AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ ತಿಂಗಳಲ್ಲಿ 8 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ; ಇಲ್ಲಿದೆ ವೇಳಾಪಟ್ಟಿ

Team India Jan 2026 Schedule: 2026ರಲ್ಲಿ ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಮತ್ತು 2027ರ ಏಕದಿನ ವಿಶ್ವಕಪ್ ಪ್ರಮುಖ ಸವಾಲುಗಳಾಗಿವೆ. ರೋಹಿತ್-ಕೊಹ್ಲಿಗೆ ಗೆಲುವಿನ ವಿದಾಯ ನೀಡುವ ಗುರಿ ಇದೆ. ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 3 ಏಕದಿನ ಹಾಗೂ 5 ಟಿ20 ಪಂದ್ಯಗಳ ಸರಣಿ ನಡೆಯಲಿದ್ದು, ಇದು ಮುಂಬರುವ ವಿಶ್ವಕಪ್‌ಗಳಿಗೆ ಮಹತ್ವದ ಸಿದ್ಧತೆಯಾಗಿದೆ. ಸೂರ್ಯಕುಮಾರ್ ಹಾಗೂ ಗಿಲ್‌ಗೆ ತಮ್ಮ ಫಾರ್ಮ್ ಕಂಡುಕೊಳ್ಳುವ ಒತ್ತಡವಿದೆ.

ಜನವರಿ ತಿಂಗಳಲ್ಲಿ 8 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ; ಇಲ್ಲಿದೆ ವೇಳಾಪಟ್ಟಿ
Team India
ಪೃಥ್ವಿಶಂಕರ
|

Updated on: Jan 01, 2026 | 7:50 PM

Share

2025 ರ ವರ್ಷವನ್ನು ಸಿಹಿ-ಕಹಿಯೊಂದಿಗೆ ಮುಗಿಸಿರುವ ಟೀಂ ಇಂಡಿಯಾಗೆ (Team India) 2026 ರಲ್ಲಿ ಸಾಲು ಸಾಲು ಸವಾಲುಗಳು ಎದುರಾಗಲಿವೆ. ಅದರಲ್ಲಿ ಪ್ರಮುಖವಾಗಿ ಫೆಬ್ರವರಿ ತಿಂಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ (T20 World Cup 2026). ಟಿ20 ಮಾದರಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ತನ್ನ ಪಟ್ಟವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದೆ. ಇದು ಮಾತ್ರವಲ್ಲದೆ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಡ ಟೀಂ ಇಂಡಿಯಾಗೆ ಬಹಳ ಮುಖ್ಯವಾಗಿದೆ. ಏಕೆಂದರೆ 2023 ರಲ್ಲಿ ನಡೆದಿದ್ದ ವಿಶ್ವಕಪ್​ ಫೈನಲ್​ನಲ್ಲಿ ಸೋತಿದ್ದ ಭಾರತ ತಂಡ, ಚಾಂಪಿಯನ್‌ ಪಟ್ಟವನ್ನು ಅಲಂಕರಿಸುವ ಇರಾದೆಯಲಿದೆ. ಈ ಮೂಲಕ ಭಾರತದ ಇಬ್ಬರು ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಗೆಲುವಿನ ವಿದಾಯ ಹೇಳಲು ಬಯಸುತ್ತಿದೆ.

ಜನವರಿ ತಿಂಗಳಲ್ಲಿ 8 ಪಂದ್ಯ

ಈ ಎರಡು ಐಸಿಸಿ ಟೂರ್ನಿಗಳಿಗೆ ಇನ್ನು ಸಮಯ ಉಳಿದಿದೆ. ಆದರೆ ಅದಕ್ಕೂ ಮುನ್ನ ಅಂದರೆ ಜನವರಿ ತಿಂಗಳಲ್ಲಿ ಟೀಂ ಇಂಡಿಯಾದ ವೇಳಾಪಟ್ಟಿ ಹೇಗಿದೆ? ಯಾವ ಯಾವ ತಂಡದ ವಿರುದ್ಧ ಯಾವ ಮಾದರಿಯ ಸರಣಿಯನ್ನು ಆಡಲಿದೆ ಎಂಬುದನ್ನು ನೋಡುವುದಾದರೆ.. ಜನವರಿ ತಿಂಗಳಲ್ಲಿ ಭಾರತ ತಂಡ ಬರೋಬ್ಬರಿ 8 ಪಂದ್ಯಗಳನ್ನು ಆಡಲಿದೆ. ಅಂದರೆ ಈ ತಿಂಗಳಲ್ಲಿ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವೇ ಸಿಗಲಿದೆ.

ಟೀಂ ಇಂಡಿಯಾದ ಈ ವರ್ಷದ ವೇಳಾಪಟ್ಟಿ ಏಕದಿನ ಸರಣಿಯೊಂದಿಗೆ ಆರಂಭವಾಗಲಿದೆ. ಕಳೆದ ಡಿಸೆಂಬರ್​ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಿದ್ದ ಭಾರತ ತಂಡ, ಇದೀಗ ಈ ವರ್ಷವನ್ನು ಸರಣಿ ಗೆಲುವಿನೊಂದಿಗೆ ಆರಂಭಿಸಲು ನೋಡುತ್ತಿದೆ. ಅದರಂತೆ ಗಿಲ್ ಪಡೆಗೆ ಎದುರಾಗುತ್ತಿರುವ ಮೊದಲ ತಂಡವೆಂದರೆ ಅದು ನ್ಯೂಜಿಲೆಂಡ್‌. ಭಾರತ ಹಾಗೂ ನ್ಯೂಜಿಲೆಂಡ್‌ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಏಕದಿನ ಸರಣಿಯ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ; ಜನವರಿ 11, ಬರೋಡಾ
  • ಎರಡನೇ ಏಕದಿನ ಪಂದ್ಯ; ಜನವರಿ 14, ರಾಜ್​ಕೋಟ್
  • ಮೂರನೇ ಏಕದಿನ ಪಂದ್ಯ; ಜನವರಿ 18, ಇಂದೋರ್.

ವಾಸ್ತವವಾಗಿ ಈ ಸರಣಿಗೆ ಇನ್ನು ತಂಡವನ್ನು ಪ್ರಕಟಿಸಲಾಗಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಬಿಸಿಸಿಐ ಶುಭ್​ಮನ್​ ಗಿಲ್ ನಾಯಕತ್ವದ ತಂಡವನ್ನು ಪ್ರಕಟಿಸಲಿದೆ. ಈ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಆಡುವುದರಿಂದ ಅಭಿಮಾನಿಗಳು ಇವರಿಬ್ಬರ ಮೇಲೆ ಸಾಕಷ್ಟು ನಿರೀಕ್ಷೆಗನ್ನು ಇಟ್ಟಿದ್ದಾರೆ.

ಟಿ20 ಸರಣಿ

ಏಕದಿನ ಸರಣಿ ಮುಗಿದ ಬಳಿಕ ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿಯೂ ನಡೆಯಲಿದೆ. ಈ ಸರಣಿ ಮುಗಿದ ಬಳಿಕ ಟಿ20 ವಿಶ್ವಕಪ್ ಆರಂಭವಾಗುವುದರಿಂದ ವಿಶ್ವಕಪ್ ತಯಾರಿ ದೃಷ್ಟಿಯಿಂದ ಟೀಂ ಇಂಡಿಯಾಕ್ಕೆ ಈ ಸರಣಿ ನಿರ್ಣಾಯಕವಾಗಿದೆ. ಅಲ್ಲದೆ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ನಾಯಕ ಸೂರ್ಯಕುಮಾರ್ ಯಾದವ್ ಈ ಸರಣಿಯಲ್ಲಿ ಶತಾಯಗತಾಯವಾಗಿ ತಮ್ಮ ಹಳೆಯ ಫಾರ್ಮ್​ ಕಂಡುಕೊಳ್ಳಬೇಕಿದೆ.

ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ: ಜನವರಿ 21, ನಾಗ್ಪುರ
  • 2ನೇ ಟಿ20 ಪಂದ್ಯ: ಜನವರಿ 23, ರಾಯ್ಪುರ
  • 3ನೇ ಟಿ20 ಪಂದ್ಯ: ಜನವರಿ 25, ಗುವಾಹಟಿ
  • 4ನೇ ಟಿ20 ಪಂದ್ಯ: ಜನವರಿ 28, ವಿಶಾಖಪಟ್ಟಣ
  • 5ನೇ ಟಿ20 ಪಂದ್ಯ: ಜನವರಿ 31, ತಿರುವನಂತಪುರ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್