Team India: ಟೀಮ್ ಇಂಡಿಯಾದ ಮುಂಬರುವ ಸರಣಿಗಳ ವೇಳಾಪಟ್ಟಿ

Indian Team Schedule 2022: ಈ ಎರಡು ಸರಣಿಗಳ ಬಳಿಕ ಟೀಮ್ ಇಂಡಿಯಾ ಆಗಸ್ಟ್​​ನಲ್ಲೇ ಶ್ರೀಲಂಕಾ ವಿರುದ್ದ 2 ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸರಣಿಯ ವೇಳಾಪಟ್ಟಿ ಇನ್ನೂ ಕೂಡ ಬಿಡುಗಡೆಯಾಗಿಲ್ಲ. ಹಾಗೆಯೇ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್‌ ನಡೆಯಲಿದೆ.

Team India: ಟೀಮ್ ಇಂಡಿಯಾದ ಮುಂಬರುವ ಸರಣಿಗಳ ವೇಳಾಪಟ್ಟಿ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 29, 2022 | 12:09 PM

ಐರ್ಲೆಂಡ್ ವಿರುದ್ದದ ಟಿ20 ಸರಣಿ ಗೆದ್ದಿರುವ ಟೀಮ್ ಇಂಡಿಯಾ (Team India) ಮುಂದಿನ ತಿಂಗಳಿಂದ ಇಂಗ್ಲೆಂಡ್ (England vs India) ವಿರುದ್ದ ಸರಣಿ ಆಡಲಿದೆ. ಈ ಸರಣಿಯಲ್ಲಿ ಭಾರತ ತಂಡವು 3 ಟಿ20 ಪಂದ್ಯಗಳನ್ನು ಹಾಗೂ 3 ಏಕದಿನ ಪಂದ್ಯಗಳನ್ನಾಡಲಿದೆ. ಇದಕ್ಕೂ ಮುನ್ನ ಜುಲೈ 1 ರಿಂದ ಏಕೈಕ ಟೆಸ್ಟ್ ಪಂದ್ಯವಾಡಲಿದೆ. ಕಳೆದ ವರ್ಷ ನಡೆದಿದ್ದ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಹೀಗಾಗಿ ಈ ಪಂದ್ಯವನ್ನು ಜುಲೈ 1 ರಿಂದ ಆಡಲಿದೆ. ಇನ್ನು ಇಂಗ್ಲೆಂಡ್ ವಿರುದ್ದದ ಸರಣಿಯ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸ ಕೈಕೊಳ್ಳಲಿದೆ. ಈ ಎರಡು ಸರಣಿಗಳ ವೇಳಾಪಟ್ಟಿ ಪ್ರಕಟವಾಗಿದೆ. ಅಂದರೆ ಆಗಸ್ಟ್​ವರೆಗೆ ಟೀಮ್ ಇಂಡಿಯಾ 8 ಟಿ20 ಪಂದ್ಯಗಳನ್ನು ಹಾಗೂ 6 ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಗಳ ವೇಳಾಪಟ್ಟಿ ಹೀಗಿದೆ.

ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:

ಟೆಸ್ಟ್ ಮತ್ತು ಟಿ20 ಸರಣಿ ವೇಳಾಪಟ್ಟಿ:

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್
  1. ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್)
  2. ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)
  3. ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)
  4. ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

ಏಕದಿನ ಸರಣಿ ವೇಳಾಪಟ್ಟಿ:

  1. ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)
  2. ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)
  3. ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳಾಪಟ್ಟಿ ಹೀಗಿದೆ:

ಏಕದಿನ ಸರಣಿ ವೇಳಾಪಟ್ಟಿ:

  1. ಜುಲೈ 22- ಮೊದಲ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  2. ಜುಲೈ 24- 2ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  3. ಜುಲೈ 27- 3ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)

ಟಿ20 ಸರಣಿ ವೇಳಾಪಟ್ಟಿ:

  1. ಜುಲೈ 29 – ಮೊದಲ ಟಿ20 ಪಂದ್ಯ (ಲಾರಾ ಕ್ರಿಕೆಟ್ ಸ್ಟೇಡಿಯಂ)
  2. ಆಗಸ್ಟ್ 1​- 2ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್ ಸ್ಟೇಡಿಯಂ)
  3. ಆಗಸ್ಟ್​ 2- 3ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್)
  4. ಆಗಸ್ಟ್​ 6- 4ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
  5. ಆಗಸ್ಟ್ 7- 5ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)

ಈ ಎರಡು ಸರಣಿಗಳ ಬಳಿಕ ಟೀಮ್ ಇಂಡಿಯಾ ಆಗಸ್ಟ್​​ನಲ್ಲೇ ಶ್ರೀಲಂಕಾ ವಿರುದ್ದ 2 ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸರಣಿಯ ವೇಳಾಪಟ್ಟಿ ಇನ್ನೂ ಕೂಡ ಬಿಡುಗಡೆಯಾಗಿಲ್ಲ. ಹಾಗೆಯೇ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್‌ ನಡೆಯಲಿದೆ. ಏಷ್ಯಾಕಪ್​ನಲ್ಲಿ ಭಾರತ ತಂಡವು ಕನಿಷ್ಠ 5 ಟಿ20 ಪಂದ್ಯಗಳನ್ನಾಡಲಿದೆ. ಏಷ್ಯಾಕಪ್‌ನಿಂದ ಹಿಂತಿರುಗಿದ ನಂತರ, ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದಾದ ಬಳಿಕ ಅಕ್ಟೋಬರ್​ನಲ್ಲಿ ಟಿ20 ವಿಶ್ವಕಪ್​ ಶುರುವಾಗಲಿದೆ. ಅಂದರೆ ಮುಂದಿನ 6 ತಿಂಗಳುಗಳ ಕಾಲ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಸರಣಿ ಹಾಗೂ ಪ್ರಮುಖ ಟೂರ್ನಿಗಳನ್ನು ಆಡುವ ಮೂಲಕ ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಒದಗಿಸಲಿದೆ.

Published On - 12:08 pm, Wed, 29 June 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ