
ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ 6ನೇ ಪಂದ್ಯದಲ್ಲಿ ಇಂದು ಇಂಡಿಯಾ ಚಾಂಪಿಯನ್ಸ್ ಹಾಗೂ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ನಾರ್ಥಂಪ್ಟನ್ನ ಕೌಂಟಿ ಗ್ರೌಂಡ್ನಲ್ಲಿ ನಡೆಯಲಿರುವ ಈ ಪಂದ್ಯವು ಇಂಡಿಯಾ ಚಾಂಪಿಯನ್ಸ್ ತಂಡದ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಪಂದ್ಯದಿಂದ ಹಿಂದೆ ಸರಿದಿರುವ ಕಾರಣ ಭಾರತ ತಂಡಕ್ಕೆ ಕೇವಲ ಒಂದು ಅಂಕ ಮಾತ್ರ ಲಭಿಸಿದೆ.
ಆದರೆ ಅತ್ತ ಪಾಕಿಸ್ತಾನ್ ಚಾಂಪಿಯನ್ಸ್ ತಂಡವು ಭಾರತದೊಂದಿಗೆ ಅಂಕವನ್ನು ಹಂಚಿಕೊಳ್ಳಲು ನಿರಾಕರಿಸಿದೆ. ಅಂದರೆ ಇಂಡಿಯಾ ಚಾಂಪಿಯನ್ಸ್ ತಂಡವು ಪಂದ್ಯದಿಂದ ಹಿಂದೆ ಸರಿದಿರುವ ಕಾರಣ 2 ಅಂಕಗಳನ್ನು ತಮಗೆ ನೀಡಬೇಕೆಂದು ಪಾಕಿಸ್ತಾನ್ ಚಾಂಪಿಯನ್ಸ್ ತಂಡದ ಮಾಲೀಕರಾದ ಕಾಮಿಲ್ ಖಾನ್ ಆಗ್ರಹಿಸಿದ್ದಾರೆ.
ಹೀಗಾಗಿ ಇಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡಕ್ಕೆ ಸೋಲುಣಿಸಿ ಇಂಡಿಯಾ ಚಾಂಪಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೇಲೇರಬೇಕಾಗಿರುವುದು ಅನಿವಾರ್ಯ. ಅದರಂತೆ ಇಂದಿನ ಪಂದ್ಯದಲ್ಲಿ ಮಾಜಿ ಆಟಗಾರರಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಇಂಡಿಯಾ ಚಾಂಪಿಯನ್ಸ್ vs ಸೌತ್ ಆಫ್ರಿಕಾ ಚಾಂಪಿಯನ್ಸ್ ನಡುವಣ ಮುಖಾಮುಖಿಯಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ಲೈವ್ ವೀಕ್ಷಿಸಬಹುದು.
ಟಿ20 ಸ್ವರೂಪದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 9 ಗಂಟೆಗೆ ಶುರುವಾಗಲಿದೆ.
ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡ: ರಿಚರ್ಡ್ ಲೆವಿ, ಹಾಶಿಮ್ ಆಮ್ಲಾ, ಎಬಿ ಡಿವಿಲಿಯರ್ಸ್ (ನಾಯಕ), ಸರೆಲ್ ಎರ್ವೀ, ಜೀನ್-ಪಾಲ್ ಡುಮಿನಿ, ಜೆಜೆ ಸ್ಮಟ್ಸ್, ಮೊರ್ನೆ ವ್ಯಾನ್ ವೈಕ್ (ವಿಕೆಟ್ ಕೀಪರ್), ವೇಯ್ನ್ ಪಾರ್ನೆಲ್, ಕ್ರಿಸ್ ಮೊರಿಸ್, ಹಾರ್ಡಸ್ ವಿಲ್ಜೊಯೆನ್, ಡುವಾನ್ನೆ ಒಲಿವಿಯರ್, ಆರೊನ್ ಫೈಂಗ್ಲಾಸ್, ಡೇನ್ ವಿಲಾಸ್, ಇಮ್ರಾನ್ ತಾಹಿರ್, ಹೆನ್ರಿ ಡೇವಿಡ್ಸ್, ಆಲ್ಬಿ ಮೊರ್ಕೆಲ್, ಜಾಕ್ವೆಸ್ ರುಡಾಲ್ಫ್.
ಇದನ್ನೂ ಓದಿ: 34,504 ಎಸೆತಗಳು… ಗೆರೆ ದಾಟದೇ ವಿಶ್ವ ದಾಖಲೆ ನಿರ್ಮಿಸಿದ ನಾಥನ್ ಲಿಯಾನ್
ಇಂಡಿಯಾ ಚಾಂಪಿಯನ್ಸ್ ತಂಡ: ಶಿಖರ್ ಧವನ್, ರಾಬಿನ್ ಉತ್ತಪ್ಪ (ವಿಕೆಟ್ ಕೀಪರ್), ಸುರೇಶ್ ರೈನಾ, ಅಂಬಾಟಿ ರಾಯುಡು, ಯುವರಾಜ್ ಸಿಂಗ್ (ನಾಯಕ), ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಪಿಯೂಶ್ ಚಾವ್ಲಾ, ವಿನಯ್ ಕುಮಾರ್, ವರುಣ್ ಆರೋನ್, ಪವನ್ ನೇಗಿ, ಗುರುಕೀರತ್ ಸಿಂಗ್ ಮಾನ್, ಅಭಿಮನ್ಯು ಮಿಥುನ್, ಸಿದ್ಧಾರ್ಥ್ ಕೌಲ್, ಸ್ಟುವರ್ಟ್ ಬಿನ್ನಿ.
Published On - 11:09 am, Tue, 22 July 25