AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಲೀಡ್ಸ್‌ ಟೆಸ್ಟ್‌ನಲ್ಲಿ ಸತತ ಎರಡನೇ ಶತಕ ಸಿಡಿಸಿದ ರಿಷಭ್ ಪಂತ್

Rishabh Pant Blasts Second Century: ಲೀಡ್ಸ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದ ಪಂತ್, ಎರಡನೇ ಇನ್ನಿಂಗ್ಸ್‌ನಲ್ಲೂ ಅದೇ ರೀತಿಯ ಸ್ಫೋಟಕ ಬ್ಯಾಟಿಂಗ್ ಮೂಲಕ ಶತಕ ಪೂರ್ಣಗೊಳಿಸಿದರು. ತಂಡ ಸಂಕಷ್ಟದಲ್ಲಿದ್ದಾಗ ಕ್ರೀಸ್‌ಗೆ ಬಂದ ಪಂತ್, ರಾಹುಲ್ ಜೊತೆಗೆ ಉತ್ತಮ ಜೊತೆಯಾಟ ನಡೆಸಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. 83 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಪಂತ್, ಉಳಿದ 50 ರನ್‌ಗಳನ್ನು ಕೇವಲ 47 ಎಸೆತಗಳಲ್ಲಿ ಗಳಿಸಿದರು.

IND vs ENG: ಲೀಡ್ಸ್‌ ಟೆಸ್ಟ್‌ನಲ್ಲಿ ಸತತ ಎರಡನೇ ಶತಕ ಸಿಡಿಸಿದ ರಿಷಭ್ ಪಂತ್
Rishabh Pant
ಪೃಥ್ವಿಶಂಕರ
|

Updated on:Jun 23, 2025 | 8:15 PM

Share

ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿಕಿಟ್​ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ (Rishabh Pant) ಇದೀಗ ಎರಡನೇ ಇನ್ನಿಂಗ್ಸ್​ನಲ್ಲೂ ಸ್ಫೋಟಕ ಶತಕ ಸಿಡಿಸಿದ್ದಾರೆ. ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಕ್ರೀಸ್​ಗೆ ಬಂದ ಪಂತ್, ರಾಹುಲ್ ಜೊತೆಗೆ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದರು. 83 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪಂತ್, ಆ ಬಳಿಕ ತಮ್ಮ ಗೇರ್ ಬದಲಿಸಿ ಉಳಿದ 50 ರನ್​ಗಳನ್ನು ಕೇವಲ 47 ಎಸೆತಗಳಲ್ಲಿ ಕಲೆಹಾಕಿ ತಮ್ಮ ಟೆಸ್ಟ್ ವೃತ್ತಿಜೀವನದ 8ನೇ ಶತಕವನ್ನು ಪೂರೈಸಿದರು. ಪಂತ್ ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 13 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್​ಗಳನ್ನು ಸಿಡಿಸಿದರು.

ರಿಷಭ್ ಪಂತ್ ಐತಿಹಾಸಿಕ ಇನ್ನಿಂಗ್ಸ್

ಲೀಡ್ಸ್ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲೂ 100 ರನ್​ಗಳ ಗಡಿ ಮುಟ್ಟುವ ಮೂಲಕ ಪಂತ್, ಸೆನಾ ರಾಷ್ಟ್ರಗಳಲ್ಲಿ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್​ಗಳಲ್ಲಿ ಶತಕ ಬಾರಿಸಿದ ಏಷ್ಯಾದ ಮೊದಲ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ರಿಷಭ್ ಪಂತ್ ಕೇವಲ 130 ಎಸೆತಗಳಲ್ಲಿ ಶತಕ ಪೂರೈಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ 146 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ಪಂತ್​ಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇದು 8 ನೇ ಶತಕವಾಗಿದೆ. ವಿಶೇಷವೆಂದರೆ ಈ 8 ಶತಕಗಳಲ್ಲಿ 6 ಶತಕಗಳನ್ನು ಪಂತ್ ಭಾರತದ ಹೊರಗೆ ಅಂದರೆ ವಿದೇಶಿ ನೆಲಗಳಲ್ಲಿ ಸಿಡಿಸಿದ್ದಾರೆ.

ಹಾಗೆಯೇ ಇದು ಇಂಗ್ಲೆಂಡ್ ವಿರುದ್ಧ ಪಂತ್ ಅವರ 5 ನೇ ಶತಕದ ಇನ್ನಿಂಗ್ಸ್ ಆಗಿದೆ. ಇನ್ನೊಂದು ಕುತೂಹಲಕಾರಿ ಸಂಗತಿಯೆಂದರೆ ಇಂಗ್ಲೆಂಡ್ ವಿರುದ್ಧ ಪಂತ್ ಬಾರಿಸಿರುವ 5 ಶತಕಗಳ ಪೈಕಿ 4 ಶತಕಗಳು ಆಂಗ್ಲರ ನೆಲದಲ್ಲೇ ಸಿಡಿದಿವೆ. ಈ ಮೂಲಕ ಪಂತ್ ವಿದೇಶಿ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಬಾರಿಸಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಆದಾಗ್ಯೂ, ಪಂತ್ ಶತಕ ಗಳಿಸಿದ ನಂತರ ಹೆಚ್ಚು ಕಾಲ ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ತಮ್ಮ ಇನ್ನಿಂಗ್ಸ್​​ನಲ್ಲಿ 140 ಎಸೆತಗಳನ್ನು ಎದುರಿಸಿದ ಪಂತ್ 15 ಬೌಂಡರಿಗಳು ಮತ್ತು 3 ಸಿಕ್ಸರ್‌ಗಳ ಸಹಿತ  118 ರನ್ ಗಳಿಸಿ ಔಟಾದರು.

ವಿಶ್ವದ ಎರಡನೇ ವಿಕೆಟ್ ಕೀಪರ್

ಈ ಶತಕದ ಇನ್ನಿಂಗ್ಸ್‌ನೊಂದಿಗೆ ರಿಷಭ್ ಪಂತ್ ಅನೇಕ ದೊಡ್ಡ ದಾಖಲೆಗಳನ್ನು ಮುರಿದಿದ್ದು, ಟೆಸ್ಟ್‌ನಲ್ಲಿ ಎರಡು ಶತಕಗಳನ್ನು ಸಿಡಿಸಿದ ವಿಶ್ವದ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಪಂತ್​ಗೂ ಮೊದಲು 2001 ರಲ್ಲಿ ಆಂಡಿ ಫ್ಲವರ್ ದಕ್ಷಿಣ ಆಫ್ರಿಕಾ ವಿರುದ್ಧ ಎರಡೂ ಇನ್ನಿಂಗ್ಸ್‌ಗಳಲ್ಲಿ 100 ರನ್ ಬಾರಿಸಿ ಈ ಸಾಧನೆ ಮಾಡಿದ್ದರು. ಹಾಗೆಯೇ ಟೆಸ್ಟ್‌ನ ಒಂದೇ ಪಂದ್ಯದಲ್ಲಿ ಎರಡು ಶತಕಗಳನ್ನು ಬಾರಿಸಿದ ಭಾರತದ 5 ನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಂತ್ ಪಾತ್ರರಾಗಿದ್ದಾರೆ.

IND vs ENG: ಆಂಗ್ಲರ ನೆಲದಲ್ಲಿ ಕನ್ನಡಿಗನ ಪರಾಕ್ರಮ; ಭರ್ಜರಿ ಶತಕ ಸಿಡಿಸಿದ ಕೆಎಲ್ ರಾಹುಲ್

ಟೆಸ್ಟ್ ಪಂದ್ಯದಲ್ಲಿ 5 ಶತಕ

ಲೀಡ್ಸ್ ಟೆಸ್ಟ್​ನಲ್ಲಿ ಇಲ್ಲಿಯವರೆಗೆ ಟೀಂ ಇಂಡಿಯಾ 5 ಶತಕಗಳನ್ನು ಬಾರಿಸಿದೆ. ಪಂತ್ ಸಿಡಿಸಿದ ಎರಡು ಶತಕಗಳ ಜೊತೆಗೆ, ಯಶಸ್ವಿ ಜೈಸ್ವಾಲ್, ನಾಯಕ ಶುಭ್​ಮನ್ ಗಿಲ್ ಮತ್ತು ಕೆಎಲ್ ರಾಹುಲ್ ಕೂಡ ಶತಕ ಸಿಡಿಸಿದ್ದಾರೆ. ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಟೆಸ್ಟ್ ಪಂದ್ಯದಲ್ಲಿ 5 ಶತಕಗಳನ್ನು ಗಳಿಸಿದ್ದು ಇದೇ ಮೊದಲಾಗಿದ್ದು, ಇದು ಕೂಡ ದಾಖಲೆಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Mon, 23 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ