India Capitals vs Gujarat Giants: 9 ಸಿಕ್ಸ್​, 8 ಫೋರ್: ಸಿಡಿಲಬ್ಬರದ ಶತಕ ಸಿಡಿಸಿದ ವಿಂಡೀಸ್ ಆಟಗಾರ

| Updated By: ಝಾಹಿರ್ ಯೂಸುಫ್

Updated on: Sep 18, 2022 | 12:32 PM

Legends League Cricket: 180 ರನ್​ಗಳ ಟಾರ್ಗೆಟ್ ಪಡೆದ ಇಂಡಿಯಾ ಕ್ಯಾಪಿಟಲ್ಸ್ ತಂಡ ಕೂಡ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ನಾಯಕ ಸೆಹ್ವಾಗ್ ಕೇವಲ 6 ರನ್​ಗಳಿಸಿ ಹೊರನಡೆದಿದ್ದರು.

India Capitals vs Gujarat Giants: 9 ಸಿಕ್ಸ್​, 8 ಫೋರ್: ಸಿಡಿಲಬ್ಬರದ ಶತಕ ಸಿಡಿಸಿದ ವಿಂಡೀಸ್ ಆಟಗಾರ
Ashley Nurse
Follow us on

ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನವು ಲೆಜೆಂಡ್ಸ್ ಲೀಗ್​ನ ಮೊದಲ ಪಂದ್ಯದಲ್ಲೇ ಸಿಕ್ಸ್​-ಫೋರ್​ಗಳ ಸುರಿಮಳೆಯಾಗಿದೆ. ಶನಿವಾರ ನಡೆದ ಈ ಪಂದ್ಯದಲ್ಲಿ ವೀರೇಂದ್ರ ಸೆಹ್ವಾಗ್ ನಾಯಕತ್ವದ ಇಂಡಿಯಾ ಕ್ಯಾಪಿಟಲ್ಸ್ ಹಾಗೂ ಜಾಕ್ಸ್ ಕಾಲಿಸ್ ನೇತೃತ್ವದ ಗುಜರಾತ್ ಜೈಂಟ್ಸ್​ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಗುಜರಾತ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಗುಜರಾತ್ ಜೈಂಟ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಪವರ್​ಪ್ಲೇನಲ್ಲೇ 34 ರನ್​ಗಳಿಗೆ 4 ಪ್ರಮುಖ ವಿಕೆಟ್​ ಕಳೆದುಕೊಂಡು ಗುಜರಾತ್ ತಂಡವು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕಣಕ್ಕಿಳಿದ ವೆಸ್ಟ್ ಇಂಡೀಸ್ ಆಟಗಾರ ಆ್ಯಶ್ಲೆ ನರ್ಸ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.

ಇಂಡಿಯಾ ಕ್ಯಾಪಿಟಲ್ಸ್​ ತಂಡದ ಬೌಲರ್​ಗಳ ಬೆಂಡೆತ್ತಿದ ನರ್ಸ್​ 9 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಕೇವಲ 41 ಎಸೆತಗಳಲ್ಲಿ ಶತಕ ಸಿಡಿಸಿದರು. ಅಲ್ಲದೆ 43 ಎಸೆತಗಳಲ್ಲಿ ಅಜೇಯ 103 ರನ್​ ಬಾರಿಸುವ ಮೂಲಕ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 7 ವಿಕೆಟ್​ ನಷ್ಟಕ್ಕೆ 179 ಕ್ಕೆ ತಂದು ನಿಲ್ಲಿಸಿದರು.

ಇದನ್ನೂ ಓದಿ
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

180 ರನ್​ಗಳ ಟಾರ್ಗೆಟ್ ಪಡೆದ ಇಂಡಿಯಾ ಕ್ಯಾಪಿಟಲ್ಸ್ ತಂಡ ಕೂಡ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ನಾಯಕ ಸೆಹ್ವಾಗ್ ಕೇವಲ 6 ರನ್​ಗಳಿಸಿ ಹೊರನಡೆದಿದ್ದರು. ಆದರೆ ಮತ್ತೋರ್ವ ಆರಂಭಿಕ ಐರ್ಲೆಂಡ್​ನ ಕೆವಿನ್ ಓಬ್ರಿಯೆನ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದರು. ಪರಿಣಾಮ ಇಂಡಿಯಾ ಕ್ಯಾಪಿಟಲ್ಸ್ ತಂಡವು ವಿಕೆಟ್ ಕಳೆದುಕೊಳ್ಳುತ್ತಿದ್ದರೂ ರನ್​ಗತಿ ಹೆಚ್ಚುತ್ತಾ ಹೋಯಿತು.

ಅದರಂತೆ ಕೆವಿನ್ ಓಬ್ರಿಯೆನ್ 61 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 15 ಫೋರ್ ಬಾರಿಸಿ ತಂಡವನ್ನು ಗೆಲುವಿನ ಅಂಚಿಗೆ ತಂದು ನಿಲ್ಲಿಸಿದರು. ಅಂತಿಮವಾಗಿ ಇಂಡಿಯಾ ಕ್ಯಾಪಿಟಲ್ಸ್ ತಂಡವು 18.4 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್​ ಬಾರಿಸುವ ಮೂಲಕ 3 ವಿಕೆಟ್​ಗಳ ರೋಚಕ ಜಯವನ್ನು ತನ್ನದಾಗಿಸಿಕೊಂಡಿತು.

ಇನ್ನು ಈ ಸೋಲಿನ ಹೊರತಾಗಿಯೂ ಗುಜರಾತ್ ಜೈಂಟ್ಸ್ ಪರ ಕೇವಲ 41 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದ ಆ್ಯಶ್ಲೇ ನರ್ಸ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.