AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾದಲ್ಲಿ ಸತತ ಐದನೇ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

India T20 Series Win vs Australia 2-1: ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಟಿ20 ಸರಣಿ ಗೆದ್ದು ಬೀಗಿದೆ. ಏಕದಿನ ಸರಣಿ ಸೋಲಿಗೆ ಸೇಡು ತೀರಿಸಿಕೊಂಡ ಭಾರತ, ಬ್ರಿಸ್ಬೇನ್‌ನಲ್ಲಿ ಮಳೆಯಿಂದ ಅಂತಿಮ ಪಂದ್ಯ ರದ್ದುಗೊಂಡಿದ್ದರೂ, ಐದನೇ ಸತತ ಟಿ20 ಸರಣಿ ಗೆಲುವನ್ನು ಆಸ್ಟ್ರೇಲಿಯಾದಲ್ಲಿ ದಾಖಲಿಸಿದೆ.

IND vs AUS: ಆಸ್ಟ್ರೇಲಿಯಾದಲ್ಲಿ ಸತತ ಐದನೇ ಟಿ20 ಸರಣಿ ಗೆದ್ದ ಟೀಂ ಇಂಡಿಯಾ
Team India
ಪೃಥ್ವಿಶಂಕರ
|

Updated on:Nov 08, 2025 | 5:05 PM

Share

ಆಸ್ಟ್ರೇಲಿಯಾ ಪ್ರವಾಸವನ್ನು ಏಕದಿನ ಸರಣಿ ಸೋಲಿನೊಂದಿಗೆ ಆರಂಭಿಸಿದ್ದ ಟೀಂ ಇಂಡಿಯಾ (India vs Australia) ಇದೀಗ ಟಿ20 ಸರಣಿಯನ್ನು ಗೆಲ್ಲುವ ಮೂಲಕ ಶುಭಾಂತ್ಯ ಹಾಡಿದೆ. ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 2-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಏಕದಿನ ಸರಣಿ ಸೋಲಿಗೆ ಸೇಡನ್ನು ತೀರಿಸಿಕೊಂಡಿತು. ಬ್ರಿಸ್ಬೇನ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಹೀಗಾಗಿ ಕೊನೆಯ ಪಂದ್ಯವನ್ನು ಗೆದ್ದು ಟಿ20 ಸರಣಿಯನ್ನು ಡ್ರಾ ಮಾಡಿಕೊಳ್ಳುವ ಇರಾದೆಯಲಿದ್ದ ಆಸ್ಟ್ರೇಲಿಯಾಕ್ಕೆ ಮಳೆ ಅವಕಾಶ ಮಾಡಿಕೊಡಲಿಲ್ಲ. ಈ ಮೂಲಕ ಟೀಂ ಇಂಡಿಯಾ ಆಸ್ಟ್ರೇಲಿಯಾದಲ್ಲಿ ಸತತ ಐದನೇ ಟಿ20 ಸರಣಿ ಗೆದ್ದ ದಾಖಲೆಯನ್ನೂ ಬರೆಯಿತು.

ಅಭಿಷೇಕ್​ಗೆ ಆರಂಭದಲ್ಲೇ 2 ಜೀವದಾನ

ನವೆಂಬರ್ 8 ರ ಶನಿವಾರ ಬ್ರಿಸ್ಬೇನ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿ, ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇತ್ತ ಟೀಂ ಇಂಡಿಯಾ ಪರ ಶುಭ್​ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ತಂಡಕ್ಕೆ ಸ್ಫೋಟಕ ಆರಂಭ ನೀಡಿದರು. ಇಬ್ಬರು ಬೌಂಡರಿಗಳ ಮಳೆ ಸುರಿಸಿದರು. ಗಿಲ್ ಒಂದೇ ಓವರ್‌ನಲ್ಲಿ ನಾಲ್ಕು ಬೌಂಡರಿಗಳನ್ನು ಸಹ ಬಾರಿಸಿದರು. ಈ ಮಧ್ಯೆ, ಅಭಿಷೇಕ್ ಶರ್ಮಾ ಗೆ ಎರಡು ಜೀವದಾನಗಳು ಸಿಕ್ಕವು. ಇದರ ಲಾಭ ಪಡೆದ ಅಭಿಷೇಕ್ ಕೂಡ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮುಂದುವರೆಸಿದ್ದರು.

ಮಳೆಯಿಂದ 5ನೇ ಪಂದ್ಯ ರದ್ದು

ಆದರೆ ಟೀಂ ಇಂಡಿಯಾ 50 ರನ್‌ಗಳ ಗಡಿ ದಾಟಿದ ತಕ್ಷಣ, ಕೆಟ್ಟ ಹವಾಮಾನದಿಂದಾಗಿ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಬ್ರಿಸ್ಬೇನ್‌ನಲ್ಲಿ ಮಿಂಚು ಮತ್ತು ಬಿರುಗಾಳಿಯಿಂದಾಗಿ ಎಲ್ಲಾ ಆಟಗಾರರು ಪೆವಿಲಿಯನ್‌ಗೆ ಮರಳಿದರು. ಆ ಹೊತ್ತಿಗೆ, ಟೀಂ ಇಂಡಿಯಾದ ಸ್ಕೋರ್ 4.5 ಓವರ್‌ಗಳಲ್ಲಿ 52 ರನ್‌ಗಳಾಗಿತ್ತು, ಯಾವುದೇ ವಿಕೆಟ್ ಕಳೆದುಕೊಂಡಿಲಿಲ್ಲ. ಆದಾಗ್ಯೂ, ಸ್ವಲ್ಪ ಸಮಯದ ನಂತರ ಮಳೆ ಪ್ರಾರಂಭವಾಯಿತು, ಸುಮಾರು ಎರಡು ಗಂಟೆಗಳ ಕಾಲ ಕಾಯ್ದ ಬಳಿಕ ಅಂಪೈರ್‌ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದರು. ಪಂದ್ಯ ನಿಲ್ಲುವ ವೇಳೆಗೆ ಶುಭ್​ಮನ್ ಗಿಲ್ 16 ಎಸೆತಗಳಲ್ಲಿ 29 ರನ್‌ ಮತ್ತು ಅಭಿಷೇಕ್ 13 ಎಸೆತಗಳಲ್ಲಿ 23 ರನ್‌ ಬಾರಿಸಿ ಅಜೇಯರಾಗಿ ಉಳಿದಿದ್ದರು.

IND vs AUS: ಅತಿ ಕಡಿಮೆ ಎಸೆತಗಳಲ್ಲಿ ಸಾವಿರ ರನ್; ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಅಜೇಯ ಓಟ ಮುಂದುವರೆಸಿದ ಭಾರತ

ಇದರೊಂದಿಗೆ ಟೀಂ ಇಂಡಿಯಾ ಐದು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದ್ದು ಮಾತ್ರವಲ್ಲದೆ ಆಸ್ಟ್ರೇಲಿಯಾದಲ್ಲಿ ಸತತ ಐದನೇ ಟಿ20 ಸರಣಿಯನ್ನು ಗೆಲ್ಲುವ ಮೂಲಕ ತನ್ನ ಅಜೇಯ ಓಟದ ದಾಖಲೆಯನ್ನು ಉಳಿಸಿಕೊಂಡಿದೆ. ಇದಲ್ಲದೆ, 2023 ರಿಂದ ಟೀಂ ಇಂಡಿಯಾ ಯಾವುದೇ ಟಿ20ಐ ಸರಣಿಯನ್ನು ಕಳೆದುಕೊಂಡಿಲ್ಲ. ಈ ಗೆಲುವು ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಕೋಚ್ ಗೌತಮ್ ಗಂಭೀರ್ ಅವರಿಗೂ ವಿಶೇಷವಾಗಿದೆ. ಏಕೆಂದರೆ ಎರಡನೇ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ, ಆ ಬಳಿಕ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಪಡೆದುಕೊಂಡಿತು. ಇದರ ಫಲವಾಗಿ ಭಾರತಕ್ಕೆ ಟಿ20 ಸರಣಿ ಲಭಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Sat, 8 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್