AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸಂಜುಗೆ ಸಿಗುತ್ತಾ ಅವಕಾಶ? 4ನೇ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11?

India vs England 4th T20: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-0 ಹಿನ್ನಡೆ ಅನುಭವಿಸಿದೆ. ಹೀನಾಯ ಪ್ರದರ್ಶನದಿಂದ ತಂಡಕ್ಕೆ ಸರಣಿ ಗೆಲ್ಲುವ ಅವಕಾಶವಿಲ್ಲ. ಆದರೆ ಸರಣಿಯಲ್ಲಿ 2-2 ರ ಸಮಬಲ ಸಾಧಿಸಲು ತಂಡಕ್ಕೆ ಗೆಲುವು ಅಗತ್ಯವಾಗಿದೆ. ಹೀಗಾಗಿ ತಂಡಕ್ಕೆ ಬಲಿಷ್ಠ ಪ್ಲೇಯಿಂಗ್ 11 ಅಗತ್ಯವಿದೆ. ಬ್ಯಾಟಿಂಗ್ ವೈಫಲ್ಯ, ಕಳಪೆ ಫಾರ್ಮ್‌ನಿಂದ ಆಟಗಾರರ ಬದಲಾವಣೆ ನಿರೀಕ್ಷಿಸಲಾಗಿದೆ. ಸಂಜು ಸ್ಯಾಮ್ಸನ್ ಕಣಕ್ಕಿಳಿಯುವ ಸಾಧ್ಯತೆ ಇದೆ.

IND vs ENG: ಸಂಜುಗೆ ಸಿಗುತ್ತಾ ಅವಕಾಶ? 4ನೇ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11?
Team India
ಪೃಥ್ವಿಶಂಕರ
|

Updated on: Jul 08, 2026 | 10:42 PM

Share

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ (India vs England) ತಂಡವು 125 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಈ ಸೋಲಿನೊಂದಿಗೆ ಸರಣಿಯಲ್ಲಿ 2-0 ಅಂತರದ ಹಿನ್ನಡೆಯನ್ನು ಅನುಭವಿಸಿತು. ಇದೀಗ ಟೀಂ ಇಂಡಿಯಾ ಸರಣಿ ಗೆಲ್ಲಲು ಸಾಧ್ಯವಿಲ್ಲ. ಕಡೆಯ ಪಕ್ಷ ಸರಣಿಯನ್ನು 2-2 ರ ಸಮಬಲದೊಂದಿಗೆ ಅಂತ್ಯಗೊಳಿಸಲು ಟೀಂ ಇಂಡಿಯಾ ಪ್ರಯತ್ನಿಸಬೇಕಿದೆ. ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದರೂ ಅವರ್ಯಾರು ತಂಡಕ್ಕೆ ಗೆಲುವು ತಂದುಕೊಡುವಂತಹ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ಶ್ರೇಯಸ್ ಅಯ್ಯರ್ (Shreyas Iyer) ಪಡೆಗೆ ಗೆಲುವು ಎಂಬುದು ಮರಿಚಿಕೆಯಾಗಿ ಉಳಿದಿದೆ. ಹೀಗಾಗಿ 4ನೇ ಟಿ20 ಪಂದ್ಯವನ್ನು ಗೆಲ್ಲಬೇಕಾದರೆ, ಟೀಂ ಇಂಡಿಯಾ ವಿಶೇಷ ತಂತ್ರದೊಂದಿಗೆ ಹಾಗೂ ಬಲಿಷ್ಠ ಪ್ಲೇಯಿಂಗ್ 11ನೊಂದಿಗೆ ಕಣಕ್ಕಿಳಿಯಬೇಕಿದೆ.

ಬ್ಯಾಟಿಂಗ್ ವಿಭಾಗದಲ್ಲಿ 1 ಬದಲಾವಣೆ

ಟೀಂ ಇಂಡಿಯಾದ ಬ್ಯಾಟಿಂಗ್‌ ವಿಭಾಗ ಸಂಪೂರ್ಣ ಹಳಿ ತಪ್ಪಿದೆ ಎಂಬುದರಲ್ಲಿ ಸುಳಿಲ್ಲ. ಟಿ20 ಸ್ಪೆಷಲಿಸ್ಟ್​ಗಳೇ ತಂಡದಲ್ಲಿದ್ದರೂ ಅವರ ಕಳಪೆ ಫಾರ್ಮ್​ ತಂಡಕ್ಕೆ ದೊಡ್ಡ ಹೊರೆಯಾಗಿದೆ. ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ತಂಡಕ್ಕೆ ಆರಂಭ ಒದಗಿಸಿಕೊಡುವಲ್ಲಿ ಎಡವುತ್ತಿದ್ದಾರೆ. ಇದು ತಂಡವನ್ನು ಒತ್ತಡಕ್ಕೆ ಸಿಲುಕಿಸುತ್ತಿದೆ. ಆದಾಗ್ಯೂ 4ನೇ ಟಿ20 ಪಂದ್ಯಕ್ಕೆ ಆರಂಭಿಕರು ಬದಲಾಗುವ ಸಾಧ್ಯತೆಗಳಿವೆ. ಆದರೆ ಮೂರನೇ ಕ್ರಮಾಂಕದಲ್ಲಿ ಬರುವ ಇಶಾನ್ ಕಿಶನ್ ಬದಲಿಗೆ ಸಂಜು ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಬಹುದಾಗಿದೆ. ಏಕೆಂದರೆ ಇಶಾನ್ ಕಿಶನ್ ಕಳೆದ ಐದು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ.

ಮಧ್ಯಮ ಕ್ರಮಾಂಕ ಹೇಗಿರಲಿದೆ?

4ನೇ ಕ್ರಮಾಂಕದಲ್ಲಿ ಬರುವ ಶ್ರೇಯಸ್ ಅಯ್ಯರ್ ಕೂಡ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಆದರೆ ಅಯ್ಯರ್​ಗೆ ನಾಯಕನ ಪಟ್ಟ ಕಟ್ಟಿರುವ ಕಾರಣ ಅವರು ಈ ಪಂದ್ಯದಲ್ಲಿ ಆಡುವುದು ಖಚಿತ. ಕಳಪೆ ಸ್ಟ್ರೈಕ್ ರೇಟ್​ನಿಂದ ತಂಡಕ್ಕೆ ಹೊರೆ ಎನಿಸಿರುವ ತಿಲಕ್ ವರ್ಮಾ ಅವರನ್ನು ತಂಡದಿಂದ ಕೈಬಿಡಬೇಕು ಎಂದು ಒತ್ತಾಯಿಸಲಾಗುತ್ತಿದೆ. ಆದರೆ ಉಪನಾಯಕತ್ವವಹಿಸಿಕೊಂಡಿರುವ ಕಾರಣ ತಿಲಕ್​ಗೆ ಈ ಸರಣಿಯಲ್ಲಿ ಕೊನೆಯ ಅವಕಾಶ ಸಿಗುವುದು ಖಚಿತವಾಗಿದೆ. ಉಳಿದಿರುವ ಎರಡು ಪಂದ್ಯಗಳಲ್ಲಿ ತಿಲಕ್ ಮಿಂಚದಿದ್ದರೆ ಅವರಿಗೆ ಗೇಟ್​ಪಾಸ್ ಖಚಿತ.

IND vs ENG: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಟೀಂ ಇಂಡಿಯಾದ ಸ್ಟಾರ್ ಓಪನರ್

ಬೌಲಿಂಗ್ ವಿಭಾಗದಲ್ಲಿ ಯಾರ್ಯಾರು?

ಇನ್ನು ಆಲ್‌ರೌಂಡರ್​ಗಳ ಖೋಟಾದಲ್ಲಿ ಎಂದಿನಂತೆ ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಹರ್ಷಿತ್ ರಾಣಾ ಕೂಡ ಬೌಲಿಂಗ್ ಜೊತೆಗೆ ಬ್ಯಾಟಿಂಗ್​ನಲ್ಲೂ ಬಲ ತುಂಬಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್ ಹಾಗೂ ಪ್ರಿನ್ಸ್ ಯಾದವ್ ಕಾಣಿಸಿಕೊಂಡರೆ, ವರುಣ್ ಚಕ್ರವರ್ತಿ ಸ್ಪಿನ್ನರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

4ನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್/ ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ ಮತ್ತು ಪ್ರಿನ್ಸ್ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ