IND vs AUS: ರಾಹುಲ್ ಬಲಗೈಗೆ ಗಾಯ; ಟೀಂ ಇಂಡಿಯಾಕ್ಕೆ ಹೆಚ್ಚಾಯ್ತು ಟೆನ್ಷನ್

KL Rahul injury: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯಕ್ಕೂ ಮುನ್ನ ಕೆಎಲ್ ರಾಹುಲ್ ಅವರಿಗೆ ಗಾಯವಾಗಿದೆ. ಅಭ್ಯಾಸದ ಸಮಯದಲ್ಲಿ ಅವರ ಬಲಗೈಗೆ ಗಾಯವಾಗಿದೆ ಎಂದು ವರದಿಯಾಗಿದೆ. ಈ ಗಾಯದ ತೀವ್ರತೆ ಇನ್ನೂ ತಿಳಿದುಬಂದಿಲ್ಲವಾದರೂ, ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ರಾಹುಲ್ ಅವರ ಅನುಪಸ್ಥಿತಿಯು ಭಾರತ ತಂಡಕ್ಕೆ ದೊಡ್ಡ ಹೊಡೆತವಾಗಲಿದೆ. ಅವರ ಗಾಯದ ಬಗ್ಗೆ ವೈದ್ಯಕೀಯ ತಂಡ ಪರಿಶೀಲನೆ ನಡೆಸುತ್ತಿದೆ.

IND vs AUS: ರಾಹುಲ್ ಬಲಗೈಗೆ ಗಾಯ; ಟೀಂ ಇಂಡಿಯಾಕ್ಕೆ ಹೆಚ್ಚಾಯ್ತು ಟೆನ್ಷನ್
ಕೆಎಲ್ ರಾಹುಲ್
Follow us
ಪೃಥ್ವಿಶಂಕರ
|

Updated on: Dec 21, 2024 | 3:07 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯವು ಪ್ರತಿಷ್ಠಿತ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ನೆಟ್ಸ್‌ನಲ್ಲಿ ಅಭ್ಯಾಸದಲ್ಲಿ ತೊಡಗಿವೆ. ಆದರೆ ಪಂದ್ಯ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾಕ್ಕೆ ಆಘಾತವೊಂದು ಎದುರಾಗಿದೆ. ಸರಣಿಯುದ್ದಕ್ಕೂ ಕಾಂಗರೂ ಬೌಲರ್​ಗಳನ್ನು ಕಾಡಿದ್ದ ಕೆಎಲ್ ರಾಹುಲ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ. ರಾಹುಲ್ ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಗಾಯಗೊಂಡ ಬೆರಳಿಗೆ ತಂಡದ ಫಿಸಿಯೊ ಚಿಕಿತ್ಸೆ ನೀಡುತ್ತಿರುವುದನ್ನು ಕಾಣಬಹುದಾಗಿದೆ.

ರಾಹುಲ್ ಕೈಗೆ ಗಾಯ

ರಾಹುಲ್ ಅವರ ಬಲಗೈಗೆ ಗಾಯವಾಗಿದ್ದು, ಅದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸದ್ಯಕ್ಕೆ ಅವರ ಗಾಯ ಎಷ್ಟು ಗಂಭೀರವಾಗಿದೆ ಮತ್ತು ಎಷ್ಟು ದಿನ ಅವರು ಹೊರಗುಳಿಯಬೇಕಾಗುತ್ತದೆ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಇಲ್ಲ. ಸದ್ಯ ಭಾರತ ತಂಡದ ವೈದ್ಯಕೀಯ ತಂಡ ರಾಹುಲ್ ಗಾಯದ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಇಡೀ ಸರಣಿಯಲ್ಲಿ ಟೀಂ ಇಂಡಿಯಾ ಪರ ಕೊಂಚ ಸ್ಥಿರ ಪ್ರದರ್ಶನ ನೀಡುತ್ತಿರುವ ಆಟಗಾರರಲ್ಲಿ ರಾಹುಲ್ ಕೂಡ ಒಬ್ಬರು. ಹೀಗಾಗಿ ರಾಹುಲ್​ಗೆ ಆಗಿರುವ ಗಾಯವು ತುಂಬಾ ಗಂಭೀರವಾಗದಿರಲಿ ಎಂಬುದು ಟೀಂ ಇಂಡಿಯಾದ ಆಶಯವಾಗಿದೆ.

ಟೀಂ ಇಂಡಿಯಾ ಪರ ಅಧಿಕ ರನ್

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ರಾಹುಲ್ ಬ್ಯಾಟ್ ಕೊಂಚ ಗಮನಾರ್ಹ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ತಂಡದ ಇತರ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಹೋಲಿಸಿದರೆ ರಾಹುಲ್ ಹೆಚ್ಚು ಕ್ರೀಸ್​ನಲ್ಲಿ ನಿಂತು ಆಸೀಸ್ ವೇಗಿಗಳನ್ನು ಕಾಡುತ್ತಿದ್ದಾರೆ. ಈ ಸರಣಿಯಲ್ಲಿ ಇದುವರೆಗೆ ಆಡಿರುವ ಆರು ಇನ್ನಿಂಗ್ಸ್‌ಗಳಲ್ಲಿ 47 ಸರಾಸರಿಯಲ್ಲಿ ಎರಡು ಅರ್ಧಶತಕಗಳೊಂದಿಗೆ 235 ರನ್ ಗಳಿಸಿದ್ದಾರೆ. ಈ ಮೂಲಕ ಈ ಸರಣಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಕೂಡ ಆಗಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ