ಐರ್ಲೆಂಡ್ ವಿರುದ್ದದ ಟಿ20 ಸರಣಿ ಗೆದ್ದಿರುವ ಟೀಮ್ ಇಂಡಿಯಾ (Team India) ಮುಂದಿನ ತಿಂಗಳಿಂದ ಇಂಗ್ಲೆಂಡ್ (England vs India) ವಿರುದ್ದ ಸರಣಿ ಆಡಲಿದೆ. ಈ ಸರಣಿಯಲ್ಲಿ ಭಾರತ ತಂಡವು 3 ಟಿ20 ಪಂದ್ಯಗಳನ್ನು ಹಾಗೂ 3 ಏಕದಿನ ಪಂದ್ಯಗಳನ್ನಾಡಲಿದೆ. ಇದಕ್ಕೂ ಮುನ್ನ ಜುಲೈ 1 ರಿಂದ ಏಕೈಕ ಟೆಸ್ಟ್ ಪಂದ್ಯವಾಡಲಿದೆ. ಕಳೆದ ವರ್ಷ ನಡೆದಿದ್ದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಹೀಗಾಗಿ ಈ ಪಂದ್ಯವನ್ನು ಜುಲೈ 1 ರಿಂದ ಆಡಲಿದೆ. ಇನ್ನು ಇಂಗ್ಲೆಂಡ್ ವಿರುದ್ದದ ಸರಣಿಯ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸ ಕೈಕೊಳ್ಳಲಿದೆ. ಈ ಎರಡು ಸರಣಿಗಳ ವೇಳಾಪಟ್ಟಿ ಪ್ರಕಟವಾಗಿದೆ. ಅಂದರೆ ಆಗಸ್ಟ್ವರೆಗೆ ಟೀಮ್ ಇಂಡಿಯಾ 8 ಟಿ20 ಪಂದ್ಯಗಳನ್ನು ಹಾಗೂ 6 ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಗಳ ವೇಳಾಪಟ್ಟಿ ಹೀಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:
ಟೆಸ್ಟ್ ಮತ್ತು ಟಿ20 ಸರಣಿ ವೇಳಾಪಟ್ಟಿ:
ಏಕದಿನ ಸರಣಿ ವೇಳಾಪಟ್ಟಿ:
ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳಾಪಟ್ಟಿ ಹೀಗಿದೆ:
ಏಕದಿನ ಸರಣಿ ವೇಳಾಪಟ್ಟಿ:
ಟಿ20 ಸರಣಿ ವೇಳಾಪಟ್ಟಿ:
ಈ ಎರಡು ಸರಣಿಗಳ ಬಳಿಕ ಟೀಮ್ ಇಂಡಿಯಾ ಆಗಸ್ಟ್ನಲ್ಲೇ ಶ್ರೀಲಂಕಾ ವಿರುದ್ದ 2 ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸರಣಿಯ ವೇಳಾಪಟ್ಟಿ ಇನ್ನೂ ಕೂಡ ಬಿಡುಗಡೆಯಾಗಿಲ್ಲ. ಹಾಗೆಯೇ ಸೆಪ್ಟೆಂಬರ್ನಲ್ಲಿ ಏಷ್ಯಾಕಪ್ ನಡೆಯಲಿದೆ. ಏಷ್ಯಾಕಪ್ನಲ್ಲಿ ಭಾರತ ತಂಡವು ಕನಿಷ್ಠ 5 ಟಿ20 ಪಂದ್ಯಗಳನ್ನಾಡಲಿದೆ. ಏಷ್ಯಾಕಪ್‌ನಿಂದ ಹಿಂತಿರುಗಿದ ನಂತರ, ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದಾದ ಬಳಿಕ ಅಕ್ಟೋಬರ್ನಲ್ಲಿ ಟಿ20 ವಿಶ್ವಕಪ್ ಶುರುವಾಗಲಿದೆ. ಅಂದರೆ ಮುಂದಿನ 6 ತಿಂಗಳುಗಳ ಕಾಲ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಸರಣಿ ಹಾಗೂ ಪ್ರಮುಖ ಟೂರ್ನಿಗಳನ್ನು ಆಡುವ ಮೂಲಕ ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಒದಗಿಸಲಿದೆ.
Published On - 12:08 pm, Wed, 29 June 22