IND vs AUS: ಭೋಜನ ವಿರಾಮ; ಟಾಪ್ ಆರ್ಡರ್ ಧ್ವಂಸ, ಭಾರತಕ್ಕೆ ದುಬಾರಿಯಾದ ಇಬ್ಬರ ಸೊನ್ನೆ

IND vs AUS: ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ದಿನದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಕಳಪೆ ಆರಂಭ ಪಡೆದಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿತಾದರೂ, ಟಾಪ್ ಆರ್ಡರ್ ಬೇಗನೆ ವಿಕೆಟ್ ಕಳೆದುಕೊಂಡಿತು. ಯಶಸ್ವಿ ಜೈಸ್ವಾಲ್ ಮತ್ತು ದೇವದತ್ ಪಡಿಕ್ಕಲ್ ಶೂನ್ಯಕ್ಕೆ ಔಟ್ ಆದರು. ಹೀಗಾಗಿ ಭೋಜನ ವಿರಾಮದ ವೇಳೆಗೆ ಭಾರತ 51 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದೆ.

IND vs AUS: ಭೋಜನ ವಿರಾಮ; ಟಾಪ್ ಆರ್ಡರ್ ಧ್ವಂಸ, ಭಾರತಕ್ಕೆ ದುಬಾರಿಯಾದ ಇಬ್ಬರ ಸೊನ್ನೆ
ಭಾರತ- ಆಸ್ಟ್ರೇಲಿಯಾ
Follow us
ಪೃಥ್ವಿಶಂಕರ
|

Updated on:Nov 22, 2024 | 10:16 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಶುಕ್ರವಾರದಿಂದ ಅಂದರೆ ನವೆಂಬರ್ 22 ರಿಂದ ಪರ್ತ್‌ನಲ್ಲಿ ಆರಂಭವಾಗಿದೆ. ಈ ಸರಣಿ ಎರಡೂ ತಂಡಗಳಿಗೆ ಮಹತ್ವದ್ದಾಗಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಯಾವ ತಂಡ ಫೈನಲ್ ತಲುಪಲಿದೆ ಎಂಬುದು ಈ ಸರಣಿಯಿಂದ ಸ್ಪಷ್ಟವಾಗಲಿದೆ. ಹೀಗಾಗಿ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ನಾಯಕನ ಆಯ್ಕೆಯನ್ನು ಸಮರ್ಥಿಸಿಕೊಳ್ಳದ ತಂಡದ ಟಾರ್ಪ್​ ಆರ್ಡರ್, ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದೆ. ಭೋಜನ ವಿರಾಮದ ವೇಳೆಗೆ ತಂಡದ 4 ಪ್ರಮುಖ ವಿಕೆಟ್​ಗಳು ಪತನವಾಗಿದ್ದು, ಕೇವಲ 51 ರನ್ ಕಲೆಹಾಕಲಾಗಿದೆ. ಅನಾನುಭವಿಗಳ ಜೊತೆಗೆ ಅನುಭವಿಗಳು, ಬಿಗ್ ಇನ್ನಿಂಗ್ಸ್ ಆಡದಿರುವುದು ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಸೊನ್ನೆ ಸುತ್ತಿದ ಜೈಸ್ವಾಲ್

ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಇಲ್ಲದ ಕಾರಣ, ಯಶಸ್ವಿ ಜೈಸ್ವಾಲ್ ಅವರೊಂದಿಗೆ ಕನ್ನಡಿಗ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವ ಅವಕಾಶ ಪಡೆದರು. ಅದರಂತೆ ಆರಂಭದಲ್ಲಿ ಸಾಕಷ್ಟು ತಾಳ್ಮೆ ತೊರಿಸಿ ಕಾಂಗರೂ ಬೌಲರ್​ಗಳಿಗೆ ತೊಂದರೆ ನೀಡಿದರು. ಇತ್ತ ರಾಹುಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದಿದ್ದ ಜೈಸ್ವಾಲ್, ಖಾತೆಯನ್ನು ತೆರೆಯದೆ ಶೂನ್ಯಕ್ಕೆ ಔಟಾದರು. ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಜೈಸ್ವಾಲ್, ಕ್‌ಸ್ವೀನಿಗೆ ಕ್ಯಾಚಿತ್ತು ಔಟಾದರು. ತಮ್ಮ ಇನ್ನಿಂಗ್ಸ್​ನಲ್ಲಿ 8 ಎಸೆತಗಳನ್ನು ಆಡಿದ ಯಶಸ್ವಿ ಯಾವುದೇ ರನ್ ಗಳಿಸದೆ ಪೆವಿಲಿಯನ್ ಸೇರಿಕೊಂಡರು.

ಖಾತೆ ತೆರೆಯದ ಪಡಿಕ್ಕಲ್

ಜೈಸ್ವಾಲ್ ವಿಕೆಟ್ ಪತನದ ಬಳಿಕ ಮೂರನೇ ಕ್ರಮಾಂಕದಲ್ಲಿ ಬಂದ ಮತ್ತೊಬ್ಬ ಕನ್ನಡಿಗ ದೇವದತ್ ಪಡಿಕ್ಕಲ್​ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿತ್ತು. ಏಕೆಂದರೆ ಶುಭ್​ಮನ್ ಗಿಲ್ ಇಂಜುರಿಯಾದ್ದರಿಂದ ಅವರ ಸ್ಥಾನದಲ್ಲಿ ಪಡಿಕ್ಕಲ್​ಗೆ ಅವಕಾಶ ನೀಡಲಾಗಿತ್ತು. ಇದಕ್ಕೆ ಕಾರಣವೂ ಇದ್ದು, ಆಸ್ಟ್ರೇಲಿಯಾ ಎ ವಿರುದ್ಧ ನಡೆದಿದ್ದ 2 ಅನಧಿಕೃತ ಟೆಸ್ಟ್ ಪಂದ್ಯಗಳಲ್ಲಿ ಪಡಿಕ್ಕಲ್ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿದಲ್ಲದೆ ಪ್ಲೇಯಿಂಗ್ 11ನಲ್ಲೂ ಅವಕಾಶ ನೀಡಲಾಗಿತ್ತು. ಹೀಗಾಗಿ ಸಿಕ್ಕ ಅವಕಾಶವನ್ನು ಪಡಿಕ್ಕಲ್ ಸದುಪಯೋಗ ಪಡಿಸಿಕೊಳ್ಳುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಜೈಸ್ವಾಲ್​ರಂತೆ ಪಡಿಕ್ಕಲ್​ಗೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ತಮ್ಮ ಇನ್ನಿಂಗ್ಸ್​ನಲ್ಲಿ 23 ಎಸೆತಗಳನ್ನು ಎದುರಿಸಿದ ಪಡಿಕ್ಕಲ್, ಜೋಶ್ ಹೇಜಲ್‌ವುಡ್ ಎಸೆತದಲ್ಲಿ ವಿಕೆಟ್​ ಕೀಪರ್​​ಗೆ ಕ್ಯಾಚಿತ್ತು, ಸೊನ್ನೆಗೆ ವಿಕೆಟ್ ಒಪ್ಪಿಸಿದರು.

ಮತ್ತೆ ನಿರಾಸೆ ಮೂಡಿಸಿದ ಕೊಹ್ಲಿ

ಇಬ್ಬರು ಅನಾನುಭವಿಗಳು ಶೂನ್ಯಕ್ಕೆ ಔಟಾದ ಕಾರಣ, ಟೀಂ ಇಂಡಿಯಾ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ರಾಹುಲ್​ ಅವರನ್ನು ಕೂಡಿಕೊಂಡ ಅನುಭವಿ ವಿರಾಟ್ ಕೊಹ್ಲಿ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಕಳೆದ ಕೆಲವು ಪಂದ್ಯಗಳಲ್ಲಿ ಮೌನಕ್ಕೆ ಶರಣಾಗಿರುವ ವಿರಾಟ್ ಕೊಹ್ಲಿಯ ಬ್ಯಾಟ್, ಈ ಪಂದ್ಯದಲ್ಲಿ ಘರ್ಜಿಸಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮತ್ತೊಮ್ಮೆ ತಮ್ಮ ಕಳಪೆ ಪ್ರದರ್ಶನವನ್ನು ಆಸ್ಟ್ರೇಲಿಯಾದಲ್ಲೂ ಮುಂದುವರೆಸಿದ ಕೊಹ್ಲಿ, 12 ಎಸೆತಗಳನ್ನು ಎದುರಿಸಿ ಕೇವಲ 5 ರನ್ ಗಳಿಸಿ ಹೇಜಲ್‌ವುಡ್​ಗೆ ಬಲಿಯಾದರು.

ಭರವಸೆ ಹುಸಿಗೊಳಿಸಿದ ರಾಹುಲ್

ಇನ್ನು ರೋಹಿತ್ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಕನ್ನಡಿಗ ರಾಹುಲ್, ಖಂಡಿತವಾಗಿಯೂ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆಸೀಸ್ ವೇಗಿಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ ರಾಹುಲ್, ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ನೆರವಾದರು. ಒಂದೆಡೆ ವಿಕೆಟ್ ಪತನದ ನಡುವೆಯೂ ತಂಡದ ಪರ ಬಿಗ್ ಇನ್ನಿಂಗ್ಸ್ ಕಟ್ಟುವ ಸುಳಿವು ನೀಡಿದ್ದ ರಾಹುಲ್,  ಬರೋಬ್ಬರಿ  74 ಎಸೆತಗಳನ್ನು ಎದುರಿಸಿ 26 ರನ್ ಕಲೆಹಾಕಿದ್ದರು. ಆದರೆ  ಇಲ್ಲಿ ಮತ್ತೊಮ್ಮೆ ದಾಳಿಗಿಳಿದ ಸ್ಟಾರ್ಕ್, ರಾಹುಲ್​ರನ್ನು ಪೆವಿಲಿಯನ್​ಗಟ್ಟುವಲ್ಲಿ ಯಶಸ್ವಿಯಾದರು. ಹೀಗಾಗಿ ಭೋಜನ ವಿರಾಮದ ವೇಳೆಗೆ ಭಾರತ 4 ವಿಕೆಟ್ ಕಳೆದುಕೊಂಡು 51 ರನ್ ಕಲೆಹಾಕಿದೆ. ಧ್ರುವ್ ಜುರೆಲ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದು, ಅವರೀಗ ರಿಷಬ್ ಪಂತ್​ಗೆ ಸಾಥ್ ನೀಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Fri, 22 November 24

ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!