IND vs SA: ಏಕದಿನ ವಿಶ್ವಕಪ್ ಫಲಿತಾಂಶ ಮರುಕಳಿಸಲಿ ಎಂದ ಇಂಗ್ಲೆಂಡ್ ಮಾಜಿ ನಾಯಕ..!

|

Updated on: Jun 28, 2024 | 11:12 AM

T20 World Cup 2024: ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಈವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 14 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಸೌತ್ ಆಫ್ರಿಕಾ ತಂಡ 11 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಅಂದರೆ ಅಂಕಿ ಅಂಶಗಳ ಪ್ರಕಾರ ಇಲ್ಲಿ ಸೌತ್ ಆಫ್ರಿಕಾಗಿಂತ ಟೀಮ್ ಇಂಡಿಯಾ ಮೇಲುಗೈ ಹೊಂದಿರುವುದು ಸ್ಪಷ್ಟ.

IND vs SA: ಏಕದಿನ ವಿಶ್ವಕಪ್ ಫಲಿತಾಂಶ ಮರುಕಳಿಸಲಿ ಎಂದ ಇಂಗ್ಲೆಂಡ್ ಮಾಜಿ ನಾಯಕ..!
Team India-Michael Vaughan
Follow us on

T20 World Cup 2024: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 68 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ಇಂಗ್ಲೆಂಡ್ ಕ್ರಿಕೆಟಿಗ ಮೈಕಲ್ ವಾನ್ ಅವರ ಕಾಲೆಳೆದಿದ್ದರು.

ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ವಾನ್ ಅವರನ್ನು ಟ್ಯಾಗ್ ಮಾಡಿ ನೀವು ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ ಎಂದು ವಾಸಿಂ ಜಾಫರ್ ಕಿಚಾಯಿಸಿದ್ದರು. ಅತ್ತ ಈ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಮೈಕಲ್ ವಾನ್ ಏಕದಿನ ವಿಶ್ವಕಪ್​ ಫಲಿತಾಂಶವನ್ನು ಪ್ರಸ್ತಾಪಿಸಿ ಕಾಲೆಳೆದಿದ್ದಾರೆ.

ನೀವು ಚೆನ್ನಾಗಿದ್ದೀರಾ ಎಂದು ಕೇಳಿರುವುದಕ್ಕೆ ಸಂತೋಷ… ಭಾರತ ತಂಡ ಉತ್ತಮ ಪ್ರದರ್ಶನ ನೀಡಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಈವರೆಗಿನ ಅತ್ಯುತ್ತಮ ತಂಡ… ಕಳೆದ ಏಕದಿನ ಫೈನಲ್​ನಂತೆ ಈ ಬಾರಿ ಟಿ20 ವಿಶ್ವಕಪ್​ ಅನ್ನು ಸುಲಭವಾಗಿ ಗೆಲ್ಲಬೇಕು ಎಂದು ಇಂಗ್ಲೆಂಡ್​ನ ಮಾಜಿ ನಾಯಕ ಮೈಕಲ್ ವಾನ್ ಕಾಲೆಳೆದಿದ್ದಾರೆ.

ಇಲ್ಲಿ ಮೈಕಲ್ ವಾನ್, ಏಕದಿನ ವಿಶ್ವಕಪ್​ನಂತೆ ಈ ಬಾರಿ ಭಾರತ ಗೆಲ್ಲಬೇಕು ಎನ್ನಲು ಮುಖ್ಯ ಕಾರಣ, ಟೀಮ್ ಇಂಡಿಯಾ 2023ರ ಏಕದಿನ ವಿಶ್ವಕಪ್ ಫೈನಲ್​ ಪಂದ್ಯದಲ್ಲಿ ಸೋತಿರುವುದು. ಇದನ್ನು ಪ್ರಸ್ತಾಪಿಸುವ ಮೂಲಕ ಫೈನಲ್​ನಲ್ಲಿ ಸುಲಭವಾಗಿ ಎದುರಾಳಿ ತಂಡ ಗೆಲ್ಲಬೇಕೆಂದು ಪರೋಕ್ಷವಾಗಿ ವಾನ್ ಪ್ರಸ್ತಾಪಿಸಿದ್ದಾರೆ.

ಇದೀಗ ಮೈಕಲ್ ವಾನ್ ಅವರ ಎಕ್ಸ್ ಪೋಸ್ಟ್ ವೈರಲ್ ಆಗಿದ್ದು, ಫೈನಲ್ ಪಂದ್ಯದ ಬಳಿಕ ಈ ಪೋಸ್ಟ್​ಗೆ ಸರಿಯಾದ ಉತ್ತರ ನೀಡುತ್ತೇವೆ ಎಂದು ಟೀಮ್ ಇಂಡಿಯಾ ಅಭಿಮಾನಿಗಳು ಈ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದಾರೆ.

ಫೈನಲ್ ಪಂದ್ಯಕ್ಕೆ ಕೌಟ್ ಡೌನ್ ಶುರು:

ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶನಿವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಇದೇ ಮೊದಲ ಬಾರಿಗೆ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಐಸಿಸಿ ಫೈನಲ್ ಸುತ್ತಿನಲ್ಲಿ ಮುಖಾಮುಖಿಯಾಗುತ್ತಿದ್ದು, ಹೀಗಾಗಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: Rohit Sharma: ರೋಹಿತ್ ಶರ್ಮಾ ಸಿಕ್ಸ್​ಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

ಅದರಲ್ಲೂ ಭಾರತ ತಂಡವು 17 ವರ್ಷಗಳ ಬಳಿಕ ಮತ್ತೊಮ್ಮೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ತವಕದಲ್ಲಿದ್ದರೆ, ಸೌತ್ ಆಫ್ರಿಕಾ ತಂಡವು ಇದೇ ಮೊದಲ ಬಾರಿಗೆ ವಿಶ್ವಕಪ್ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಹೀಗಾಗಿ ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ಎದುರು ನೋಡಬಹುದು.