಾಗುವ ಸಾಧ್ಯತೆ ಹಗಲಿನಲ್ಲಿ ಶೇ. 55 ಮತ್ತು ರಾತ್ರಿ ಶೇ. 29 ರಷ್ಟಿದೆ. ಹಾಗೆಯೇ ಗಂಟೆಗೆ 13 ರಿಂದ 19 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.
ಆಸ್ಟ್ರೇಲಿಯಾದ ಐತಿಹಾಸಿಕ ಬ್ರಿಸ್ಬೇನ್ ಗಬ್ಬಾ ಕ್ರೀಡಾಂಗಣ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟಿ20ಪಂದ್ಯವನ್ನು ಆಯೋಜಿಸುತ್ತದೆ. ಈ ಸ್ಥಳದಲ್ಲಿ ಟೀಂ ಇಂಡಿಯಾದ ಟಿ20 ದಾಖಲೆಯು ವಿಶೇಷವಾಗಿಲ್ಲ. ಏಕೆಂದರೆ ಇಲ್ಲಿಯವರೆಗೆ ಈ ಮೈದಾನದಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿರುವ ಭಾರತ ಇದರಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ.
IND vs AUS: ಆಸೀಸ್ ವಿರುದ್ಧ 4ನೇ ಟಿ20 ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದ ಭಾರತ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯಲ್ಲಿ ಇಲ್ಲಿಯವರೆಗೆ ಭಾರತ ಮೇಲುಗೈ ಸಾಧಿಸಿದೆ. ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಟಿ20 ಮಳೆಯಿಂದಾಗಿ ರದ್ದಾಗಿತ್ತು. ಮೆಲ್ಬೋರ್ನ್‌ನಲ್ಲಿ ನಡೆದ ಎರಡನೇ ಟಿ20ಯಲ್ಲಿ ಆಸ್ಟ್ರೇಲಿಯಾ ತಂಡ, ಭಾರತವನ್ನು ಸೋಲಿಸಿತು. ಹೋಬಾರ್ಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು. ಆದ್ದರಿಂದ, ಸರಣಿಯ ಅಂತಿಮ ಪಂದ್ಯ ನಿರ್ಣಾಯಕವಾಗಿರುತ್ತದೆ. ಈ ಪಂದ್ಯವನ್ನು ಭಾರತ ಗೆದ್ದರೆ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಳ್ಳುತ್ತದೆ. ಇತ್ತ ಆತಿಥೇಯರು ಈ ಪಂದ್ಯವನ್ನು ಗೆದ್ದರೆ ಸರಣಿ 2-2 ಅಂತರದಿಂದ ಸಮಬಲಗೊಳುತ್ತದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:05 pm, Fri, 7 November 25