AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸ್ವರೂಪ ಬದಲಾದರೂ ರೋಹಿತ್ ಆಟ ಮಾತ್ರ ಬದಲಾಗಲಿಲ್ಲ..! ಹಿಟ್‌ಮ್ಯಾನ್ ಯುಗಾಂತ್ಯ ಸನಿಹ?

Rohit Sharma Struggles Continues: ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ಮುಂದುವರಿದಿದೆ. ಕೇವಲ 2 ರನ್ ಗಳಿಸಿ ಅವರು ಪೆವಿಲಿಯನ್ ಸೇರಿದರು. ಇತ್ತೀಚಿನ 16 ಅಂತರರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ ಅವರು ಕೇವಲ ಒಂದು ಅರ್ಧಶತಕ ಮಾತ್ರ ಗಳಿಸಿದ್ದಾರೆ ಮತ್ತು ಹಲವು ಬಾರಿ ಎರಡಂಕಿ ಗಡಿ ದಾಟಲು ವಿಫಲರಾಗಿದ್ದಾರೆ. ಟೆಸ್ಟ್ ಮತ್ತು ರಣಜಿ ಪಂದ್ಯಗಳಲ್ಲಿಯೂ ಅವರ ಬ್ಯಾಟಿಂಗ್ ನಿರಾಶಾದಾಯಕವಾಗಿದೆ. ಈ ಕಳಪೆ ಫಾರ್ಮ್ ರೋಹಿತ್ ಶರ್ಮಾ ಮತ್ತು ಭಾರತ ತಂಡಕ್ಕೆ ದೊಡ್ಡ ಕಳವಳವಾಗಿದೆ.

IND vs ENG: ಸ್ವರೂಪ ಬದಲಾದರೂ ರೋಹಿತ್ ಆಟ ಮಾತ್ರ ಬದಲಾಗಲಿಲ್ಲ..! ಹಿಟ್‌ಮ್ಯಾನ್ ಯುಗಾಂತ್ಯ ಸನಿಹ?
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on: Feb 06, 2025 | 7:29 PM

Share

ಟೆಸ್ಟ್ ಮಾದರಿಯಲ್ಲೂ ರನ್ ಬರ, ರಣಜಿಯಲ್ಲೂ ರನ್ ಬರ, ಇದೀಗ ಮೊದಲ ಏಕದಿನ ಪಂದ್ಯದಲ್ಲೂ ಕಥೆ ಬದಲಾಗಲಿಲ್ಲ. ಇದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್​ನ ಕರುಣಾಜನಕ ಕಥೆ. ಟಿ20 ವಿಶ್ವಕಪ್ ಬಳಿಕ ಬ್ಯಾಟಿಂಗ್ ಮರೆತವರಂತೆ ವರ್ತಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಯಾವುದು ಅಂದುಕೊಂಡಂತೆ ನಡೆಯುತ್ತಿಲ್ಲ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಇನ್ನಿಲ್ಲದಂತೆ ವೈಫಲ್ಯ ಅನುಭವಿಸಿದ್ದ ರೋಹಿತ್, ರಣಜಿ ಪಂದ್ಯದಲ್ಲೂ ರನ್ ಬರ ಎದುರಿಸಿದ್ದರು. ಹೀಗಾಗಿ ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯಲ್ಲಿ ರೋಹಿತ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಏನೇ ನಿರೀಕ್ಷೆಗಳಿದ್ದರು ತಮ್ಮ ಆಟವನ್ನು ಮಾತ್ರ ಬದಲಿಸುವುದಿಲ್ಲ ಎಂಬಂತೆ ರೋಹಿತ್ ಬ್ಯಾಟ್ ಮಾಡುತ್ತಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಮೊದಲ ಪಂದ್ಯದಲ್ಲೂ ರೋಹಿತ್ ಬ್ಯಾಟ್ ಒಂದಂಕಿಗೆ ಸುಸ್ತಾಗಿದೆ.

ಕೇವಲ 2 ರನ್​ಗಳಿಗೆ ಸುಸ್ತಾದ ರೋಹಿತ್

ಇಂದಿನ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ನಾಯಕ ರೋಹಿತ್ ಶರ್ಮಾ ಅವರ ಇನ್ನಿಂಗ್ಸ್ ಕೇವಲ 7 ಎಸೆತಗಳಲ್ಲಿ ಕೊನೆಗೊಂಡಿತು. ಹಿಟ್‌ಮ್ಯಾನ್ ಎಂದೇ ಖ್ಯಾತರಾದ ರೋಹಿತ್ ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಮೇಲೆ ಹೇಳಿದಂತೆ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರಿಂದ ಎಲ್ಲರೂ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಿದ್ದರು. ಇದಕ್ಕೆ ಪೂರಕವಾಗಿ ಹಿಟ್‌ಮ್ಯಾನ್ ನಾಗ್ಪುರ ಮೈದಾನದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದರು. ಆದರೆ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ರೋಹಿತ್ ಶಕೀಬ್ ಮಹಮೂದ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಬೇಸರದಿಂದ ಪೆವಿಲಿಯನ್​ತ್ತ ಹೆಜ್ಜೆ ಹಾಕಿದರು.

16 ಇನ್ನಿಂಗ್ಸ್‌ಗಳಲ್ಲಿ ಕೇವಲ ಒಂದು ಅರ್ಧಶತಕ

ಕಳೆದ 16 ಅಂತರರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ ಕೇವಲ ಒಂದು ಅರ್ಧಶತಕ ಮಾತ್ರ ಗಳಿಸಿದ್ದಾರೆ. ಇಷ್ಟೇ ಅಲ್ಲ, ಕಳೆದ 16 ಇನ್ನಿಂಗ್ಸ್‌ಗಳಲ್ಲಿ ಹಿಟ್‌ಮ್ಯಾನ್​ಗೆ 11 ಬಾರಿ ಎರಡಂಕಿ ಗಡಿ ದಾಟಲು ಸಾಧ್ಯವಾಗಿಲ್ಲ. ಇದಲ್ಲದೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗಳಲ್ಲಿಯೂ ರೋಹಿತ್ ಬ್ಯಾಟ್ ಮೌನಕ್ಕೆ ಶರಣಾಗಿತ್ತು. ಆದಾಗ್ಯೂ, ತಮ್ಮ ನೆಚ್ಚಿನ ಏಕದಿನ ಸ್ವರೂಪದಲ್ಲಿ ಅವರು ತಮ್ಮ ಕಳೆದುಹೋದ ಫಾರ್ಮ್ ಅನ್ನು ಕಂಡುಕೊಳ್ಳುತ್ತಾರೆ ಎಂದು ಎಲ್ಲರೂ ಕಾದು ಕುಳಿತಿದ್ದರು. ಆದರೆ ಎಂದಿನಂತೆ ರೋಹಿತ್ ಎಲ್ಲರ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ