AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಸೋಲೋಕೆ ಬಂದಿದ್ದಾರೆ; ಟೀಂ ಇಂಡಿಯಾ ವಿರುದ್ಧ ನಾಲಿಗೆ ಹರಿಬಿಟ್ಟ ಮೈಕೆಲ್ ವಾನ್

England vs India Test Series 2025: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಶೀಘ್ರದಲ್ಲಿ ಆರಂಭವಾಗಲಿದೆ. ಈ ನಡುವೆ ಮಾಜಿ ಇಂಗ್ಲೆಂಡ್ ನಾಯಕ ಮೈಕೆಲ್ ವಾನ್, ಭಾರತ ತಂಡ ಇಂಗ್ಲೆಂಡ್ ನಲ್ಲಿ ಮತ್ತೊಮ್ಮೆ ಸೋಲನ್ನು ಎದುರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಭಾರತ ಇಂಗ್ಲೆಂಡ್ ನಲ್ಲಿ ಹಲವು ಬಾರಿ ಸೋತಿದೆ ಎಂಬುದನ್ನು ಅವರು ನೆನಪಿಸಿದ್ದಾರೆ. ಆದರೆ ಶುಭ್ಮನ್ ಗಿಲ್ ನಾಯಕತ್ವದ ಭಾರತ ತಂಡ ಈ ಬಾರಿ ಸೋಲಿನ ಸರಣಿಯನ್ನು ಮುರಿಯಲು ಪ್ರಯತ್ನಿಸಲಿದೆ.

ಮತ್ತೊಮ್ಮೆ ಸೋಲೋಕೆ ಬಂದಿದ್ದಾರೆ; ಟೀಂ ಇಂಡಿಯಾ ವಿರುದ್ಧ ನಾಲಿಗೆ ಹರಿಬಿಟ್ಟ ಮೈಕೆಲ್ ವಾನ್
Team India
ಪೃಥ್ವಿಶಂಕರ
|

Updated on:Jun 12, 2025 | 9:49 PM

Share

ಭಾರತ ಮತ್ತು ಇಂಗ್ಲೆಂಡ್‌ (England vs India Test Series 2025) ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಆದರೆ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಎಂದಿನಂತೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್ (Michael Vaughan) ತಮ್ಮ ಮಾತಿನ ದಾಳಿ ಆರಂಭಿಸಿದ್ದಾರೆ. ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿರು ವಾನ್, ಟೀಂ ಇಂಡಿಯಾವನ್ನು ಗೇಲಿ ಮಾಡಿದ್ದಾರೆ. ಮೈಕೆಲ್ ವಾನ್ ಪ್ರಕಾರ, ಈ ಬಾರಿಯೂ ಟೀಂ ಇಂಡಿಯಾದ ಪ್ರದರ್ಶನ ಇಂಗ್ಲೆಂಡ್‌ನಲ್ಲಿ ನಿರಾಶಾದಾಯಕವಾಗಿರಲಿದ್ದು, ಇಂಗ್ಲೆಂಡ್‌ ನೆಲದಲ್ಲಿ ಮತ್ತೆ ಸೋಲಲಿದೆ ಎಂದಿದ್ದಾರೆ.

ಟೀಂ ಇಂಡಿಯಾ ಬಗ್ಗೆ ವಾನ್ ಹೇಳಿದ್ದೇನು?

ಭಾರತ-ಇಂಗ್ಲೆಂಡ್ ಸರಣಿಯ ಪ್ರಸಾರಕ ಸೋನಿ ನೆಟ್‌ವರ್ಕ್, ವಾನ್ ಇದನ್ನೆಲ್ಲ ಹೇಳುತ್ತಿರುವಂತೆ ಕಾಣುವ ಪ್ರೋಮೋವನ್ನು ಬಿಡುಗಡೆ ಮಾಡಿದೆ. ಮೈಕೆಲ್ ವಾನ್, ‘ಭಾರತ ಇಂಗ್ಲೆಂಡ್‌ನಲ್ಲಿ 14 ಟೆಸ್ಟ್ ಸರಣಿಗಳನ್ನು ಸೋತಿದ್ದು, ಇದೀಗ ಜೂನ್ 20 ರಂದು ಮತ್ತೊಮ್ಮೆ ಸೋಲಲು ಬರುತ್ತಿದೆ. ಮತ್ತೊಮ್ಮೆ ಇಂಗ್ಲೆಂಡ್ ಟೆಸ್ಟ್ ಸರಣಿಯನ್ನು ಗೆಲ್ಲುತ್ತದೆ’ ಎಂದು ಹೇಳಿದ್ದಾರೆ. ಕಳೆದ 14 ವರ್ಷಗಳಲ್ಲಿ ಇಂಗ್ಲೆಂಡ್‌ನಲ್ಲಿ ಟೀಂ ಇಂಡಿಯಾದ ಪ್ರದರ್ಶನವು ತುಂಬಾ ಕಳಪೆಯಾಗಿದೆ. 2011 ರಲ್ಲಿ, ಭಾರತ ತಂಡವು ಇಂಗ್ಲೆಂಡ್ ವಿರುದ್ಧ 4-0 ಅಂತರದ ಸೋಲನ್ನು ಎದುರಿಸಬೇಕಾಯಿತು. ಇದರ ನಂತರ, 2014 ರಲ್ಲಿಯೂ ಸಹ, ಇಂಗ್ಲೆಂಡ್ ಮಹೇಂದ್ರ ಸಿಂಗ್ ಧೋನಿ ತಂಡದ ವಿರುದ್ಧ ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಗೆದ್ದಿತು.

View this post on Instagram

A post shared by Sony PIX (@sonypixindia)

2018 ರಲ್ಲಿ ಇಂಗ್ಲೆಂಡ್‌ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ವಿರಾಟ್ ಕೊಹ್ಲಿ ನಾಯಕತ್ವದಲ್ಲಿಯಾದರೂ ಸರಣಿ ಗೆಲ್ಲುತ್ತದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು, ಆದರೆ ಅದು ಆಗಲಿಲ್ಲ. ಆ ವರ್ಷವೂ ಇಂಗ್ಲೆಂಡ್ ಟೆಸ್ಟ್ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು. 2021-22 ಪ್ರವಾಸದಲ್ಲಿ, ಈ ಎರಡೂ ತಂಡಗಳ ನಡುವಿನ ಟೆಸ್ಟ್ ಸರಣಿಯು 2-2 ಡ್ರಾದಲ್ಲಿ ಕೊನೆಗೊಂಡಿತು. ಈಗ ಶುಭ್​ಮನ್ ಗಿಲ್ ನಾಯಕತ್ವದಲ್ಲಿ, ಜೂನ್ 20 ರಿಂದ ಪ್ರಾರಂಭವಾಗುವ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲ್ಲಲು ಟೀಂ ಇಂಡಿಯಾ ಹೋರಾಟ ಆರಂಭಿಸಲಿದೆ.

IND vs NZ: ನ್ಯೂಜಿಲೆಂಡ್ ವಿರುದ್ಧ 20 ದಿನಗಳ ಅಂತರದಲ್ಲಿ 8 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ

ಭಾರತ ಮತ್ತು ಇಂಗ್ಲೆಂಡ್‌ನ ಇತ್ತೀಚಿನ ಟೆಸ್ಟ್ ಪ್ರದರ್ಶನ

ಇಂಗ್ಲೆಂಡ್ ತಂಡ ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ. 16 ವರ್ಷಗಳ ನಂತರ ನ್ಯೂಜಿಲೆಂಡ್‌ನಲ್ಲಿ ಆತಿಥೇಯರ ವಿರುದ್ಧ ತಮ್ಮ ಮೊದಲ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. ಇದು ಮಾತ್ರವಲ್ಲದೆ, ಕಳೆದ ತಿಂಗಳು ಜಿಂಬಾಬ್ವೆಯನ್ನು ನಾಲ್ಕು ದಿನಗಳ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 45 ರನ್‌ಗಳಿಂದ ಸೋಲಿಸಿತು. ಇನ್ನು ಟೀಂ ಇಂಡಿಯಾದ ಬಗ್ಗೆ ಹೇಳುವುದಾದರೆ, ಅಕ್ಟೋಬರ್ 2024 ರಲ್ಲಿ ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು 3-0 ಅಂತರದಿಂದ ಸೋತಿದ್ದ ಟೀಂ ಇಂಡಿಯಾ, ಇದು ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿಯೂ ಸೋಲನ್ನು ಎದುರಿಸಬೇಕಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 pm, Thu, 12 June 25

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ