ಒಂದೆಡೆ ಭಾರತದಲ್ಲಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ನ (IPL 2025) ಉತ್ಸಾಹ ಮುಗಿಲು ಮುಟ್ಟಿದ್ದರೆ, ಇನ್ನೊಂದೆಡೆ ಬಿಸಿಸಿಐ (BCCI) ಐಪಿಎಲ್ ಮುಗಿದ ನಂತರ 2025 ರಲ್ಲಿ ಟೀಂ ಇಂಡಿಯಾ (Team India) ತನ್ನ ತವರಿನಲ್ಲಿ ಆಡುವ ಸರಣಿಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಬಿಸಿಸಿಐ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ಟೀಂ ಇಂಡಿಯಾ 4 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದೆ. ಬುಧವಾರ ಸಂಜೆ ಬಿಸಿಸಿಐ 2025 ರ ದೇಶೀಯ ಸೀಸನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳನ್ನು ಆಡಲಿದೆ. ಈ ಸೀಸನ್ ಅಕ್ಟೋಬರ್ 2 ರಿಂದ ಪ್ರಾರಂಭವಾಗಿ ಡಿಸೆಂಬರ್ 19 ರವರೆಗೆ ನಡೆಯಲಿದ್ದು, ಇದರಲ್ಲಿ ಪಂದ್ಯಗಳು ಅನೇಕ ಹೊಸ ಮತ್ತು ಸಾಂಪ್ರದಾಯಿಕ ಮೈದಾನಗಳಲ್ಲಿ ನಡೆಯಲಿವೆ.
ಭಾರತ ತಂಡದ ದೇಶೀ ಸೀಸನ್ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗಲಿದ್ದು, ಇದರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳು ನಡೆಯಲಿವೆ. ಮೊದಲ ಟೆಸ್ಟ್ ಅಕ್ಟೋಬರ್ 2 ರಿಂದ ಅಕ್ಟೋಬರ್ 6 ರವರೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎರಡನೇ ಟೆಸ್ಟ್ ಅಕ್ಟೋಬರ್ 10 ರಿಂದ ಅಕ್ಟೋಬರ್ 14 ರವರೆಗೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.
🚨Announcement🚨
Fixtures for #TeamIndia (Senior Men) international home season for 2025 announced.
Test series against West Indies, followed by an all-format series against South Africa.
Guwahati to host its maiden Test
Details 🔽https://t.co/s1HyuWSDL2
— BCCI (@BCCI) April 2, 2025
ವೆಸ್ಟ್ ಇಂಡೀಸ್ ನಂತರ, ಭಾರತ ತಂಡವು ಮೂರು ಸ್ವರೂಪಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದೆ. ಉಭಯ ತಂಡಗಳ ನಡುವೆ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗಳು ನಡೆಯಲ್ಲಿವೆ. ಎರಡೂ ತಂಡಗಳು 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿವೆ.
ದಕ್ಷಿಣ ಆಫ್ರಿಕಾದ ಭಾರತ ಪ್ರವಾಸವು ನವೆಂಬರ್ 14 ರಿಂದ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯವು ನವೆಂಬರ್ 14 ರಂದು ದೆಹಲಿಯಲ್ಲಿ ನಡೆಯಲಿದೆ. ಎರಡನೇ ಮತ್ತು ಅಂತಿಮ ಪಂದ್ಯವು ನವೆಂಬರ್ 22 ರಿಂದ ಗುವಾಹಟಿಯಲ್ಲಿ ನಡೆಯಲಿದೆ. ಗುವಾಹಟಿಯಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿರುವುದು ಇದೇ ಮೊದಲು.
ಟೆಸ್ಟ್ ಪಂದ್ಯದ ನಂತರ ಎರಡೂ ತಂಡಗಳ ನಡುವೆ ಏಕದಿನ ಸರಣಿ ನಡೆಯಲಿದೆ. ಏಕದಿನ ಸರಣಿಯಲ್ಲಿ 3 ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ನವೆಂಬರ್ 30 ರಂದು ರಾಂಚಿಯಲ್ಲಿ ನಡೆಯಲಿದೆ. ಎರಡನೇ ಪಂದ್ಯ ಡಿಸೆಂಬರ್ 3 ರಂದು ರಾಯ್‌ಪುರದಲ್ಲಿ ನಡೆಯಲಿದೆ. ಮೂರನೇ ಮತ್ತು ಅಂತಿಮ ಪಂದ್ಯ ಡಿಸೆಂಬರ್ 6 ರಂದು ವೈಜಾಕ್ನಲ್ಲಿ ನಡೆಯಲಿದೆ.
416 ವಿಕೆಟ್, 13 ಶತಕ ಸಿಡಿಸಿದ್ದ ಟೀಂ ಇಂಡಿಯಾದ ಮಾಜಿ ಆಲ್‌ರೌಂಡರ್ ನಿಧನ
ಏತನ್ಮಧ್ಯೆ, ದಕ್ಷಿಣ ಆಫ್ರಿಕಾದ ಭಾರತ ಪ್ರವಾಸವು ಟಿ20ಐ ಸರಣಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಡಿಸೆಂಬರ್ 9 ರಿಂದ 19 ರವರೆಗೆ ನಡೆಯಲಿರುವ ಟಿ20ಐ ಸರಣಿಯಲ್ಲಿ ಒಟ್ಟು 5 ಟಿ20ಐ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಡಿಸೆಂಬರ್ 9 ರಂದು ಕಟಕ್‌ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಡಿಸೆಂಬರ್ 11 ರಂದು ನವದೆಹಲಿಯಲ್ಲಿ ನಡೆಯಲಿದೆ. ಮೂರನೇ ಪಂದ್ಯ ಡಿಸೆಂಬರ್ 14 ರಂದು ಧರ್ಮಶಾಲಾದಲ್ಲಿ ನಡೆಯಲಿದೆ. ನಾಲ್ಕನೇ ಪಂದ್ಯ ಡಿಸೆಂಬರ್ 17 ರಂದು ಲಕ್ನೋದಲ್ಲಿ ನಡೆಯಲಿದೆ. ಐದನೇ ಮತ್ತು ಅಂತಿಮ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:20 pm, Wed, 2 April 25