IND vs ENG: ಇಂಗ್ಲೆಂಡ್ ವಿರುದ್ಧ ವಿಶೇಷ ಶತಕ ಪೂರೈಸುವ ತವಕದಲ್ಲಿ ಹಾರ್ದಿಕ್ ಪಾಂಡ್ಯ

Hardik Pandya: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯಗೆ 100 ಟಿ20 ಸಿಕ್ಸರ್‌ಗಳನ್ನು ಪೂರೈಸುವ ಅವಕಾಶವಿದೆ. ಈ ಸರಣಿಯಲ್ಲಿ ಪಾಂಡ್ಯ 12 ಸಿಕ್ಸರ್​ಗಳನ್ನು ಬಾರಿಸಿದರೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಲ್‌ರೌಂಡರ್ ಎನಿಸಿಕೊಳ್ಳಲಿದ್ದಾರೆ.

IND vs ENG: ಇಂಗ್ಲೆಂಡ್ ವಿರುದ್ಧ ವಿಶೇಷ ಶತಕ ಪೂರೈಸುವ ತವಕದಲ್ಲಿ ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ
Follow us
ಪೃಥ್ವಿಶಂಕರ
|

Updated on: Jan 20, 2025 | 10:36 PM

ಭಾರತ ಹಾಗೂ ಇಂಗ್ಲೆಂಡ್ ನಡುವೆ ಜನವರಿ 22 ರಿಂದ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಆ ನಂತರ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಕಮಾಂಡ್ ಸೂರ್ಯಕುಮಾರ್ ಯಾದವ್ ಕೈಯಲ್ಲಿದ್ದು, ಅಕ್ಷರ್ ಪಟೇಲ್ ಉಪನಾಯಕನ ಜವಾಬ್ದಾರಿಯನ್ನು ಪಡೆದುಕೊಂಡಿದ್ದಾರೆ. ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಭಾರತ ತಂಡದ ಭಾಗವಾಗಿದ್ದು, ಈ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಸಿಕ್ಸರ್​ಗಳ ಶತಕ ಪೂರೈಸುವ ಸಮೀಪದಲ್ಲಿದ್ದಾರೆ. ಅದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಲ್‌ರೌಂಡರ್ ಎನಿಸಿಕೊಳ್ಳಲಿದ್ದಾರೆ.

ಸಿಕ್ಸರ್‌ಗಳ ಶತಕ

ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಐಪಿಎಲ್‌ನಲ್ಲಿ ಅವರ ಹೆಸರಿನಲ್ಲಿ 100ಕ್ಕೂ ಹೆಚ್ಚು ಸಿಕ್ಸರ್‌ಗಳಿವೆ. ಇದೀಗ ಅಂತಾರಾಷ್ಟ್ರೀಯ ಟಿ20ಯಲ್ಲಿ ಹಾರ್ದಿಕ್ 100 ಸಿಕ್ಸರ್‌ಗಳ ಸಮೀಪದಲ್ಲಿದ್ದು, ಇದುವರೆಗೆ 109 ಟಿ20 ಪಂದ್ಯಗಳಲ್ಲಿ ಭಾರತದ ಈ ಆಲ್ ರೌಂಡರ್ 85 ಇನ್ನಿಂಗ್ಸ್ ಗಳಲ್ಲಿ 1700 ರನ್ ಗಳಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ 71 ರನ್ ಆಗಿದೆ. ಈ ಮಾದರಿಯಲ್ಲಿ ಅವರ ಹೆಸರಿನಲ್ಲಿ 129 ಬೌಂಡರಿಗಳು ಮತ್ತು 88 ಸಿಕ್ಸರ್‌ಗಳಿವೆ.

ಇದೀಗ ಈ ಚುಟುಕು ಮಾದರಿಯಲ್ಲಿ 100 ಸಿಕ್ಸರ್‌ಗಳನ್ನು ಪೂರೈಸಲು ಹಾರ್ದಿಕ್​ಗೆ ಕೇವಲ 12 ಸಿಕ್ಸರ್‌ಗಳ ಅಗತ್ಯವಿದೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪಾಂಡ್ಯ ಈ ಮೈಲಿಗಲ್ಲು ತಲುಪುವ ಸಂಪೂರ್ಣ ಭರವಸೆ ಇದೆ. ಇದರಲ್ಲಿ ಹಾರ್ದಿಕ್ ಯಶಸ್ವಿಯಾದರೆ ಟಿ20ಯಲ್ಲಿ 100 ಸಿಕ್ಸರ್ ಸಿಡಿಸಿದ ಭಾರತದ ಮೊದಲ ಆಲ್ ರೌಂಡರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸಿಕ್ಸರ್‌ಗಳ ಶತಕ ಸಿಡಿಸಿರುವ ಭಾರತೀಯರಿವರು

ಭಾರತದ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 100 ಅಥವಾ 100 ಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಅವರಂತಹ ದಂತಕಥೆಗಳು ಮಾಡಿದ್ದಾರೆ. ಆದರೆ ಈ ಮೂವರೂ ಬ್ಯಾಟ್ಸ್‌ಮನ್‌ಗಳಾಗಿದ್ದರೆ, ಹಾರ್ದಿಕ್ ಪಾಂಡ್ಯ ಮಾತ್ರ ಆಲ್‌ರೌಂಡರ್ ಪಾತ್ರವನ್ನು ನಿರ್ವಹಿಸುತ್ತಾರೆ. ಸೂರ್ಯಕುಮಾರ್ 78 ಟಿ20 ಪಂದ್ಯಗಳಲ್ಲಿ 145 ಸಿಕ್ಸರ್, ವಿರಾಟ್ 125 ಪಂದ್ಯಗಳಲ್ಲಿ 124 ಮತ್ತು ರೋಹಿತ್ 159 ಪಂದ್ಯಗಳಲ್ಲಿ 205 ಸಿಕ್ಸರ್ ಬಾರಿಸಿದ್ದಾರೆ.

ಟಿ20 ಸರಣಿಗೆ ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).

ಇಂಗ್ಲೆಂಡ್‌ ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಟಿ20 ಸರಣಿಯ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ- 22 ಜನವರಿ, ಕೋಲ್ಕತ್ತಾ
  • ಎರಡನೇ ಟಿ20 ಪಂದ್ಯ- 25 ಜನವರಿ, ಚೆನ್ನೈ
  • ಮೂರನೇ ಟಿ20 ಪಂದ್ಯ- 28 ಜನವರಿ, ರಾಜ್‌ಕೋಟ್
  • ನಾಲ್ಕನೇ ಟಿ20 ಪಂದ್ಯ- 31 ಜನವರಿ, ಪುಣೆ
  • ಐದನೇ ಟಿ20 ಪಂದ್ಯ- 2 ಫೆಬ್ರವರಿ, ಮುಂಬೈ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ