AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ಮಣಿಸಿದ ಟೀಂ ಇಂಡಿಯಾ

T20 World Cup warm-up: ನವಿ ಮುಂಬೈನಲ್ಲಿ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 30 ರನ್​ಗಳ ಅಮೋಘ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 241 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ದಕ್ಷಿಣ ಆಫ್ರಿಕಾ 210 ರನ್ ಗಳಿಸಿ ಸೋಲಪ್ಪಿತು. ವಿಶ್ವಕಪ್‌ಗೆ ಮುನ್ನ ಭಾರತದ ಭರ್ಜರಿ ಪ್ರದರ್ಶನ ಇದಾಗಿದೆ.

IND vs SA: ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ಮಣಿಸಿದ ಟೀಂ ಇಂಡಿಯಾ
Team India
ಪೃಥ್ವಿಶಂಕರ
|

Updated on:Feb 04, 2026 | 10:54 PM

Share

ನವಿ ಮುಂಬೈನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ (India South Africa) ನಡುವೆ ಟಿ20 ವಿಶ್ವಕಪ್ (T20 World Cup) ಅಭ್ಯಾಸ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಭಾರತ 30 ರನ್​ಗಳ ಅಮೋಘ ಜಯ ಸಾಧಿಸುವ ಮೂಲಕ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಬರೋಬ್ಬರಿ 241 ರನ್ ಕಲೆಹಾಕಿತು. ತಂಡದ ಪರ ಆಡಿದ ಎಲ್ಲಾ ಬ್ಯಾಟ್ಸ್‌ಮನ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೂಡ ಉತ್ತಮ ಹೋರಾಟ ನೀಡಿತ್ತಾದರೂ ಗುರಿ ಬೆನ್ನಟ್ಟಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಆಫ್ರಿಕಾ ತಂಡ 210 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಭಾರತಕ್ಕೆ ಸ್ಫೋಟಕ ಆರಂಭ

ಭಾರತದ ಪರ ಅಭಿಷೇಕ್ ಶರ್ಮಾ ಜೊತೆ ಇಶಾನ್ ಕಿಶನ್ ಬ್ಯಾಟಿಂಗ್ ಆರಂಭಿಸಿದರು. ಈ ಆರಂಭಿಕ ಜೋಡಿ ಭಾರತಕ್ಕೆ ಉತ್ತಮ ಆರಂಭ ನೀಡಿ ಐದನೇ ಓವರ್‌ನಲ್ಲಿಯೇ 50 ರನ್‌ಗಳ ಗಡಿ ದಾಟಿಸಿದರು. ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಕಿಶನ್​ ಅವರ ಈ ಇನ್ನಿಂಗ್ಸ್​ನಲ್ಲಿ ಎರಡು ಬೌಂಡರಿ ಮತ್ತು ಏಳು ಸಿಕ್ಸರ್‌ಗಳು ಸೇರಿದ್ದವು.

ಅಭಿಷೇಕ್ ಶರ್ಮಾ ಕೂಡ 18 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 24 ರನ್ ಬಾರಿಸಿದರೆ, ತಿಲಕ್ ವರ್ಮಾ 19 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್ ನೆರವಿನಿಂದ 45 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್ ನೆರವಿನಿಂದ 30 ರನ್ ಗಳಿಸಿದರೆ ರಿಂಕು ಸಿಂಗ್ 16 ರನ್ ಬಾರಿಸಿದರು.

ಹಾರ್ದಿಕ್ ಪಾಂಡ್ಯ 10 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 30 ರನ್ ಬಾರಿಸಿದರೆ, ಅಕ್ಷರ್ ಪಟೇಲ್ 23 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ ಅಜೇಯ 35 ರನ್ ಸಿಡಿಸಿದರು. ದಕ್ಷಿಣ ಆಫ್ರಿಕಾ ಪರ ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಅನ್ರಿಚ್ ನೋಕಿಯಾ ಮತ್ತು ಕ್ವೆನಾ ಎಂಫಕಾ ತಲಾ ಒಂದು ವಿಕೆಟ್ ಪಡೆದರು.

T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ

210 ರನ್ ಕಲೆಹಾಕಿದ ಆಫ್ರಿಕಾ

241 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಉತ್ತಮ ಆರಂಭವನ್ನು ಪಡೆಯಲು ವಿಫಲವಾಯಿತು. ಜಾರ್ಜ್ ಲಿಂಡೆ ರನ್ ಗಳಿಸದೆ ಔಟಾದರು. ನಾಯಕ ಐಡೆನ್ ಮಾರ್ಕ್ರಾಮ್ ಕೂಡ 38 ರನ್ ಗಳಿಸಿ ನಿವೃತ್ತರಾದರು. ರಿಯಾನ್ ರಿಕಲ್ಟನ್ 44 ರನ್‌ಗಳ ಇನ್ನಿಂಗ್ಸ್ ಆಡಿದರೆ ಟ್ರಿಸ್ಟಾನ್ ಸ್ಟಬ್ಸ್ ಕೂಡ 45 ರನ್‌ ಬಾರಿಸಿ ಅಜೇಯರಾಗಿ ಉಳಿದರು. ಮಾರ್ಕೊ ಯಾನ್ಸೆನ್ ಕೂಡ 31 ರನ್‌ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 210 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

ಮತ್ತೊಂದೆಡೆ, ಈ ಪಂದ್ಯದಲ್ಲಿ ಭಾರತದ ಪರ ಅಭಿಷೇಕ್ ಶರ್ಮಾ ಎರಡು ವಿಕೆಟ್ ಪಡೆರೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಶಿವಂ ದುಬೆ ಮತ್ತು ಅರ್ಷದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು. ಭಾರತವು ಅಭ್ಯಾಸ ಪಂದ್ಯದ ಸಂಪೂರ್ಣ ಲಾಭವನ್ನು ಪಡೆದುಕೊಂಡು ಒಂಬತ್ತು ಬೌಲರ್‌ಗಳನ್ನು ಬಳಸಿತು. ಆದಾಗ್ಯೂ, ತಂಡದ ಪ್ರಮುಖ ಬೌಲರ್ ಅರ್ಷದೀಪ್ ಸಿಂಗ್ ಅವರಿಗೆ ಪೂರ್ಣ ನಾಲ್ಕು ಓವರ್‌ಗಳನ್ನು ಬೌಲಿಂಗ್ ಮಾಡುವ ಅವಕಾಶ ನೀಡಲಾಯಿತು. ಆದಾಗ್ಯೂ, ಜಸ್ಪ್ರೀತ್ ಬುಮ್ರಾ ಮೈದಾನಕ್ಕೆ ಇಳಿಯಲಿಲ್ಲ.

Published On - 10:49 pm, Wed, 4 February 26

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ