Team India: ಟೀಮ್ ಇಂಡಿಯಾ ಗೆದ್ದರೆ ಇತಿಹಾಸ: ಕೊಹ್ಲಿ ಪಾಲಿಗೆ ಹೊಸ ದಾಖಲೆ..!

India vs South Africa: ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಕಳಪೆ ದಾಖಲೆಯನ್ನು ಹೊಂದಿದ್ದು, ಈ ದಾಖಲೆಯನ್ನು ಅಳಿಸಿ ಹಾಕುವ ವಿಶ್ವಾಸದಲ್ಲಿದ್ದಾರೆ ಕೊಹ್ಲಿ ಪಡೆ.

Team India: ಟೀಮ್ ಇಂಡಿಯಾ ಗೆದ್ದರೆ ಇತಿಹಾಸ: ಕೊಹ್ಲಿ ಪಾಲಿಗೆ ಹೊಸ ದಾಖಲೆ..!
Team India
Follow us
| Updated By: ಝಾಹಿರ್ ಯೂಸುಫ್

Updated on: Jan 02, 2022 | 5:01 PM

ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ 2ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಜೋಹಾನ್ಸ್​ಬರ್ಗ್​ನಲ್ಲಿ ಸೋಮವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದೆ. ಸೀಮಿತ ಓವರ್​ ಕ್ರಿಕೆಟ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಟೀಮ್ ಇಂಡಿಯಾ ಪಾರುಪತ್ಯ ಸಾಧಿಸುತ್ತಾ ಬಂದಿದೆ. ಆದರೆ ಅವರದ್ದೇ ನೆಲದಲ್ಲಿ ಟೆಸ್ಟ್​ ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಲಾಗಿಲ್ಲ ಎಂಬ ಕೊರಗು ಇನ್ನೂ ಕೂಡ ಟೀಮ್ ಇಂಡಿಯಾ ಪಾಲಿಗಿದೆ. ಅಂದರೆ ಕಳೆದ 29 ವರ್ಷಗಳಿಂದ ಭಾರತ ತಂಡವು ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ.

ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಕಳಪೆ ದಾಖಲೆಯನ್ನು ಹೊಂದಿದ್ದು, ಈ ದಾಖಲೆಯನ್ನು ಅಳಿಸಿ ಹಾಕುವ ವಿಶ್ವಾಸದಲ್ಲಿದ್ದಾರೆ ಕೊಹ್ಲಿ ಪಡೆ. ಏಕೆಂದರೆ ಭಾರತ ತಂಡ ದಕ್ಷಿಣ ಆಫ್ರಿಕಾದಲ್ಲಿ ಇದುವರೆಗೆ ಏಳು ಟೆಸ್ಟ್ ಸರಣಿಗಳನ್ನು ಆಡಿದೆ. ಅದರಲ್ಲಿ ಒಂದೇ ಒಂದು ಸರಣಿಯನ್ನು ಗೆದ್ದಿಲ್ಲ.

ಇನ್ನು ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತ ಇದುವರೆಗೆ 21 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ ಪೈಕಿ ಕೇವಲ 4 ಪಂದ್ಯಗಳನ್ನು ಗೆದ್ದಿದ್ದಾರೆ. ಇನ್ನು 7 ಪಂದ್ಯಗಳು ಡ್ರಾ ಮಾಡಿಕೊಂಡಿದ್ದಾರೆ. ಅತ್ತ ಆತಿಥೇಯರು 10 ಪಂದ್ಯಗಳನ್ನು ಗೆಲ್ಲುವ ಮೂಲಕ ತವರಿನಲ್ಲಿ ಟೀಮ್ ಇಂಡಿಯಾ ವಿರುದ್ದ ಮೇಲುಗೈ ಸಾಧಿಸಿದೆ.

ಇದೀಗ ವಿರಾಟ್ ಕೊಹ್ಲಿ ನೇತೃತ್ವದ ಹೊಸ ಪಡೆ ದಕ್ಷಿಣ ಆಫ್ರಿಕಾ ವಿರುದ್ದ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದೆ. ಇದೀಗ 2ನೇ ಟೆಸ್ಟ್​ ಪಂದ್ಯದಲ್ಲಿ ಜಯಗಳಿಸಿದರೆ 29 ವರ್ಷಗಳ ಕಳಪೆ ದಾಖಲೆಯ ಇತಿಹಾಸವನ್ನು ಕೊಹ್ಲಿ ಪಡೆ ಅಳಿಸಿ ಹಾಕಲಿದ್ದಾರೆ.

ಒಂದು ವೇಳೆ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತ ತಂಡವು ಟೆಸ್ಟ್ ಸರಣಿ ಗೆದ್ದರೆ, ಈ ಸಾಧನೆ ಮಾಡಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ. ಹೀಗಾಗಿ ಈ ಸರಣಿಯು ಟೀಮ್ ಇಂಡಿಯಾ ಹಾಗೂ ವಿರಾಟ್ ಕೊಹ್ಲಿ ಪಾಲಿಗೆ ಮಹತ್ವದ ಸರಣಿ ಆಗಿದೆ.

ಸೆಂಚರಿಯನ್ ಸ್ಪೋರ್ಟ್​ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 113 ರನ್​ಗಳ ಭರ್ಜರಿ ಜಯ ಸಾದಿಸಿರುವ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಗೆಲುವಿನ ಆತ್ಮ ವಿಶ್ವಾಸದಲ್ಲಿ ಭಾರತ ತಂಡ ಜೋಹಾನ್ಸ್​ಬರ್ಗ್​ನಲ್ಲಿ ಕಣಕ್ಕಿಳಿಯಲಿದ್ದು, ಈ ಮೂಲಕ ಹೊಸ ಇತಿಹಾಸ ನಿರ್ಮಿಸುವ ಇರಾದೆಯಲ್ಲಿದೆ.

ಇದನ್ನೂ ಓದಿ:  South Africa vs India: ಭಾರತ- ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಮಾಹಿತಿ

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(India ever won an overseas test series in South Africa)

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ