AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

India vs England ODI Series Starts: ಭಾರತ-ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿ ಇಂದು ಆರಂಭಗೊಂಡಿದೆ. ಮೊದಲ ಪಂದ್ಯ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದ್ದು, 2027ರ ವಿಶ್ವಕಪ್‌ಗೆ ಇದು ನಿರ್ಣಾಯಕ ಸಿದ್ಧತೆಯಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ದೀರ್ಘ ಸಮಯದ ನಂತರ ಒಟ್ಟಿಗೆ ಆಡುತ್ತಿದ್ದಾರೆ. ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ, ಭಾರತ ಮೊದಲು ಬೌಲಿಂಗ್ ಮಾಡುತ್ತಿದೆ.

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
Ind Vs Eng
ಪೃಥ್ವಿಶಂಕರ
|

Updated on:Jul 14, 2026 | 3:23 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿದೆ. ಟಿ20 ಸರಣಿಯಲ್ಲಿನ ಹೀನಾಯ ಸೋಲನ್ನು ಎದುರಿಸಿದ್ದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಲು ಪ್ರಯತ್ನಿಸುತ್ತಿದೆ. ಹಾಗೆಯೇ 2027 ರ ಏಕದಿನ ವಿಶ್ವಕಪ್​ಗೆ ಭಾರತದ ಸಿದ್ಧತೆಗೂ ಈ ಸರಣಿ ನಿರ್ಣಾಯಕವಾಗಿದೆ. ಈ ಸರಣಿಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ ಬಹಳ ದಿನಗಳ ನಂತರ ಒಟ್ಟಿಗೆ ಆಡುತ್ತಿದ್ದಾರೆ. ಹೀಗಾಗಿ ಈ ಮೂವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಇಂಗ್ಲೆಂಡ್‌ ತಂಡ ಒಂದು ದಿನ ಮೊದಲೇ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿತ್ತು. ಇದೀಗ ಟೀಂ ಇಂಡಿಯಾದ ಪ್ಲೇಯಿಂಗ್ ಕೂಡ ಹೊರಬಿದ್ದಿದೆ.

ಮುಖಾಮುಖಿ ದಾಖಲೆ ಹೇಗಿದೆ

ಭಾರತ ಮತ್ತು ಇಂಗ್ಲೆಂಡ್ ಇದುವರೆಗೆ 110 ಏಕದಿನ ಪಂದ್ಯಗಳನ್ನು ಆಡಿವೆ. ಈ ಪೈಕಿ ಭಾರತ 61 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 44 ಪಂದ್ಯಗಳನ್ನು ಗೆದ್ದಿದೆ. ಎರಡು ಪಂದ್ಯಗಳು ಟೈ ಆಗಿದ್ದರೆ, ಮೂರು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಇಂಗ್ಲೆಂಡ್‌ನಲ್ಲಿ ಭಾರತದ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ಭಾರತ ಇದುವರೆಗೆ 86 ಏಕದಿನ ಪಂದ್ಯಗಳನ್ನು ಆಡಿದ್ದು, 45 ಗೆದ್ದಿದ್ದರೆ, 37 ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಟೈ ಆಗಿದೆ, ಮತ್ತು ಮೂರು ಡ್ರಾ ಆಗಿದೆ. ಭಾರತ ಇದುವರೆಗೆ ಬರ್ಮಿಂಗ್ಹ್ಯಾಮ್‌ನಲ್ಲಿ 12 ಏಕದಿನ ಪಂದ್ಯಗಳನ್ನು ಆಡಿದ್ದು, ಎಂಟು ಪಂದ್ಯಗಳಲ್ಲಿ ಗೆದ್ದಿದ್ದರೆ, ನಾಲ್ಕು ಪಂದ್ಯಗಳಲ್ಲಿ ಸೋತಿದೆ.

IND vs ENG: ಏಕದಿನ ಸರಣಿಯಲ್ಲಿ 7 ದಾಖಲೆಗಳ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ

ಉಭಯ ತಂಡಗಳ ಪ್ಲೇಯಿಂಗ್

ಇಂಗ್ಲೆಂಡ್‌ ಪ್ಲೇಯಿಂಗ್ 11: ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್.

ಭಾರತದ ಪ್ಲೇಯಿಂಗ್ 11: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Tue, 14 July 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ