AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ರಣರೋಚಕ ಪಂದ್ಯದಲ್ಲಿ ಇಂಗ್ಲೆಂಡ್‌ ಮಣಿಸಿ ಫೈನಲ್​ಗೇರಿದ ಟೀಂ ಇಂಡಿಯಾ

India Dominates England in T20 WC 2026 Semifinal: 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ 253 ರನ್ ಗಳಿಸಿತ್ತು. ಇಂಗ್ಲೆಂಡ್‌ನ ಜೆಕಬ್ ಬೆಥೆಲ್ ಶತಕ ಸಿಡಿಸಿದರೂ, ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿತು.

IND vs ENG: ರಣರೋಚಕ ಪಂದ್ಯದಲ್ಲಿ ಇಂಗ್ಲೆಂಡ್‌ ಮಣಿಸಿ ಫೈನಲ್​ಗೇರಿದ ಟೀಂ ಇಂಡಿಯಾ
Team India
ಪೃಥ್ವಿಶಂಕರ
|

Updated on:Mar 06, 2026 | 12:04 AM

Share

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್​ನ (2026 T20 World Cup) ಎರಡನೇ ಸೆಮಿಫೈನಲ್‌ ಪಂದ್ಯವನ್ನು 7 ರನ್​ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್​ಗೇರಿದೆ. ರನ್​ಗಳ ಮಳೆಯೇ ಹರಿದ ಈ ಪಂದ್ಯ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 253 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಕೂಡ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿತು. ಗುರಿ ದೊಡ್ಡದಿದ್ದರಿಂದ ಇಂಗ್ಲೆಂಡ್‌, ಭಾರತಕ್ಕೆ ಸುಲಭ ತುತ್ತಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಆಂಗ್ಲರ ಪರ ಕೆಚ್ಚೆದೆಯ ಬ್ಯಾಟಿಂಗ್‌ ಪ್ರದರ್ಶಿಸಿದ ಜೆಕಬ್ ಬೆಥೆಲ್ ಸ್ಫೋಟಕ ಶತಕ ಸಿಡಿಸಿ ಇಂಗ್ಲೆಂಡ್​ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಆದರೆ ಕೊನೆಯ 4 ಓವರ್​ಗಳಲ್ಲಿ ಪಂದ್ಯದ ದಿಕ್ಕು ಬದಲಿಸಿದ ಭಾರತದ ಬೌಲರ್​ಗಳು ತಂಡವನ್ನು ರಣರೋಚಕ ಗೆಲುವಿನತ್ತ ಕೊಂಡೊಯ್ದರು.

253 ರನ್ ಕಲೆಹಾಕಿದ ಭಾರತ

ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು.ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 253 ರನ್ ಕಲೆಹಾಕಿತು. ಇದು ಟಿ20 ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ತಂಡವೊಂದು ಕಲೆಹಾಕಿದ ಅತ್ಯಧಿಕ ಮೊತ್ತವಾಗಿತ್ತು.ಭಾರತ ಈ ದಾಖಲೆಯ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 89 ರನ್ ಗಳಿಸಿದರೆ, ಶಿವಂ ದುಬೆ 25 ಎಸೆತಗಳಲ್ಲಿ 43 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 27 ರನ್ ಗಳಿಸಿದರೆ, ತಿಲಕ್ ವರ್ಮಾ 7 ಎಸೆತಗಳಲ್ಲಿ 21 ರನ್ ಗಳಿಸಿದರು.

IND vs ENG: ಭಾರತದ 2 ಐತಿಹಾಸಿಕ ಗೆಲುವುಗಳನ್ನು ನೆನಪಿಸಿದ ಅಕ್ಷರ್ ಹಿಡದ 2 ಅದ್ಭುತ ಕ್ಯಾಚ್​ಗಳು..!

ಬೆಥೆಲ್ ಏಕಾಂಗಿ ಹೋರಾಟ ವ್ಯರ್ಥ

ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 246 ರನ್‌ಗಳಿಸಲಷ್ಟೇ ಶಕ್ತವಾಯಿತು. ಇಂಗ್ಲೆಂಡ್‌ ಪರ ಏಕಾಂಗಿ ಹೋರಾಟ ನಡೆಸಿದ ಜಾಕೋಬ್ ಬೆಥೆಲ್ ಸೆಮಿಫೈನಲ್‌ನಲ್ಲಿ ಅದ್ಭುತ ಶತಕ ಬಾರಿಸಿದರು. ಬೆಥೆಲ್ 48 ಎಸೆತಗಳಲ್ಲಿ 7 ಸಿಕ್ಸರ್‌ಗಳೊಂದಿಗೆ 105 ರನ್​ಗಳ ಇನ್ನಿಂಗ್ಸ್ ಆಡಿದರು. ಇದು ಬೆಥೆಲ್ ಅವರ ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದ ಮೊದಲ ಶತಕವೂ ಆಗಿತ್ತು. ಆದಾಗ್ಯೂ, ಬೆಥೆಲ್ ಅವರ ಶತಕದ ಹೊರತಾಗಿಯೂ, ಇಂಗ್ಲೆಂಡ್ ಗೆಲುವಿನಿಂದ ವಂಚಿತವಾಯಿತು. ಭಾರತದ ಪರ ಹಾರ್ದಿಕ್ ಪಾಂಡ್ಯ ಅತ್ಯಂತ ಯಶಸ್ವಿ ಬೌಲರ್ ಆಗಿದ್ದು, 4 ಓವರ್‌ಗಳಲ್ಲಿ 38 ರನ್‌ ನೀಡಿ 2 ವಿಕೆಟ್‌ಗಳನ್ನು ಪಡೆದರು. ಸೆಮಿಫೈನಲ್‌ನಲ್ಲಿ ಭಾರತ ಪರ ಆರು ಬೌಲರ್‌ಗಳು ಬೌಲಿಂಗ್ ಮಾಡಿ 5 ವಿಕೆಟ್‌ಗಳನ್ನು ಪಡೆದರು. ಪಾಂಡ್ಯ ಹೊರತುಪಡಿಸಿ, ಇತರ ನಾಲ್ವರು ಬೌಲರ್‌ಗಳು ತಲಾ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:51 pm, Thu, 5 March 26

Follow Us
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!