AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಶೇ. 87 ರಷ್ಟು ಮಳೆ..! 2ನೇ ಟಿ20 ಪಂದ್ಯ ನಡೆಯುವುದು ಭಾಗಶಃ ಅನುಮಾನ

India vs Australia T20 Melbourne: ಕ್ಯಾನ್‌ಬೆರಾದಲ್ಲಿ ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಮಳೆಯಿಂದ ರದ್ದಾದ ನಂತರ, ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ. ಆದರೆ, ಇಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ಇದ್ದು, ಪಂದ್ಯ ನಡೆಯುವುದು ಅನುಮಾನವಾಗಿದೆ. ಮೆಲ್ಬೋರ್ನ್ ಪಿಚ್ ಬೌಲರ್‌ಗಳಿಗೆ ಸಹಕಾರಿಯಾಗಿದ್ದು, ಗುರಿ ಬೆನ್ನಟ್ಟುವ ತಂಡಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಮಳೆಯು ಪಂದ್ಯದ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.

IND vs AUS: ಶೇ. 87 ರಷ್ಟು ಮಳೆ..! 2ನೇ ಟಿ20 ಪಂದ್ಯ ನಡೆಯುವುದು ಭಾಗಶಃ ಅನುಮಾನ
Ind Vs Aus
ಪೃಥ್ವಿಶಂಕರ
|

Updated on:Oct 30, 2025 | 8:13 PM

Share

ಕ್ಯಾನ್‌ಬೆರಾದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಭರ್ಜರಿ ಆರಂಭ ಪಡೆದುಕೊಂಡಿತ್ತು. ಆದರೆ ಮಳೆಯಿಂದಾಗಿ ಪಂದ್ಯವನ್ನು ಅರ್ಧಕ್ಕೆ ರದ್ದುಗೊಳಿಸಬೇಕಾಯಿತು. ಹೀಗಾಗಿ ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಮೊದಲ ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿತು. ಇದೀಗ ಎರಡನೇ ಪಂದ್ಯಕ್ಕೆ ಎರಡು ತಂಡಗಳು ಸಜ್ಜಾಗಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡುವ ಇರಾದೆಯಲ್ಲಿ ಎರಡು ತಂಡಗಳಿವೆ. ಆದಾಗ್ಯೂ ಮೆಲ್ಬೋರ್ನ್​ನಲ್ಲಿ ನಡೆಯುವ ಈ ಪಂದ್ಯವೂ ಕೂಡ ಪೂರ್ಣಗೊಳ್ಳುವ ಮುನ್ಸೂಚನೆಯನ್ನು ಹವಾಮಾನ (weather update) ಇಲಾಖೆ ನೀಡದಿರುವುದು ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

ಮೆಲ್ಬೋರ್ನ್ ಹವಾಮಾನ ಹೇಗಿರಲಿದೆ?

ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿತ್ತು. ಅದರಂತೆ ಪಂದ್ಯ ಕೂಡ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಮೆಲ್ಬೋರ್ನ್​ನಲ್ಲೂ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಯೂವೆದರ್ ಪ್ರಕಾರ, ಅಕ್ಟೋಬರ್ 31 ರ ಶುಕ್ರವಾರ ಮೆಲ್ಬೋರ್ನ್​ನಲ್ಲಿ ಶೇ. 87 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಶೇ. 99 ರಷ್ಟು ಮೋಡ ಕವಿದ ವಾತಾವರಣವಿರಲಿದೆ. ಹಾಗೆಯೇ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಶೇ. 17 ರಷ್ಟು ಇದೆ. ಪಂದ್ಯವು ಸ್ಥಳೀಯ ಸಮಯ ಮಧ್ಯಾಹ್ನ 1:45 ಕ್ಕೆ ಪ್ರಾರಂಭವಾಗುತ್ತದೆ. ಪಂದ್ಯ ನಿಗದಿಯಾದ ಮಧ್ಯಾಹ್ನದ ವೇಳೆಗೆ, ಶೇ. 71 ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, 1.4 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಇದರರ್ಥ ಎರಡನೇ ಟಿ20 ಪಂದ್ಯ ನಡೆಯುವುದು ಕೂಡ ಅನುಮಾನವಾಗಿದೆ.

ಮೆಲ್ಬೋರ್ನ್ ಪಿಚ್ ಯಾರಿಗೆ ಸಹಕಾರಿ?

ಮೆಲ್ಬೋರ್ನ್ ಮೈದಾನ ಸಾಮಾನ್ಯವಾಗಿ ಬೌಲರ್ ಸ್ನೇಹಿ ಎಂದು ಹೇಳಲಾಗುತ್ತದೆ. ಇದಲ್ಲದೆ, ಮೈದಾನವು ದೊಡ್ಡದಾಗಿರುವ ಕಾರಣ ಬೌಲರ್​ಗಳು ಮೇಲುಗೈ ಸಾಧಿಸಬಹುದು. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳ ಗೆಲುವಿನ ಪ್ರಮಾಣ ಕಡಿಮೆ ಇದೆ. ಆದರೆ ಗುರಿ ಬೆನ್ನಟ್ಟುವ ತಂಡಗಳು ಆಡಿದ 19 ಪಂದ್ಯಗಳಲ್ಲಿ 11 ರಲ್ಲಿ ಗೆದ್ದಿವೆ, ಇದರಲ್ಲಿ ಕೊನೆಯ ಐದು ಪಂದ್ಯಗಳಲ್ಲಿ ನಾಲ್ಕು ಸೇರಿವೆ. ಕೊನೆಯ ಬಾರಿಗೆ ಈ ಎರಡೂ ತಂಡಗಳು ಈ ಮೈದಾನದಲ್ಲಿ 2016 ರಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 184 ರನ್ ಕಲೆಹಾಕಿತ್ತು.

IND vs AUS: ಟೀಂ ಇಂಡಿಯಾಕ್ಕೆ ಆಘಾತ; ಮೊದಲ 3 ಟಿ20 ಪಂದ್ಯಗಳಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಸಿಂಗ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್, ಟಿಮ್ ಡೇವಿಡ್, ಬೆನ್ ದ್ವಾರ್ಶಿಸ್, ನಾಥನ್ ಎಲ್ಲಿಸ್, ಜೋಶ್ ಹೇಜಲ್‌ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Thu, 30 October 25