Krunal Pandya: ಟೀಮ್ ಇಂಡಿಯಾ ಸ್ಟಾರ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಟ್ವಿಟ್ಟರ್ ಖಾತೆ ಹ್ಯಾಕ್

Krunal Pandya's Twitter Account Hacked: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ. ಬಿಟ್‌ಕಾಯಿನ್ ವಂಚಕರಿಂದ ಈ ಖಾತೆ ಹ್ಯಾಕ್ ಆಗಿರುವಂತೆ ಗೋಚರಿಸುತ್ತಿದೆ.

Krunal Pandya: ಟೀಮ್ ಇಂಡಿಯಾ ಸ್ಟಾರ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಟ್ವಿಟ್ಟರ್ ಖಾತೆ ಹ್ಯಾಕ್
Krunal Pandya
Follow us
Vinay Bhat
|

Updated on:Jan 27, 2022 | 11:17 AM

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ (Krunal Pandya) ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ. ಬಿಟ್‌ಕಾಯಿನ್ ವಂಚಕರಿಂದ ಈ ಖಾತೆ ಹ್ಯಾಕ್ ಆಗಿರುವಂತೆ ಗೋಚರಿಸುತ್ತಿದೆ. ಇನ್ನು ಕೂಡ ಈ ಖಾತೆ ಹ್ಯಾಕರ್​ಗಳೇ ಬಳಸುತ್ತಿದ್ದು, ಸಾಕಷ್ಟು ಪೋಸ್ಟ್​ಗಳು ಶೇರ್ ಆಗುತ್ತಿವೆ. ಬೆಳಗ್ಗೆ 7:30ಕ್ಕೆ ಕ್ರುನಾಲ್ ಪಾಂಡ್ಯ ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ. ಬಿಟ್ ಕಾಯಿನ್ ಮೂಲಕ ಈ ಖಾತೆಯನ್ನು ಸೇಲ್ ಮಾಡುತ್ತೇವೆ ಎಂದು ಪೋಸ್ಟ್ ಹಾಕಲಾಗಿದೆ. ಬಿಟ್‌ಕಾಯಿನ್ ಸ್ಕ್ಯಾಮರ್‌ಗಳು ಇತ್ತೀಚೆಗೆ ಸೆಲೆಬ್ರಿಟಿಗಳ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡುತ್ತಿರುವುದು ಹೆಚ್ಚಾಗುತ್ತಿದೆ. ಕಳೆದ ಡಿಸೆಂಬರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಕೂಡ ಹ್ಯಾಕ್ ಮಾಡಲಾಗಿತ್ತು.ಹ್ಯಾಕ್ (Hacking) ಮಾಡಿರುವ ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದರು. 2020 ರಲ್ಲಿ ಇವರು 100ಕ್ಕೂ ಅಧಿಕ ಖಾತೆಯನ್ನು ಹ್ಯಾಕ್ ಮಾಡಿದ್ದರು ಎಂದು ವರದಿಯಾಗಿತ್ತು. ಕ್ರುನಾಲ್ ಅವರು ಭಾರತ ಪರ 5 ಏಕದಿನ ಮತ್ತು 19 ಟಿ20 ಪಂದ್ಯಗಳನ್ನು ಆಡಿದ್ದಾರೆ. ಸದ್ಯ ಇವರು ಐಪಿಎಲ್ 2022ರ ಮೆಗಾ ಆಕ್ಷನ್ ಬಗ್ಗೆ ಎದುರು ನೋಡುತ್ತಿದ್ದಾರೆ.

ಬುಧವಾರವಷ್ಟೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟ ಮಾಡಿದೆ. ಆದರೆ, ಟೀಮ್ ಇಂಡಿಯಾದಲ್ಲಿ ಕ್ರುನಾಲ್ ಪಾಂಡ್ಯ ಸ್ಥಾನ ಪಡೆದುಕೊಂಡಿಲ್ಲ. ಇದರ ಬೆನ್ನಲ್ಲೇ ಇವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ.

ವಿಂಡೀಸ್ ಸರಣಿಗೆ ಕ್ರುನಾಲ್ ಆಯ್ಕೆ ಆಗದೆ ಇರುವುದಕ್ಕೆ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಇದಕ್ಕೆ ಕಾರಣ ದೀಪಕ್ ಹೂಡಾ ಏಕದಿನ ತಂಡದಲ್ಲಿ ಸ್ಥಾನ ಪಡೆದಿರುವುದು. ಈ ಹಿಂದೆ ಪಂದ್ಯವೊಂದರಲ್ಲಿ ಕ್ರುನಾಲ್ ಮತ್ತು ದೀಪಕ್ ನಡುವೆ ವಾಗ್ವಾದ ನಡೆದಿತ್ತು. ದೀಪಕ್ ಹೂಡಾ ಅವರು ಕ್ರುನಾಲ್ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹೂಡಾ ತನ್ನ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿತ್ತು. ಬಳಿಕ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ​​ಜನವರಿಯಲ್ಲಿ ದೀಪಕ್ ಮೇಲೆ ಒಂದು ವರ್ಷ ನಿಷೇಧ ಹೇರಿತ್ತು.

ಇದೀಗ ದೀಪಕ್ ಹೂಡಾ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರ ಬೆನ್ನಲ್ಲೇ ಕ್ರುನಾಲ್ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದ್ದು, ಅನೇಕರು ಇದು ದೀಪಕ್ ಅವರ ಆಯ್ಕೆಯಿಂದಾಗಿ ಎಂದು ಟ್ವೀಟ್ ಮಾಡುತ್ತಿದ್ದಾರೆ.

India vs West Indies: ಭಾರತ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ವೆಸ್ಟ್ ಇಂಡೀಸ್ ತಂಡ ಪ್ರಕಟ: ಸ್ಟಾರ್ ವೇಗಿ ಕಮ್​ಬ್ಯಾಕ್

Published On - 9:40 am, Thu, 27 January 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ