36 ವರ್ಷಗಳ ದಾಖಲೆ ಉಡೀಸ್; 1992 ರ ನಂತರ ಮೊದಲ ಬಾರಿಗೆ ಈ ರೀತಿಯ ಸೋಲು ಕಂಡ ಆಸ್ಟ್ರೇಲಿಯಾ..!

ICC World Cup 2023: ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದರೆ, ಇತ್ತ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ1992 ರ ವಿಶ್ವಕಪ್ ನಂತರ ಇದೇ ಮೊದಲ ಬಾರಿಗೆ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಸೋತ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತು.

36 ವರ್ಷಗಳ ದಾಖಲೆ ಉಡೀಸ್; 1992 ರ ನಂತರ ಮೊದಲ ಬಾರಿಗೆ ಈ ರೀತಿಯ ಸೋಲು ಕಂಡ ಆಸ್ಟ್ರೇಲಿಯಾ..!
ಭಾರತ- ಆಸ್ಟ್ರೇಲಿಯಾ
Follow us
ಪೃಥ್ವಿಶಂಕರ
|

Updated on:Oct 09, 2023 | 1:04 PM

ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆದ ವಿಶ್ವಕಪ್​ನ World Cup 2023) ಐದನೇ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ, ಬಲಿಷ್ಠ ಆಸೀಸ್ (India vs Australia) ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದೆ. ಟೀಂ ಇಂಡಿಯಾ ಪರ ಶತಕದ ಜೊತೆಯಾಟ ಆಡಿದ ಕೆಎಲ್ ರಾಹುಲ್ (KL Rahul) ಮತ್ತು ವಿರಾಟ್ ಕೊಹ್ಲಿ (Virat Kohli) ಟೀಂ ಇಂಡಿಯಾದ ಗೆಲುವಿನ ಹೀರೋ ಎನಿಸಿಕೊಂಡರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಟೀಂ ಇಂಡಿಯಾ (Team India) ಗೆಲುವಿಗೆ 200 ರನ್‌ಗಳ ಸವಾಲನ್ನು ನೀಡಿತ್ತು. ಈ ಸವಾಲನ್ನು ಟೀಂ ಇಂಡಿಯಾ 41.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಕೆಎಲ್ ರಾಹುಲ್ ಸಿಕ್ಸರ್ ಬಾರಿಸಿ ಟೀಂ ಇಂಡಿಯಾಗೆ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದರೆ, ಇತ್ತ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ1992 ರ ವಿಶ್ವಕಪ್ ನಂತರ ಇದೇ ಮೊದಲ ಬಾರಿಗೆ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಸೋತ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತು.

ಮಕಾಡೆ ಮಲಗಿದ ಆಸೀಸ್

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರ ಸ್ಟೀವನ್ ಸ್ಮಿತ್ 46 ಮತ್ತು ಡೇವಿಡ್ ವಾರ್ನರ್ 41 ರನ್ ಅತ್ಯಧಿಕ ಸ್ಕೋರರ್ ಎನಿಸಿಕೊಂಡರು. ಕೊನೆಯ ಕ್ಷಣದಲ್ಲಿ ಮಾರ್ನಸ್ ಲಬುಶೇನ್ 27 ರನ್ ಮತ್ತು ಮಿಚೆಲ್ ಸ್ಟಾರ್ಕ್ 28 ರನ್ ಕೊಡುಗೆ ನೀಡಿದರು. ಭಾರತದ ಪರ ರವೀಂದ್ರ ಜಡೇಜಾ ಅವರು ಟೀಂ ಇಂಡಿಯಾ ಪರ ಅತಿ ಹೆಚ್ಚು 3 ವಿಕೆಟ್ ಕಬಳಿಸಿದ್ದಾರೆ. ಕುಲ್ದೀಪ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ ಮತ್ತು ಆರ್ ಅಶ್ವಿನ್ ತಲಾ 1 ವಿಕೆಟ್ ಉರುಳಿಸಿದರು.

ಆಸೀಸ್ ಮಣಿಸಿ ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದ ಭಾರತ..!

ಟೀಂ ಇಂಡಿಯಾದ ಬ್ಯಾಟಿಂಗ್

200 ರನ್​ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾದ ಆರಂಭ ಅತ್ಯಂತ ಕಳಪೆಯಾಗಿತ್ತು. ಇಶಾನ್ ಕಿಶನ್, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಖಾತೆ ತೆರೆಯದೆ ಔಟಾದರು. ಆದರೆ ಅಲ್ಲಿಂದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಇಬ್ಬರೂ ಟೀಂ ಇಂಡಿಯಾ ಇನ್ನಿಂಗ್ಸ್ ನಿಭಾಯಿಸಿದರು. ಸಿಂಗಲ್-ಡಬಲ್ ತೆಗೆದುಕೊಳ್ಳುವ ಮೂಲಕ ತಂಡದ ಸ್ಕೋರ್ ಕಾರ್ಡ್ ಅನ್ನು ಮೇಲಕ್ಕೇರಿಸಿದರು. ಆ ನಂತರ ಟೀಂ ಇಂಡಿಯಾದ ಈ ಜೋಡಿ ಗೇರ್ ಬದಲಾಯಿಸಿ ಬ್ಯಾಟಿಂಗ್ ಆರಂಭಿಸಿತು. ಅವಕಾಶ ಸಿಕ್ಕಾಗ ಇಬ್ಬರೂ ದೊಡ್ಡ ಹೊಡೆತಗಳನ್ನು ಆಡಿ ಅರ್ಧಶತಕ ದಾಖಲಿಸಿದರು. ಇವರಿಬ್ಬರು ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ವಿಕೆಟ್‌ಗೆ 165 ರನ್‌ಗಳ ಜೊತೆಯಾಟವನ್ನು ದಾಖಲಿಸಿದರು. ವಿರಾಟ್ ಕೊಹ್ಲಿ 116 ಎಸೆತಗಳಲ್ಲಿ 6 ಬೌಂಡರಿಗಳ ಸಹಾಯದಿಂದ 85 ರನ್ ಗಳಿಸಿ ಔಟಾದರೆ, ಕೆಎಲ್ ರಾಹುಲ್ 115 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ 97 ರನ್ ಗಳಿಸಿ ಅಜೇಯರಾಗಿ ಉಳಿದರು.

ಅಂತಿಮವಾಗಿ ರಾಹುಲ್ ಸಿಕ್ಸರ್ ಬಾರಿಸಿ ಟೀಂ ಇಂಡಿಯಾಗೆ ಜಯ ತಂದುಕೊಟ್ಟರು. ದುರದೃಷ್ಟವಶಾತ್ ಕೆಎಲ್ ರಾಹುಲ್​ಗೆ ಶತಕ ಪೂರೈಸಲು ಸಾಧ್ಯವಾಗಲಿಲ್ಲ. ಹಾರ್ದಿಕ್ ಔಟಾಗದೆ 11 ರನ್ ಗಳಿಸಿದರು. ಆಸೀಸ್ ಪರ ಜೋಶ್ ಹ್ಯಾಜಲ್‌ವುಡ್ ಅತಿ ಹೆಚ್ಚು 3 ವಿಕೆಟ್‌ಗಳನ್ನು ಕಬಳಿಸಿದರೆ, ಮಿಚೆಲ್ ಸ್ಟಾರ್ಕ್ ಏಕೈಕ ವಿಕೆಟ್ ಪಡೆದರು.

ಹಳೆಯ ದಾಖಲೆ ಉಡೀಸ್

ಏತನ್ಮಧ್ಯೆ, ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಚೆನ್ನೈನಲ್ಲಿ ಆಸ್ಟ್ರೇಲಿಯಾದ 36 ವರ್ಷಗಳ ದಾಖಲೆಯನ್ನು ಪುಡಿಗಟ್ಟಿದೆ. ಇದಕ್ಕೂ ಮೊದಲು 1987ರಲ್ಲಿ ಚೆನ್ನೈನಲ್ಲಿ ನಡೆದ ವಿಶ್ವಕಪ್‌ ಪಂದ್ಯದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾವನ್ನು ಎದುರಿಸಿತ್ತು. ಆ ಪಂದ್ಯದಲ್ಲಿ ಭಾರತ, ಆಸ್ಟ್ರೇಲಿಯಾ 1 ರನ್‌ಗಳಿಂದ ಮಣಸಿಇ ರೋಚಕ ಜಯ ಸಾಧಿಸಿತು. ಆದರೆ ಆ ಬಳಿಕ ಚೆಪಾಕ್‌ನಲ್ಲಿ ಭಾರತದ ವಿರುದ್ಧ ಕಾಂಗರೂಗಳು ಸೋತೇ ಇರಲಿಲ್ಲ. ಇದೀಗ 36 ವರ್ಷಗಳ ನಂತರ ಟೀಂ ಇಂಡಿಯಾ ಆ ಗೆಲುವಿನ ಸರಣಿಯನ್ನು ಅಂತ್ಯಗೊಳಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 am, Mon, 9 October 23

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ