AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಲಾರ್ಡ್ಸ್‌ನಲ್ಲಿ ಆಂಗ್ಲರ ಆರ್ಭಟ; 36 ವರ್ಷಗಳ ದಾಖಲೆ ಉಡೀಸ್

India vs England 3rd ODI: ಲಾರ್ಡ್ಸ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ 3ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಭರ್ಜರಿ ಆರಂಭ ಸಿಕ್ಕಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಆತಿಥೇಯರು 30 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 192 ರನ್ ಗಳಿಸಿದ್ದಾರೆ. ಜಾಕೋಬ್ ಬೆಥೆಲ್ ಮತ್ತು ಬೆನ್ ಡಕೆಟ್ ಅರ್ಧಶತಕ ಗಳಿಸಿ ಶತಕದತ್ತ ಸಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಭಾರತದ ಬೌಲರ್‌ಗಳನ್ನು ಕ್ರೀಡಾಂಗಣದಾದ್ಯಂತ ದಂಡಿಸಿದರು.

IND vs ENG: ಲಾರ್ಡ್ಸ್‌ನಲ್ಲಿ ಆಂಗ್ಲರ ಆರ್ಭಟ; 36 ವರ್ಷಗಳ ದಾಖಲೆ ಉಡೀಸ್
Jacob Bethell, Ben Duckett
ಪೃಥ್ವಿಶಂಕರ
|

Updated on:Jul 19, 2026 | 6:08 PM

Share

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ (India vs England ) ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಆತಿಥೇಯ ಇಂಗ್ಲೆಂಡ್​ಗೆ ಭರ್ಜರಿ ಆರಂಭ ಸಿಕ್ಕಿದೆ. ಆರಂಭಿಕರಾದ ಜಾಕೋಬ್ ಬೆಥೆಲ್ ಹಾಗೂ ಬೆನ್ ಡಕೆಟ್ (Jacob Bethell and Ben Duckett) ಈಗಾಗಲೇ ಅರ್ಧಶತಕ ಬಾರಿಸಿದ್ದು ಶತಕದ ಸನಿಹದಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಭಾರತದ ಅನಾನುಭವಿ ಬೌಲಿಂಗ್ ವಿಭಾಗವನ್ನು ಸರಿಯಾಗಿ ದಂಡಿಸುತ್ತಿರುವ ಇಂಗ್ಲೆಂಡ್‌ನ ಆರಂಭಿಕರು ಮೈದಾನದಾದ್ಯಂತ ರನ್‌ಗಳ ಮಳೆ ಸುರಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಇಂಗ್ಲೆಂಡ್‌ ತಂಡ 30 ಓವರ್​ಗಳ ಅಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 192 ರನ್​ಗಳ ಜೊತೆಯಾಟವನ್ನಾಡಿದೆ.

192 ರನ್​​ಗಳ ದಾಖಲೆಯ ಪಾಲುದಾರಿಕೆ

ಈ ಪಂದ್ಯದಲ್ಲಿ, ಇಂಗ್ಲೆಂಡ್‌ನ ಆರಂಭಿಕ ಜೋಡಿ ಬೆನ್ ಡಕೆಟ್ ಮತ್ತು ಜಾಕೋಬ್ ಬೆಥೆಲ್ ಮೊದಲ ವಿಕೆಟ್‌ಗೆ 192 ರನ್​​ಗಳ ದಾಖಲೆಯ ಪಾಲುದಾರಿಕೆಯನ್ನು ನೀಡಿದರು. ಈ ಸರಣಿಯಲ್ಲಿ ಇಂಗ್ಲೆಂಡ್ ಹೊಸ ಆರಂಭಿಕ ಜೋಡಿಯನ್ನು ಕಣಕ್ಕಿಳಿಸಿತು. ಆದರೆ ಮೊದಲ ಎರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಜೊತೆಯಾಟ ಮೂಡಿಬಂದಿರಲಿಲ್ಲ. ಆದರೆ ಲಾರ್ಡ್ಸ್‌ನಲ್ಲಿ ಇವರಿಬ್ಬರ ಜೊತೆಯಾಟ ಭಾರತ ತಂಡದ ವಿರುದ್ಧದ 36 ವರ್ಷಗಳ ಬರಗಾಲವನ್ನು ಕೊನೆಗೊಳಿಸಿತು.

36 ವರ್ಷಗಳ ಬರ ಅಂತ್ಯ

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 36 ವರ್ಷಗಳ ದೀರ್ಘ ಕಾಯುವಿಕೆಯ ನಂತರ, ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾರತದ ವಿರುದ್ಧ ಇಂಗ್ಲಿಷ್ ಆರಂಭಿಕ ಜೋಡಿ ಶತಕದ ಪಾಲುದಾರಿಕೆಯನ್ನು ದಾಖಲಿಸಿದ್ದು ಇದೇ ಮೊದಲು. ಲಾರ್ಡ್ಸ್‌ನಲ್ಲಿ ಒಟ್ಟಾರೆ ದಾಖಲೆಯ ಬಗ್ಗೆ ಮಾತನಾಡಿದರೆ, 2010 ರ ನಂತರ ಇಬ್ಬರು ಇಂಗ್ಲಿಷ್ ಆರಂಭಿಕ ಬ್ಯಾಟ್ಸ್‌ಮನ್‌ಗಳು ಮೊದಲ ವಿಕೆಟ್‌ಗೆ 100 ಕ್ಕೂ ಹೆಚ್ಚು ರನ್‌ಗಳನ್ನು ಸೇರಿಸಿದ್ದು ಇದೇ ಮೊದಲು. ಇದಕ್ಕೂ ಮೊದಲು, ಸೆಪ್ಟೆಂಬರ್ 2010 ರಲ್ಲಿ, ಆಂಡ್ರ್ಯೂ ಸ್ಟ್ರಾಸ್ ಮತ್ತು ಸ್ಟೀವನ್ ಡೇವಿಸ್ ಅವರ ಆರಂಭಿಕ ಜೋಡಿ ಪಾಕಿಸ್ತಾನದ ವಿರುದ್ಧ 113 ರನ್‌ಗಳ ಆರಂಭಿಕ ಪಾಲುದಾರಿಕೆಯನ್ನು ಗಳಿಸಿತ್ತು.

IND vs ENG: 3 ಪಂದ್ಯಗಳಲ್ಲೂ ಟಾಸ್ ಸೋತ ಗಿಲ್; ಭಾರತ ತಂಡದಲ್ಲಿ 3 ಬದಲಾವಣೆ

ಆದಾಗ್ಯೂ 31ನೇ ಓವರ್​ನ ಮೊದಲ ಎಸೆತದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಈ ಆರಂಭಿಕ ಜೊತೆಯಾಟಕ್ಕೆ ಅಂತ್ಯಹಾಡಿದರು. ಶತಕದ ಸನಿಹದಲ್ಲಿ ಜಾಕೋಬ್ ಬೆಥೆಲ್ ಅವರನ್ನು ಪ್ರಸಿದ್ಧ್ ಔಟ್ ಮಾಡಿದರು. ಬೆಥೆಲ್ ಈ ಪಂದ್ಯದಲ್ಲಿ 93 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಿತ 91 ರನ್ ಬಾರಿಸಿ ಔಟಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Sun, 19 July 26

Follow Us
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ