AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ರೋಹಿತ್ ಇಲ್ಲದ ಸಿಡ್ನಿ ಟೆಸ್ಟ್ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪಂದ್ಯದ ಪೂರ್ಣ ಮಾಹಿತಿ

India vs Australia 5th Test: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಕೊನೆಯ ಪಂದ್ಯ ಸಿಡ್ನಿಯಲ್ಲಿ ಜನವರಿ 3 ರಿಂದ ಆರಂಭವಾಗಲಿದೆ. ಸದ್ಯ ಸರಣಿಯಲ್ಲಿ ಭಾರತ ತಂಡ 2-1ರಲ್ಲಿ ಹಿಂದುಳಿದಿರುವ ಕಾರಣ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ನಾಯಕ ರೋಹಿತ್ ಶರ್ಮಾ ಐದನೇ ಟೆಸ್ಟ್​ನಿಂದ ಹೊರಗುಳಿದಿದ್ದು, ಬುಮ್ರಾ ನಾಯಕತ್ವ ವಹಿಸಲಿದ್ದಾರೆ.

IND vs AUS: ರೋಹಿತ್ ಇಲ್ಲದ ಸಿಡ್ನಿ ಟೆಸ್ಟ್ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪಂದ್ಯದ ಪೂರ್ಣ ಮಾಹಿತಿ
ಭಾರತ- ಆಸ್ಟ್ರೇಲಿಯಾ
ಪೃಥ್ವಿಶಂಕರ
|

Updated on: Jan 02, 2025 | 5:58 PM

Share

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಇದೀಗ ಕೊನೆಯ ಹಂತಕ್ಕೆ ಬಂದಿದೆ. ಸರಣಿಯಲ್ಲಿ ಈಗಾಗಲೇ 4 ಪಂದ್ಯಗಳು ನಡೆದಿದ್ದು, ಆತಿಥೇಯ ಆಸ್ಟ್ರೇಲಿಯಾ 2-1 ರ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ನಾಳೆಯಿಂದ ಸಿಡ್ನಿಯಲ್ಲಿ ಆರಂಭವಾಗಲಿರುವ ಸರಣಿ ನಿರ್ಧಾರಕ ಪಂದ್ಯವನ್ನು ಗೆದ್ದುಕೊಳ್ಳುವುದರೊಂದಿಗೆ ಸರಣಿಯನ್ನು ಸಮಬಲಗೊಳಿಸಲು ಟೀಂ ಇಂಡಿಯಾ ಯತ್ನಿಸಲಿದೆ. ಇದರ ಜೊತೆಗೆ ಹೊಸ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಲು ಭಾರತ ಕಾತರದಲ್ಲಿದೆ. ಈ ಪಂದ್ಯವನ್ನು ಭಾರತ ಗೆದ್ದರೆ ಸರಣಿ ಡ್ರಾ ಆಗಲಿದ್ದು, ಟೀಂ ಇಂಡಿಯಾದ ಬಳಿಯೇ ಟ್ರೋಫಿ ಉಳಿದುಕೊಳ್ಳಲಿದೆ. ಏಕೆಂದರೆ ಕಳೆದ ಬಾರಿ ನಡೆದಿದ್ದ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿತ್ತು.

ರೋಹಿತ್ ಔಟ್, ಗಿಲ್ ಇನ್

ವಾಸ್ತವವಾಗಿ ನಾಲ್ಕನೇ ಟೆಸ್ಟ್‌ನಲ್ಲಿ ಭಾರತ ಸೋತಾಗಿನಿಂದ ತಂಡದ ವಿರುದ್ಧ ಬಿಸಿಸಿಐ ಅಸಮಾಧಾನಗೊಂಡಿದೆ. ಇದರ ಜೊತೆಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ಆಟಗಾರರ ಪ್ರದರ್ಶನದಿಂದ ಬೇಸರಗೊಂಡಿದ್ದಾರೆ ಎಂದು ವರದಿಯಾಗಿದೆ. ಇದರ ನಡುವೆ ಕೊನೆಯ ಟೆಸ್ಟ್ ಪಂದ್ಯದಿಂದ ರೋಹಿತ್ ಹೊರಗುಳಿಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ರೋಹಿತ್ ನಿರ್ಗಮನದಿಂದಾಗಿ ಮತ್ತೆ ಜಸ್ಪ್ರಿತ್ ಬುಮ್ರಾಗೆ ನಾಯಕತ್ವದ ಪಟ್ಟ ಕಟ್ಟಿದ್ದು, ಶುಭ್​ಮನ್ ಗಿಲ್ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಕಾಣಬಹುದು ಎಂದು ವರದಿಯಾಗಿದೆ. ಇದಲ್ಲದೆ ವೇಗಿ ಆಕಾಶ್ ದೀಪ್ ಕೂಡ ಗಾಯದಿಂದಾಗಿ ಐದನೇ ಟೆಸ್ಟ್ ಆಡುತ್ತಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಹೀಗಾಗಿ ಐದನೇ ಟೆಸ್ಟ್​ನಲ್ಲಿ ತಂಡದಲ್ಲಿ ಸಾಕಷ್ಟು ಬದಲಾವಣೆಗಳಾಗುವುದು ಖಚಿತವಾಗಿದೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ ಪಂದ್ಯ ಶುಕ್ರವಾರದಿಂದ ಅಂದರೆ ಜನವರಿ 3 ರಿಂದ ಆರಂಭವಾಗಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಪಂದ್ಯವು ಸಿಡ್ನಿಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟೆಸ್ಟ್ ಪಂದ್ಯ ಯಾವಾಗ ಆರಂಭವಾಗುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 5:00 ಗಂಟೆಗೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಬೆಳಗ್ಗೆ 4:30ಕ್ಕೆ ಟಾಸ್ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ ಪಂದ್ಯ ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಪ್ರಸಾರವಾಗಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ಲಭ್ಯವಿರುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟೆಸ್ಟ್ ಪಂದ್ಯವನ್ನು ಡಿಸ್ನಿ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ