IND vs AUS, World Cup Final: ಇಂದು ಐಸಿಸಿ ಏಕದಿನ ವಿಶ್ವಕಪ್ ಫೈನಲ್: ಪ್ರಶಸ್ತಿಗಾಗಿ ಭಾರತ-ಆಸ್ಟ್ರೇಲಿಯಾ ಸೆಣೆಸಾಟ

India vs Australia, ICC ODI World Cup Final: ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್​ನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗಲಿವೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಸೆಮಿಫೈನಲ್​ನಲ್ಲಿ ಗೆದ್ದು ಫೈನಲ್​ಗೇರಿರುವ ಉಭಯ ತಂಡಗಳಲ್ಲಿ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿದ್ದು, ಇಂದು ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕು.

IND vs AUS, World Cup Final: ಇಂದು ಐಸಿಸಿ ಏಕದಿನ ವಿಶ್ವಕಪ್ ಫೈನಲ್: ಪ್ರಶಸ್ತಿಗಾಗಿ ಭಾರತ-ಆಸ್ಟ್ರೇಲಿಯಾ ಸೆಣೆಸಾಟ
IND vs AUS Final
Follow us
|

Updated on: Nov 19, 2023 | 6:33 AM

ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್​ಗೆ ಕ್ಷಣಗಣನೆ ಶುರುವಾಗಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ರೋಹಿತ್ ಶರ್ಮಾ ನಾಯಕತ್ವ ಭಾರತ ಹಾಗೂ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ (India vs Australia) ನಡುವೆ ಪ್ರಶಸ್ತಿಗಾಗಿ ಅಂತಿಮ ಕಾದಾಟ ನಡೆಯಲಿದೆ. ಪಂದ್ಯ ಆರಂಭಕ್ಕೂ ಮುನ್ನ ಸಮಾರೋಪ ಸಮಾರಂಭ ಆಯೋಜನೆ ಮಾಡಲಿದೆ. ಇದರಲ್ಲಿ ಬಾಲಿವುಡ್ ತಾರೆಯರು ನೃತ್ಯ ಮಾಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಅಲ್ಲದೆ ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡವು ತಮ್ಮ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಲಿದೆ.

ಭಾರತ ತಂಡ:

ಭಾರತ ತಂಡ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಗೆದ್ದು ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿದೆ. ಮೆನ್ ಇನ್ ಬ್ಲೂ ಇಡೀ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದೆ ಫೈನಲ್​ಗೆ ಬಂದಿದೆ. ಎಲ್ಲ ಪಂದ್ಯವನ್ನು ಸುಲಭವಾಗಿ ಜಯಿಸಿದ್ದಾರೆ. ತಂಡದಲ್ಲಿ ಬದಲಾವಣೆ ಮಾಡಿದ್ದು ಕೂಡ ಕಡಿಮೆ. ಆದರೆ, ಈಗ ಫೈನಲ್ ಕದನಕ್ಕೆ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾವನ್ನು ಭಾರತ ಒಂದು ಬಾರಿ ಎದುರಿಸಿದೆ. ಹೀಗಾಗಿ ಭಾರತದ ಬೌಲರ್​ಗಳ ಕೆಲ ವರ್ಮವನ್ನು ಅವರು ಅರಿತಿರಬಹುದು. ಇದಕ್ಕಾಗಿ ಬೌಲಿಂಗ್ ವಿಭಾಗದಲ್ಲಿ ಹೊಸ ಆಟಗಾರ ಬರಬಹುದು.

ವಿಶ್ವಕಪ್ ಆರಂಭದಲ್ಲಿ ಮಾರಕವಾಗಿದ್ದ ಮೊಹಮ್ಮದ್ ಸಿರಾಜ್ ಈಗ ಯಾಕೊ ಮಂಕಾದಂತಿದೆ. ಹೀಗಾಗಿ ಇವರು ಜಾಗಕ್ಕೆ ರವಿಚಂದ್ರನ್ ಅಶ್ವಿನ್ ಕರೆತರುವ ಪ್ಲಾನ್ ಭಾರತ ಮಾಡಬಹುದು. ಅಲ್ಲದೆ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ಗೆ ಬಂದರೆ ಸ್ಪಿನ್ ಜೊತೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲರು. ಉಳಿದಂತೆ ರೋಹಿತ್ ಹಾಗೂ ಗಿಲ್ ಟಿ20 ಮಾದರಿಯಂತೆ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಪ್ರಸ್ತುತ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಫೈನಲ್​ನಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ನೋಡಬೇಕು.

ಇದನ್ನೂ ಓದಿ
Image
ವಿಶ್ವಕಪ್​ನಲ್ಲಿ ಗೋಲ್ಡನ್ ಬ್ಯಾಟ್ ಮತ್ತು ಬಾಲ್​ ಗೆದ್ದ ಆಟಗಾರರ ಪಟ್ಟಿ
Image
ಏಕದಿನ ವಿಶ್ವಕಪ್​ ಟ್ರೋಫಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಮಾಹಿತಿ
Image
ಫೈನಲ್ ಪಂದ್ಯಕ್ಕೆಸಜ್ಜಾದ ಕ್ರೀಡಾಂಗಣ:ಪ್ರೇಕ್ಷಕರಿಗಾಗಿ ಮಿನಿ ಆಸ್ಪತ್ರೆ ಓಪನ್
Image
ಫೈನಲ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮುಂದಿದೆ 3 ವಿಶ್ವ ದಾಖಲೆಗಳು

IND vs AUS: ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರಿಂದ ಭಾರತ ತಂಡಕ್ಕೆ ಶುಭ ಹಾರೈಕೆ

ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಬೊಂಬಾಟ್ ಫಾರ್ಮ್​ನಲ್ಲಿದ್ದಾರೆ. ಸೂರ್ಯಕುಮಾರ್​ಗೆ ಅವಕಾಶ ಸಿಕ್ಕಿದ್ದು ಕಡಿಮೆ. ಸಿಕ್ಕ ಸಂದರ್ಭ ತಂಡಕ್ಕೆ ನೆರವಾಗಿದ್ದಾರೆ. ರವೀಂದ್ರ ಜಡೇಜಾ ಫಿನಿಶರ್‌ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ರವಿಚಂದ್ರನ್ ಅಶ್ವಿನ್ ಬಂದರೆ ಬ್ಯಾಟಿಂಗ್ ಡೆಪ್ತ್ ಹೆಚ್ಚಲಿದೆ. ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಕುಲ್ದೀಪ್ ಯಾದವ್ ಮಾರಕವಾಗಿದ್ದಾರೆ.

ಆಸ್ಟ್ರೇಲಿಯಾ ತಂಡ:

ಇತ್ತ ಆಸೀಸ್ ತನ್ನ ಬ್ಯಾಟಿಂಗ್ ವಿಭಾಗದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಡೇವಿಡ್ ವಾರ್ನರ್ ಮತ್ತು ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ಕ್ರಿಕೆಟ್ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಸ್ಟೀವ್ ಸ್ಮಿತ್ ಕಡೆಯಿಂದ ಫೈನಲ್​ನಲ್ಲಿ ಒಂದೊಳ್ಳೆ ಇನ್ನಿಂಗ್ಸ್ ಬರಬೇಕು. ಗ್ಲೆನ್ ಮ್ಯಾಕ್ಸ್‌ವೆಲ್ ಅಫ್ಘಾನಿಸ್ತಾನ ವಿರುದ್ಧ ದ್ವಿಶತಕ ಸಿಡಿಸಿ ಅಬ್ಬರಿಸಿದ್ದರು. ಆದರೆ, ಸೆಮೀಸ್​ನಲ್ಲಿ ವಿಫಲರಾಗಿದ್ದರು. ಬೌಲಿಂಗ್ ವಿಭಾಗಕ್ಕೆ ಸಂಬಂಧಿಸಿದಂತೆ, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್, ಸೀನ್ ಅಬಾಟ್, ಮಾರ್ಕಸ್ ಸ್ಟೊಯಿನಿಸ್ ಇದ್ದಾರೆ. ಆ್ಯಡಂ ಝಂಪಾ ಸ್ಪಿನ್ನರ್ ಆಗಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ವರದಿ:

ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಇಲ್ಲಿರುವ ಕಪ್ಪು ಮಣ್ಣಿನ ಪಿಚ್‌ಗಳು ಉತ್ತಮ ಬೌನ್ಸ್‌ನೊಂದಿಗೆ ಬೌಲರ್‌ಗಳಿಗೆ ಯೋಗ್ಯವಾಗಿದೆ. ಬ್ಯಾಟರ್‌ಗಳಿಗೆ ಆರಂಭಿಕ ಓವರ್‌ಗಳು ಸವಾಲಾಗಿರಬಹುದು. ಆಟಗಾರರು ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವುದರಿಂದ, ಪಿಚ್ ಸ್ವಲ್ಪಮಟ್ಟಿಗೆ ಬ್ಯಾಟಿಂಗ್ ಸ್ವರ್ಗವಾಗಿ ಬದಲಾಗುತ್ತದೆ. ಪಂದ್ಯಕ್ಕೆ ಮಳೆ ತೊಂದರೆ ಇಲ್ಲ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್