AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಟೀಂ ಇಂಡಿಯಾ ಯಾವೆಲ್ಲ ತಂಡಗಳ ವಿರುದ್ಧ ಸೆಣಸಲಿದೆ? ಇಲ್ಲಿದೆ ವಿವರ

Team India Schedule 2026: ಐಪಿಎಲ್ 2026 ಮುಗಿದ ನಂತರ, ಟೀಂ ಇಂಡಿಯಾ ಜೂನ್ 6 ರಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದೆ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್‌ನೊಂದಿಗೆ ಆರಂಭವಾಗಿ, ಐರ್ಲೆಂಡ್, ಇಂಗ್ಲೆಂಡ್, ಜಿಂಬಾಬ್ವೆ, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಜಿಲೆಂಡ್ ವಿರುದ್ಧ ಸರಣಿಗಳಿವೆ. 2026ರ ಏಷ್ಯನ್ ಗೇಮ್ಸ್‌ಗಾಗಿ ಯುವ ತಂಡ ಜಪಾನ್‌ಗೆ ಪ್ರಯಾಣಿಸಲಿದೆ. ಈ ಸಂಪೂರ್ಣ ವೇಳಾಪಟ್ಟಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬ ತರಲಿದೆ.

ಈ ವರ್ಷ ಟೀಂ ಇಂಡಿಯಾ ಯಾವೆಲ್ಲ ತಂಡಗಳ ವಿರುದ್ಧ ಸೆಣಸಲಿದೆ? ಇಲ್ಲಿದೆ ವಿವರ
Team India
ಪೃಥ್ವಿಶಂಕರ
|

Updated on: Jun 01, 2026 | 9:04 PM

Share

19ನೇ ಆವೃತ್ತಿಯ ಐಪಿಎಲ್ (IPL 2026)​ ಮುಕ್ತಾಯಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ತಮ್ಮ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ. ಸುಮಾರು 2 ತಿಂಗಳಿಗೂ ಹೆಚ್ಚಿನ ಕಾಲ ನಡೆದ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಭಾಗವಹಿಸಿದ್ದರು. ಹೀಗಾಗಿ ಈ ಸಮಯದಲ್ಲಿ ಭಾರತ ತಂಡ ಯಾವುದೇ ಅಂತರರಾಷ್ಟ್ರೀಯ ಸರಣಿಗಳನ್ನು ಆಡಲಿಲ್ಲ. ಇದೀಗ ಐಪಿಎಲ್ ಮುಗಿದಿದ್ದು, ಟೀಂ ಇಂಡಿಯಾ ಕೂಡ ಅಂತರರಾಷ್ಟ್ರೀಯ ವೇಳಾಪಟ್ಟಿಯ ಕಡೆಗೆ ತನ್ನ ಗಮನ ಹಾಯಿಸಲಿದೆ. ಅದರಂತೆ ಜೂನ್ 6 ರಿಂದ ಟೀಂ ಇಂಡಿಯಾದ ಅಂತರರಾಷ್ಟ್ರೀಯ ವೇಳಾಪಟ್ಟಿಗೆ ಚಾಲನೆ ಸಿಗಲಿದೆ.

ಐಪಿಎಲ್ ಮುಗಿದ ಕೇವಲ 5 ದಿನಗಳ ನಂತರ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಅನೇಕ ಸ್ಟಾರ್ ಆಟಗಾರರು ಮೈದಾನಕ್ಕೆ ಮರಳಲಿದ್ದಾರೆ. ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಏಕೈಕ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಅದಾದ ನಂತರ ಏಕದಿನ ಮತ್ತು ಟಿ20 ಪಂದ್ಯಗಳ ಸರಣಿಗಳ ಜೊತೆಗೆ 2026 ರ ಏಷ್ಯನ್ ಕ್ರೀಡಾಕೂಟಕ್ಕಾಗಿ ಯುವ ತಂಡ ಜಪಾನ್‌ಗೆ ಪ್ರಯಾಣಿಸಲಿದೆ.

ಟೀಂ ಇಂಡಿಯಾದ ವೇಳಾಪಟ್ಟಿ

ಜೂನ್ 2026

  • ಜೂನ್ 6-10: ಭಾರತ-ಅಫ್ಘಾನಿಸ್ತಾನ ನಡುವೆ ಟೆಸ್ಟ್ ಪಂದ್ಯ
  • ಜೂನ್ 13-20: ಭಾರತ-ಅಫ್ಘಾನಿಸ್ತಾನದ ನಡುವೆ 3 ಪಂದ್ಯಗಳ ಏಕದಿನ ಸರಣಿ
  • ಜೂನ್ 26-29: ಭಾರತ 2 ಟಿ20 ಪಂದ್ಯಗಳಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ.

ಜುಲೈ 2026

  • ಜುಲೈ 1-11: ಭಾರತ 5 ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಲಿದೆ
  • ಜುಲೈ 14-19: ಟಿ20 ಸರಣಿ ಮುಗಿದ ಬಳಿಕ ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ
  • ಜುಲೈ 23-26: 3 ಪಂದ್ಯಗಳ ಟಿ20 ಸರಣಿಗಾಗಿ ಭಾರತ. ಜಿಂಬಾಬ್ವೆ ಪ್ರವಾಸ ಮಾಡಲಿದೆ.

ಆಗಸ್ಟ್ 2026

  • 2 ಟೆಸ್ಟ್ ಮತ್ತು 3 ಟಿ20 ಪಂದ್ಯಗಳಿಗಾಗಿ ಭಾರತ, ಶ್ರೀಲಂಕಾ ಪ್ರವಾಸ ಮಾಡಲಿದೆ. ವೇಳಾಪಟ್ಟಿ ಇನ್ನಷ್ಟೇ ಪ್ರಕಟವಾಗಬೇಕಿದೆ.

ಸೆಪ್ಟೆಂಬರ್ ಮತ್ತು ಅಕ್ಟೋಬರ್ 2026

  • ಸೆಪ್ಟೆಂಬರ್ 17 – ಅಕ್ಟೋಬರ್ 3: ಏಷ್ಯನ್ ಗೇಮ್ಸ್ 2026, ಜಪಾನ್ (ಟಿ20 ಸ್ವರೂಪ)
  • ಸೆಪ್ಟೆಂಬರ್ 27 – ಅಕ್ಟೋಬರ್ 3: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 3 ಪಂದ್ಯಗಳ ಏಕದಿನ ಸರಣಿ
  • ಅಕ್ಟೋಬರ್ 6-17: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 5 ಪಂದ್ಯಗಳ ಟಿ20 ಸರಣಿ

ಅಕ್ಟೋಬರ್ ಮತ್ತು ಡಿಸೆಂಬರ್ 2026

  • ಅಕ್ಟೋಬರ್ 22 – ಡಿಸೆಂಬರ್: ಭಾರತ 2 ಟೆಸ್ಟ್, 5 ಏಕದಿನ, 5 ಟಿ20 ಪಂದ್ಯಗಳ ಟಿ20 ಸರಣಿಗಾಗಿ ನ್ಯೂಜಿಲೆಂಡ್ ಪ್ರವಾಸ ಮಾಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!