IND vs AUS 3rd T20I: ಇಂದು ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ: ಸೂರ್ಯ ಪಡೆಯ ಟೀಮ್ ಬದಲಾಗುತ್ತಾ?

India vs Australia 3rd T20I Preview: ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಮೂರನೇ ಟಿ20 ಪಂದ್ಯ ನಡೆಯಲಿದೆ. ವಿಶ್ವ ಚಾಂಪಿಯನ್ ಕಾಂಗರೂ ಪಡೆಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅತ್ತ ಟೀಮ್ ಇಂಡಿಯಾ ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

IND vs AUS 3rd T20I: ಇಂದು ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ: ಸೂರ್ಯ ಪಡೆಯ ಟೀಮ್ ಬದಲಾಗುತ್ತಾ?
IND vs AUS 3rd T20I
Follow us
|

Updated on: Nov 28, 2023 | 6:38 AM

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯ ಜಯಿಸಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs Australia) ಇದೀಗ ತೃತೀಯ ಟಿ20 ಪಂದ್ಯಕ್ಕೆ ಸಜ್ಜಾಗಿದೆ. ಇಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಇಂದಿನ ಪಂದ್ಯ ಗೆದ್ದರೆ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಳ್ಳಲಿದೆ. ಅತ್ತ ವಿಶ್ವ ಚಾಂಪಿಯನ್ ಕಾಂಗರೂ ಪಡೆಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆದ್ದರಷ್ಟೇ ಉಳಿಗಾಲ. ಹೀಗಾಗಿ ಇಂದು ಮೂರನೇ ಟಿ20 ಸಾಕಷ್ಟು ರೋಚಕತೆ ಸೃಷ್ಟಿಸಿದೆ.

ಭಾರತ ತಂಡದಲ್ಲಿ ಬದಲಾವಣೆ?:

ಭಾರತ ಟಿ20 ತಂಡದಲ್ಲಿ ಆಡುತ್ತಿರುವ ಎಲ್ಲ ಆಟಗಾರರು ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ತಂಡದಲ್ಲಿ ಬದಲಾವಣೆ ಅನುಮಾನ. ಗೆದ್ದ ತಂಡದ ಆಟಗಾರರೇ ಕಣಕ್ಕಿಳಿಯಬಹುದು. ಬದಲಾವಣೆ ಬಯಸಿದರೆ ಬೌಲಿಂಗ್​ ವಿಭಾಗದಲ್ಲಿ ಆಗಬಹುದು. ಕಳೆದ ಎರಡೂ ಪಂದ್ಯಗಳಲ್ಲಿ ಪ್ರಸಿದ್ಧ್ ಕೃಷ್ಣ ದುಬಾರಿ ಆಗಿದ್ದಾರೆ. ಹೀಗಾಗಿ ಇವರ ಜಾಗಕ್ಕೆ ಆವೇಶ್ ಖಾನ್ ಅಥವಾ ಶಿವಂ ದುಬೆ ಅವರನ್ನು ಕರೆತಂದರೆ ಅಚ್ಚರಿ ಪಡಬೇಕಿಲ್ಲ.

ಉಳಿದಂತೆ ರುತುರಾಜ್ ಗಾಯಕ್ವಾಡ್- ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಇಶಾನ್ ಕಿಶನ್, ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಮಧ್ಯಮ ಕ್ರಮಾಂಕದಲ್ಲಿ ರನ್ ಕಲೆಹಾಕುತ್ತಿದ್ದಾರೆ. ರಿಂಕು ಸಿಂಗ್ ಫಿನಿಶಿಂಗ್ ಜವ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ಬೌಲಿಂಗ್​ನಲ್ಲಿ ಭಾರತ ಕೊಂಚ ಸುಧಾರಣೆ ಕಂಡರೆ ಇಂದಿನ ಪಂದ್ಯದಲ್ಲಿ ಗೆಲುವು ಖಚಿತ.

ಇದನ್ನೂ ಓದಿ
Image
3ನೇ ಟಿ20 ಪಂದ್ಯಕ್ಕೆ ತಂಡ ಬದಲಿಸ್ತಾರಾ ಸೂರ್ಯ? ಯಾರಿಗೆ ಅವಕಾಶ?
Image
ವಿವಾದಾತ್ಮಕ ಹೇಳಿಕೆ; ಕ್ರೀಡಾ ಸಚಿವರಿಗೆ ಗೇಟ್​ಪಾಸ್ ನೀಡಿದ ಲಂಕಾ ಸರ್ಕಾರ
Image
ರೆಡ್ ಆರ್ಮಿಗೆ ‘ಗ್ರೀನ್’ ಬಲ; ಆದರೂ ತಂಡದಲ್ಲಿದೆ ಅದೊಂದು ಕೊರತೆ..!
Image
ಮುಂಬೈಗೆ ಹಾರಿದ ಹಾರ್ದಿಕ್; ಗುಜರಾತ್ ತಂಡಕ್ಕೆ ನೂತನ ನಾಯಕನ ಆಯ್ಕೆ

ಅಧಿಕೃತವಾಗಿ ಮುಂಬೈ ಸೇರಿದ ಹಾರ್ದಿಕ್ ಪಾಂಡ್ಯ; ಆರ್​ಸಿಬಿಗೆ ಕಾಲಿಟ್ಟ ಆಸೀಸ್ ಆಲ್​ರೌಂಡರ್ ಗ್ರೀನ್..!

ಆಸ್ಟ್ರೇಲಿಯಾ ತಂಡ:

ಗೆಲ್ಲಲೇಬೇಕಾದ ಪಂದ್ಯವಾಗಿದ್ದರಿಂದ ಆಸ್ಟ್ರೇಲಿಯ ಪ್ಲೇಯಿಂಗ್ XI ನಲ್ಲಿ ವಿಶ್ವಕಪ್ ಫೈನಲ್ ಹೀರೋ ಟ್ರಾವಿಸ್ ಹೆಡ್ ಆಡುವ ಸಂಭವವಿದೆ. ಮೊದಲ ಟಿ20I ಪಂದ್ಯದ ಸೋಲಿನ ನಂತರ, ತಂಡ ಸೇರಿಕೊಂಡ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಸ್ಪಿನ್ನರ್ ಆ್ಯಡಂ ಅಷ್ಟೇನು ಪರಿಣಾಮಕಾರಿ ಆಗಲಿಲ್ಲ. ಭಾರತೀಯ ಬ್ಯಾಟರ್‌ಗಳನ್ನು ನಿರ್ಬಂಧಿಸಲು ಆಸೀಸ್ ಮ್ಯಾನೇಜ್‌ಮೆಂಟ್ ಮೂರನೇ ಟಿ20I ಗೆ ಸೀನ್ ಅಬಾಟ್ ಬದಲಿಗೆ ಜೇಸನ್ ಅವರನ್ನು ಕರೆತರುವ ಸಾಧ್ಯತೆ ಕೂಡ ಇದೆ.

ಬರ್ಸಾಪುರ ಪಿಚ್ ಹೇಗಿದೆ?

ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್ ನಿಧಾನವಾಗಿದೆ. ಆದಾಗ್ಯೂ ಇತ್ತೀಚಿನ ದಾಖಲೆ ಗಮನಿಸಿದರೆ ಇದು ಬ್ಯಾಟಿಂಗ್‌ಗೆ ಅನುಕೂಲಕರ ಎಂದು ಹೇಳಬಹುದು. ಬೌಲರ್‌ಗಳಿಗೆ ಹೆಚ್ಚಿನ ಸಹಾಯ ಮಾಡುವುದಿಲ್ಲ. ಈ ಸ್ಥಳದಲ್ಲಿ ಆಯೋಜಿಸಲಾದ ಮೂರು T20I ಗಳಲ್ಲಿ, ಸರಾಸರಿ ಸ್ಕೋರ್ 118 ಆಗಿದೆ. ಮೊದಲು ಬ್ಯಾಟಿಂಗ್ ಮಾಡುವ ಮತ್ತು ಚೇಸಿಂಗ್ ಮಾಡುವ ತಂಡಗಳ ಗೆಲುವು-ಸೋಲಿನ ದಾಖಲೆಯು 1-1 ರಲ್ಲಿ ಸಮಬಲವಿದೆ. ಆಟ ಶುರುವಾದ ನಂತರ ಇಬ್ಬನಿಯ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೀಗಾಗಿ ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ ಆಯ್ಕೆ. ಪಂದ್ಯಕ್ಕೆ ಯಾವುದೇ ಮಳೆಯ ನಿರೀಕ್ಷೆಯಿಲ್ಲ.

ಉಭಯ ತಂಡಗಳು:

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ನಾಯಕ), ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ