AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಪಂದ್ಯ 40 ವಿಕೆಟ್..! ಭಾರತದ ಬೌಲರ್​ಗಳ ಮುಂದೆ ಎದುರಾಳಿಯ ಶರಣಾಗತಿ

Champions Trophy 2025: ಭಾರತವು 2025 ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಭಾರತೀಯ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾವನ್ನು ಕೇವಲ 49.3 ಓವರ್‌ಗಳಲ್ಲಿ 264 ರನ್‌ಗಳಿಗೆ ಆಲೌಟ್ ಮಾಡಿದರು. ಮೊಹಮ್ಮದ್ ಶಮಿ 3 ವಿಕೆಟ್‌ಗಳನ್ನು ಪಡೆದು ಅತ್ಯುತ್ತಮ ಪ್ರದರ್ಶನ ನೀಡಿದರು. ಈ ಟೂರ್ನಿಯಲ್ಲಿ ಭಾರತ 4 ಪಂದ್ಯಗಳಲ್ಲೂ ಎದುರಾಳಿ ತಂಡವನ್ನು ಆಲೌಟ್ ಮಾಡಿ 40 ವಿಕೆಟ್‌ಗಳನ್ನು ಪಡೆದಿದೆ.

IND vs AUS: 4 ಪಂದ್ಯ 40 ವಿಕೆಟ್..! ಭಾರತದ ಬೌಲರ್​ಗಳ ಮುಂದೆ ಎದುರಾಳಿಯ ಶರಣಾಗತಿ
Team India
ಪೃಥ್ವಿಶಂಕರ
|

Updated on: Mar 04, 2025 | 8:37 PM

Share

2025 ರ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ದುಬೈನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತೀಯ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿ ಕಾಂಗರೂ ತಂಡಕ್ಕೆ ಪೂರ್ಣ 50 ಓವರ್‌ಗಳನ್ನು ಆಡಲು ಅವಕಾಶ ನೀಡಲಿಲ್ಲ. ಬಲಿಷ್ಠ ಬ್ಯಾಟಿಂಗ್ ಪಡೆಯನ್ನೇ ಹೊಂದಿರುವ ಆಸ್ಟ್ರೇಲಿಯಾ ಇನ್ನು 3 ಎಸೆತಗಳು ಬಾಕಿ ಇರುವಂತೆಯೇ ಆಲೌಟ್ ಆಯಿತು. ಇದರೊಂದಿಗೆ ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಅಮೋಘ ಸಾಧನೆ ಮಾಡಿದ್ದು, ಈ ಟೂರ್ನಿಯಲ್ಲಿ ಆಡಿದ 4 ಪಂದ್ಯಗಳಲ್ಲೂ ಎದುರಾಳಿ ತಂಡವನ್ನು ಆಲೌಟ್ ಮಾಡಿದ ದಾಖಲೆ ಬರೆದಿದೆ. ಟೂರ್ನಿಯಲ್ಲಿ ಇದುವರೆಗೆ ಆಡಿರುವ ಎಲ್ಲಾ ಪಂದ್ಯಗಳಲ್ಲಿ ಭಾರತೀಯ ಬೌಲರ್‌ಗಳು ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಶಮಿ ಅದ್ಭುತ ಪ್ರದರ್ಶನ

ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಮಾತ್ರ ಆಡುತ್ತಿದೆ. ಈ ಮೈದಾನದಲ್ಲಿ ಇಲ್ಲಿಯವರೆಗೆ ಆಡಿರುವ 4 ಪಂದ್ಯಗಳಲ್ಲಿ ಭಾರತೀಯ ಬೌಲರ್‌ಗಳು ಮೇಲುಗೈ ಸಾಧಿಸಿದ್ದು, ಎದುರಾಳಿ ತಂಡದ ಬ್ಯಾಟಿಂಗ್ ವಿಭಾಗವನ್ನು ದ್ವಂಸಗೊಳಿಸುವ ಕೆಲಸ ಮಾಡಿದ್ದಾರೆ. ಇದೀಗ ಸೆಮಿಫೈನಲ್‌ನಲ್ಲೂ ಅದೇ ಪ್ರದರ್ಶನ ನೀಡಿದ್ದು ಆಸ್ಟ್ರೇಲಿಯಾ ತಂಡವನ್ನು 49.3 ಓವರ್‌ಗಳಲ್ಲಿ 264 ರನ್‌ಗಳಿಗೆ ಆಲೌಟ್ ಮಾಡಿದ್ದಾರೆ.

ಭಾರತದ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ಮೊಹಮ್ಮದ್ ಶಮಿ 10 ಓವರ್‌ಗಳಲ್ಲಿ 48 ರನ್‌ ನೀಡಿ 3 ವಿಕೆಟ್‌ಗಳನ್ನು ಪಡೆದರು. ಇದರೊಂದಿಗೆ ಶಮಿ, ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ, ಜಹೀರ್ ಖಾನ್ 17 ವಿಕೆಟ್‌ಗಳೊಂದಿಗೆ 1 ನೇ ಸ್ಥಾನದಲ್ಲಿದ್ದರೆ, ಸಚಿನ್ ತೆಂಡೂಲ್ಕರ್ 15 ವಿಕೆಟ್‌ಗಳೊಂದಿಗೆ 2 ನೇ ಸ್ಥಾನದಲ್ಲಿದ್ದಾರೆ. ಶಮಿ ಹೊರತುಪಡಿಸಿ, ಈ ಪಂದ್ಯದಲ್ಲಿ ವರುಣ್ ಚಕ್ರವರ್ತಿ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಕೂಡ ತಲಾ 1 ವಿಕೆಟ್ ಪಡೆದರು.

4 ಪಂದ್ಯಗಳಲ್ಲಿ 40 ವಿಕೆಟ್‌

ಭಾರತ ತಂಡವು ಈ ಹಿಂದೆ ದುಬೈ ಮೈದಾನದಲ್ಲಿ 3 ಗುಂಪು ಹಂತದ ಪಂದ್ಯಗಳನ್ನು ಆಡಿತ್ತು. ಈ ವೇಳೆ ತಂಡವು ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಬಾಂಗ್ಲಾದೇಶವನ್ನು ಎದುರಿಸಿತು. ಈ ಪಂದ್ಯಗಳಲ್ಲಿ, ಭಾರತೀಯ ಬೌಲರ್‌ಗಳು ಎದುರಾಳಿ ತಂಡದ ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸಿದರು. ಬಾಂಗ್ಲಾದೇಶ ವಿರುದ್ಧ ಶುಭಾರಂಭ ಮಾಡಿದ್ದ ಭಾರತ 228 ರನ್‌ಗಳಿಗೆ ಆಲೌಟ್ ಮಾಡಿತ್ತು.

ಈ ಪಂದ್ಯದಲ್ಲೂ ಶಮಿ 5 ವಿಕೆಟ್‌ಗಳನ್ನು ಕಬಳಿಸಿದ್ದರು. ಇದಾದ ನಂತರ, ಫೆಬ್ರವರಿ 23 ರಂದು ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲೂ ಭಾರತದ ಬೌಲರ್​ಗಳು ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸಿದ್ದರು. ಅಂತಿಮವಾಗಿ ಮಾರ್ಚ್ 2 ರಂದು ನಡೆದಿದ್ದ ನ್ಯೂಜಿಲೆಂಡ್ ವಿರುದ್ಧವೂ ಎಲ್ಲಾ 10 ವಿಕೆಟ್‌ಗಳನ್ನು ಉರುಳಿಸಿದ್ದರು. ಈಗ ಈ ಸಾಧನೆ ಸೆಮಿಫೈನಲ್‌ನಲ್ಲಿ ಸತತ ನಾಲ್ಕನೇ ಬಾರಿಗೆ ಪುನರಾವರ್ತನೆಯಾಗಿದೆ. ಈ ರೀತಿಯಾಗಿ ಭಾರತೀಯ ಬೌಲರ್‌ಗಳು 4 ಪಂದ್ಯಗಳಲ್ಲಿ ಎಲ್ಲಾ 40 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ