U19 World Cup 2024: ಬಾಂಗ್ಲಾ ತಂಡವನ್ನು 84 ರನ್​ಗಳಿಂದ ಮಣಿಸಿ ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದ ಭಾರತ..!

U19 World Cup 2024: ದಕ್ಷಿಣ ಆಫ್ರಿಕಾದ ಬ್ಲೋಮ್‌ಫಾಂಟೈನ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂಡರ್ 19 ವಿಶ್ವಕಪ್ ಮೊದಲ ಪಂದ್ಯದಲ್ಲಿ ಉದಯ್ ಸಹರಾನ್ ನೇತೃತ್ವದ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 84 ರನ್​ಗಳಿಂದ ಮಣಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

U19 World Cup 2024: ಬಾಂಗ್ಲಾ ತಂಡವನ್ನು 84 ರನ್​ಗಳಿಂದ ಮಣಿಸಿ ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದ ಭಾರತ..!
ಭಾರತ ತಂಡ
Follow us
|

Updated on:Jan 20, 2024 | 9:46 PM

ದಕ್ಷಿಣ ಆಫ್ರಿಕಾದ ಬ್ಲೋಮ್‌ಫಾಂಟೈನ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಿನ ಅಂಡರ್ 19 ವಿಶ್ವಕಪ್ (U19 World Cup 2024) ಮೊದಲ ಪಂದ್ಯದಲ್ಲಿ ಉದಯ್ ಸಹರಾನ್ (Uday Saharan) ನೇತೃತ್ವದ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 84 ರನ್​ಗಳಿಂದ ಮಣಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆದರ್ಶ್ ಸಿಂಗ್ ಸಿಡಿಸಿದ 76 ರನ್ ಹಾಗೂ ನಾಯಕ ಉದಯ್ ಸಹರಾನ್ ಅವರ 64 ರನ್​ಗಳ ಕೊಡುಗೆಯಿಂದಾಗಿ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಪೂರ್ಣ 50 ಓವರ್​ಗಳನ್ನು ಆಡಲಾಗದೆ 45.5 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್​ ಕಳೆದುಕೊಂಡು 167 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆರಂಭಿಕ ಆದರ್ಶ್ ಸಿಂಗ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಆದರ್ಶ್​- ಸಹರಾನ್ ಅರ್ಧಶತಕ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಅರ್ಶಿನ್ ಕುಲಕರ್ಣಿ 7 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮುಶೀರ್ ಖಾನ್ ಕೂಡ 3 ರನ್​ಗಳಿಗೆ ಸುಸ್ತಾದರು. ಆದರೆ ಮತ್ತೊಬ್ಬ ಆರಂಭಿಕ ಆದರ್ಶ್​ ಸಿಂಗ್ ಜೊತೆಯಾದ ನಾಯಕ ಉದಯ್ ಸಹರಾನ್ ತಂಡದ ಇನ್ನಿಂಗ್ಸ್ ಕೈಗೆತ್ತಿಕೊಂಡರು. ಇಬ್ಬರೂ ಸೇರಿ ಟೀಂ ಇಂಡಿಯಾದ ಇನ್ನಿಂಗ್ಸ್‌ ನಿಭಾಯಿಸಿ ಭಾರತವನ್ನು ಗೌರವಾನ್ವಿತ ಸ್ಕೋರ್‌ಗೆ ಕೊಂಡೊಯ್ದರು.

ಟೀಂ ಇಂಡಿಯಾ ನಾಯಕನ ಜೊತೆ ಕಾಲ್ಕೆರೆದು ಜಗಳಕ್ಕೆ ಬಂದ ಬಾಂಗ್ಲಾ ಆಟಗಾರರು; ವಿಡಿಯೋ ನೋಡಿ

ಕೆಳಕ್ರಮಾಂಕದಲ್ಲಿ ಪ್ರಿಯಾಂಶು ಮೊಲಿಯಾ ಹಾಗೂ ಅರವಳ್ಳಿ ಅವನೀಶ್ ರಾವ್ ತಲಾ 23 ರನ್​ಗಳ ಕೊಡುಗೆ ನೀಡಿದರು. ಸಚಿನ್ ದಾಸ್ 26 ರನ್​ಗಳ ಇನ್ನಿಂಗ್ಸ್​ನಿಂದಾಗಿ ತಂಡ 251 ರನ್​ಗಳ ಗೌರವಾನ್ವಿತ ಮೊತ್ತ ಕಲೆಹಾಕಿತು. ಬಾಂಗ್ಲಾದೇಶ ಪರ ಬೌಲಿಂಗ್​ನಲ್ಲಿ ಮಿಂಚಿದ ಮರುಫ್ ಅತ್ಯಧಿಕ 5 ವಿಕೆಟ್ ಪಡೆದ ಸಾಧನೆ ಮಾಡಿದರು.

167 ರನ್‌ಗಳಿಗೆ ಬಾಂಗ್ಲಾ ಆಲೌಟ್

ಟೀಂ ಇಂಡಿಯಾ ನೀಡಿದ 253 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡ 45.5 ಓವರ್‌ಗಳಲ್ಲಿ 167 ರನ್‌ಗಳಿಗೆ ಆಲೌಟ್ ಆಯಿತು. ಬಾಂಗ್ಲಾ ತಂಡದ ಪರ ಅರಿಫುಲ್ ಇಸ್ಲಾಂ 41 ರನ್​ಗಳ ಇನ್ನಿಂಗ್ಸ್ ಆಡಿದರೆ, ಮೊಹಮ್ಮದ್ ಶಿಹಾಬ್ ಜೇಮ್ಸ್ 54 ರನ್​ಗಳ ಹೋರಾಟದ ಇನ್ನಿಂಗ್ಸ್ ಕಟ್ಟಿದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಭಾರತದ ಪರ ಬೌಲಿಂಗ್​ನಲ್ಲಿ ಮಿಂಚಿದ ಸೌಮ್ಯ ಪಾಂಡೆ 9.5 ಓವರ್‌ಗಳಲ್ಲಿ 24 ರನ್ ನೀಡಿ 4 ವಿಕೆಟ್ ಪಡೆದರು. ಇವರೊಂದಿಗೆ ಮುಶೀರ್ ಖಾನ್ 10 ಓವರ್‌ಗಳಲ್ಲಿ 35 ರನ್ ನೀಡಿ ಎರಡು ಪ್ರಮುಖ ವಿಕೆಟ್ ಪಡೆದರು. ಇನ್ನು ಪಾಯಿಂಟ್ಸ್ ಟೇಬಲ್ ಬಗ್ಗೆ ಮಾತನಾಡುವುದಾದರೆ, ಟೀಂ ಇಂಡಿಯಾ ಈ ಗೆಲುವಿನೊಂದಿಗೆ ಎರಡು ಪಾಯಿಂಟ್ ಮತ್ತು 1.68 ನೆಟ್ ರನ್ ರೇಟ್‌ನೊಂದಿಗೆ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 pm, Sat, 20 January 24

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!