
ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬೌಲಿಂಗ್ ಮಾಡುತ್ತಿರುವ ಟೀಂ ಇಂಡಿಯಾ (Team India) ಆರಂಭಿಕ ಹಿನ್ನಡೆಯ ಬಳಿಕ ಅದ್ಭುತ ಪುನರಾಗಮನ ಮಾಡಿದೆ. ಮೊದಲ ವಿಕೆಟ್ ಕಬಳಿಸಲು 61 ರನ್ಗಳನ್ನು ಬಿಟ್ಟುಕೊಟ್ಟಿದ್ದ ಟೀಂ ಇಂಡಿಯಾ ಆ ಬಳಿಕ ಪ್ರಮುಖ 5 ವಿಕೆಟ್‌ಗಳನ್ನು ಕೇವಲ 19 ರನ್ಗಳ ಅಂತರದಲ್ಲಿ ಪಡೆದುಕೊಂಡಿದೆ. ಇದರಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಅವರ ಕೊಡುಗೆಯೂ ಅಪಾರವಾಗಿದೆ. ಪ್ರಸಿದ್ಧ್ ಒಂದೇ ಓವರ್‌ನಲ್ಲಿ ಎರಡು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು. ಮೊದಲಿಗೆ ಅನುಭವಿ ಬಟ್ಲರ್ ವಿಕೆಟ್ ಪಡೆದ ಪ್ರಸಿದ್ಧ್ ಆ ಬಳಿಕ ಆಲ್‌ರೌಂಡರ್ ಸ್ಯಾಮ್ ಕರನ್ ಅವರನ್ನು ಖಾತೆ ತೆರೆಯಲು ಬಿಡಲಿಲ್ಲ.
ವಾಸ್ತವವಾಗಿ ಇದೇ ಪ್ರಸಿದ್ಧ್ ಕೃಷ್ಣ ಏಕದಿನ ಸರಣಿಗೂ ಮುನ್ನ ನಡೆದಿದ್ದ ಟಿ20 ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಸರಾಗವಾಗಿ ರನ್ ಬಿಟ್ಟುಕೊಟ್ಟು ತಂಡದ ಸೋಲಿಗೆ ಕಾರಣವೂ ಆಗಿದ್ದರು. ಹೀಗಾಗಿ ಪ್ರಸಿದ್ಧ್ ಅವರನ್ನು ಟಿ20 ತಂಡದಿಂದ ಕೈಬಿಡಲಾಗಿತ್ತು. ಇದೀಗ ಏಕದಿನ ಸರಣಿಯಲ್ಲಿ ತಮ್ಮ ಹಳೆಯ ತಪ್ಪುಗಳನ್ನು ತಿದ್ದಿಕೊಂಡು ಕಣಕ್ಕಿಳಿದಿರುವ ಪ್ರಸಿದ್ಧ್ ಇಂಗ್ಲೆಂಡ್ ಬ್ಯಾಟರ್ಗಳಿಗೆ ಸುಲಭವಾಗಿ ರನ್ ಬಿಟ್ಟುಕೊಡದೆ ಅವರನ್ನು ಒತ್ತಡಕ್ಕೆ ಸಿಲುಕಿಸಿದ್ದಾರೆ.
ಪ್ರಸಿದ್ಧ್ ತಮ್ಮ ಖೋಟಾದ 6 ಓವರ್ಗಳಲ್ಲಿ ನೀಡಿದ್ದು ಕೇವಲ 20 ರನ್. ಅದರಲ್ಲಿ 8 ರನ್ಗಳು ಕೇವಲ ಬೈಸ್ ಫೋರ್ನಿಂದಲೇ ಬಂದವು. ಅಂದರೆ ಪ್ರಸಿದ್ಧ್ 36 ಎಸೆತಗಳಲ್ಲಿ ನೀಡಿದ್ದು ಕೇವಲ 12 ರನ್ಗಳನ್ನಷ್ಟೇ ಈ 6 ಓವರ್ಗಳಲ್ಲಿ ಪ್ರಸಿದ್ಧ್ 2 ಮೇಡನ್ ಓವರ್ಗಳನ್ನು ಬೌಲ್ ಮಾಡಿದರು. ಅಂದರೆ ಈ 12 ಎಸೆತಗಳಲ್ಲಿ ಪ್ರಸಿದ್ಧ್ ಒಂದೇ ಒಂದು ರನ್ ಬಿಟ್ಟುಕೊಡಲಿಲ್ಲ. ಪ್ರಸಿದ್ಧ್ ಅವರ ಈ ಕಟ್ಟುನಿಟ್ಟಾದ ಬೌಲಿಂಗ್ನಿಂದ ಇಂಗ್ಲೆಂಡ್ಗೆ ಆರಂಭದಲ್ಲಿ ವೇಗವಾಗಿ ರನ್ ಗಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಆರಂಭಿಕರಿಬ್ಬರ ವಿಕೆಟ್ ಪತನದ ಬಳಿಕ ಇಂಗ್ಲೆಂಡ್ ತಂಡದ ಪೆವಿಲಿಯನ್ ಪರೇಡ್ ಶುರುವಾಯಿತು.
IND vs ENG: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
ಇದೇ 17ನೇ ಓವರ್‌ನಲ್ಲಿ ದಾಳಿಗಿಳಿದ ಪ್ರಸಿದ್ಧ್, ಈ ಓವರ್ನ ಮೊದಲನೇ ಎಸೆತದಲ್ಲಿ ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರು. ದೊಡ್ಡ ಹೊಡೆತಕ್ಕೆ ಕೈಹಾಕಿದ ಬಟ್ಲರ್, ಮಿಡ್ ಆನ್ನಲ್ಲಿ ಬ್ರಾರ್ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು. ಬಟ್ಲರ್ ವಿಕೆಟ್ ಪತನದ ಬಳಿಕ ಬಂದ ಸ್ಯಾಮ್ ಕರನ್ ಮೂರು ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸಲು ಸಾಧ್ಯವಾಗದೆ ವಿಕೆಟ್ ಕೀಪರ್ ರಾಹುಲ್ಗೆ ಕ್ಯಾಚ್ ನೀಡಿ ಔಟಾದರು.
Published On - 5:38 pm, Tue, 14 July 26