
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಜೂನ್ 20 ರಿಂದ ಹೆಡಿಂಗ್ಲಿಯಲ್ಲಿ ನಡೆಯಲಿದೆ. ಮೊದಲ ಪಂದ್ಯಕ್ಕೆ ಆತಿಥೇಯ ಇಂಗ್ಲೆಂಡ್ ಈಗಾಗಲೇ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಇದರಲ್ಲಿ ನಾಲ್ವರು ಬೌಲರ್ಗಳಿಗೆ ಅವಕಾಶ ನೀಡಲಾಗಿದ್ದು, ಪಿಚ್ ಬೌಲರ್ಗಳಿಗೆ ಸಹಕಾರಿಯಾಗುವುದು ಖಚಿತವಾಗಿದೆ. ಇತ್ತ ಟೀಂ ಇಂಡಿಯಾ ಮಾತ್ರ ಟಾಸ್ವರೆಗೂ ಪ್ಲೇಯಿಂಗ್ 11 ಗೌಪ್ಯತೆಯನ್ನು ಕಾಯ್ದಿರಿಸಿದೆ. ಆದಾಗ್ಯೂ ಉಪ ನಾಯಕ ರಿಷಬ್ ಪಂತ್ (Rishabh Pant) ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡದ ಪ್ಲೇಯಿಂಗ್ 11 ಬಗ್ಗೆ ಕೊಂಚ ಸುಳಿವು ನೀಡಿದ್ದು, ವಿರಾಟ್ ಕೊಹ್ಲಿ ಸ್ಥಾನದಲ್ಲಿ ಶುಭ್ಮನ್ ಗಿಲ್ ಆಡುವುದಾಗಿ ತಿಳಿಸಿದ್ದಾರೆ. ಉಳಿದಂತೆ ಟೆಸ್ಟ್ ಸರಣಿಯ ಬಗ್ಗೆ ಪೂರ್ಣ ವಿವರ ಹೀಗಿದೆ.
ಜೂನ್ 20 ರಿಂದ ಆಗಸ್ಟ್ 4 ರವರೆಗೆ ಇಂಗ್ಲೆಂಡ್ ಮತ್ತು ಭಾರತದ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ 5 ಪಂದ್ಯಗಳು ಕ್ರಮವಾಗಿ ಹೆಡಿಂಗ್ಲಿ ಲೀಡ್ಸ್, ಎಡ್ಜ್‌ಬಾಸ್ಟನ್ ಬರ್ಮಿಂಗ್‌ಹ್ಯಾಮ್, ಲಾರ್ಡ್ಸ್ ಲಂಡನ್, ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಮ್ಯಾಂಚೆಸ್ಟರ್ ಮತ್ತು ಕೆನ್ನಿಂಗ್ಟನ್ ಓವಲ್, ಲಂಡನ್‌ನಲ್ಲಿ ನಡೆದಿವೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಪಂದ್ಯಗಳನ್ನು ಮೊಬೈಲ್‌ನಲ್ಲಿ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.
IND vs ENG: ಭಾರತ ವಿರುದ್ಧದ ಮೊದಲ ಟೆಸ್ಟ್ಗೆ ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರಿಷಬ್ ಪಂತ್ (ಉಪ ನಾಯಕ ಮತ್ತು ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ.
ಇಂಗ್ಲೆಂಡ್ ಪ್ಲೇಯಿಂಗ್ 11: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್, ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್ ಮತ್ತು ಶೋಯೆಬ್ ಬಶೀರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ