AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಪಾಯಿಂಟ್​ ಪಟ್ಟಿಯಲ್ಲಿ ಭಾರಿ ಬದಲಾವಣೆ; ಒಂದೇ ದಿನ ಎರಡು ಸ್ಥಾನ ಮೇಲೇರಿದ ಟೀಂ ಇಂಡಿಯಾ!

World Test Championship points table: ಎರಡನೇ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಾದರೆ, ಭಾರತ- ಬಾಂಗ್ಲಾದೇಶ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಬೇಕಾಗಿದೆ.

WTC ಪಾಯಿಂಟ್​ ಪಟ್ಟಿಯಲ್ಲಿ ಭಾರಿ ಬದಲಾವಣೆ; ಒಂದೇ ದಿನ ಎರಡು ಸ್ಥಾನ ಮೇಲೇರಿದ ಟೀಂ ಇಂಡಿಯಾ!
team india
TV9 Web
| Edited By: |

Updated on:Dec 18, 2022 | 1:52 PM

Share

ಡಿಸೆಂಬರ್ 18 ರಂದು, 2 ಟೆಸ್ಟ್ ಪಂದ್ಯಗಳ ಫಲಿತಾಂಶಗಳು 2 ಗಂಟೆಗಳ ಅಂತರದಲ್ಲಿ ಹೊರಬಿದ್ದಿದೆ. ಮೊದಲು ಬಾಂಗ್ಲಾದೇಶವನ್ನು ಬೃಹತ್ ಅಂತರದಿಂದ ಮಣಿಸಿದ ಟೀಂ ಇಂಡಿಯಾ (India vs Bangladesh) 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಎರಡನೇಯದಾಗಿ, ಆಸ್ಟ್ರೇಲಿಯಾದ ಬ್ರಿಸ್ಬೇನ್​ನಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ (Australia Vs South Africa) ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್​ಗಳ ಗೆಲುವು ಸಾಧಿಸಿದೆ. ಈ ಎರಡು ಟೆಸ್ಟ್ ಪಂದ್ಯಗಳ ಫಲಿತಾಂಶದ ಪರಿಣಾಮ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್​ ಪಟ್ಟಿಯಲ್ಲಿ (World Test Championship) ಗೋಚರವಾಗಿದೆ. ವಾಸ್ತವವಾಗಿ ಬಾಂಗ್ಲಾ ತಂಡವನ್ನು ಮಣಿಸಿದ್ದ ಟೀಂ ಇಂಡಿಯಾ ಪಾಯಿಂಟ್ ಪಟ್ಟಿಯಲ್ಲಿ ಶ್ರೀಲಂಕಾ ತಂಡವನ್ನು ಹಿಂದಿಕ್ಕಿ 4ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಲಗ್ಗೆ ಇಟ್ಟಿತ್ತು. ಇದೀಗ ಆಸ್ಟ್ರೇಲಿಯಾ ಎದುರು ಸೋತಿರುವ ದಕ್ಷಿಣ ಆಫ್ರಿಕಾ ಭಾರತದ ಫೈನಲ್ ಹಾದಿಗೆ ದಾರಿ ಮಾಡಿಕೊಟ್ಟಿದೆ. ಆಫ್ರಿಕಾದ ಸೋಲು ಭಾರತವನ್ನು ಪಾಯಿಂಟ್​ ಪಟ್ಟಿಯಲ್ಲಿ ಮೂರನೇ ಸ್ಥಾನದಿಂದ 2ನೇ ಸ್ಥಾನಕ್ಕೆ ತಳ್ಳಿದೆ.

ಚಟ್ಟೋಗ್ರಾಮ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಭಾರತ 188 ರನ್‌ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿತು. ನಿಖರವಾಗಿ 2 ಗಂಟೆಗಳ ನಂತರ ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಬ್ರಿಸ್ಬೇನ್ ಟೆಸ್ಟ್ ಕೇವಲ 2 ದಿನಗಳಲ್ಲಿ ಅದರ ಮುಕ್ತಾಯವನ್ನು ತಲುಪಿತು. ಇದರಿಂದಾಗಿ WTC ಪಾಯಿಂಟ್‌ ಪಟ್ಟಿಯಲ್ಲಿ ಎರಡು ಬ್ಯಾಕ್ ಟು ಬ್ಯಾಕ್ ಬದಲಾವಣೆಗಳು ಕಂಡುಬಂದವು.

AUS vs SA: ಆಫ್ರಿಕಾ ಎದುರು ಮೊದಲ ಟೆಸ್ಟ್ ಗೆದ್ದ ಆಸೀಸ್; ಭಾರತಕ್ಕೆ ಲಾಭ ತಂದ ಹರಿಣಗಳು ಸೋಲು..!

2. ಭಾರತದ ಡಬಲ್ ಜಂಪ್

ಆದರೆ, ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿನ ಬದಲಾವಣೆಗಳು ನೇರವಾಗಿ ಟೀಮ್ ಇಂಡಿಯಾಗೆ ಲಾಭ ತಂದಿದೆ. ಬಾಂಗ್ಲಾದೇಶ ವಿರುದ್ಧ 188 ರನ್‌ಗಳ ಜಯ ದಾಖಲಿಸಿದ ಭಾರತ ತಂಡ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಏರಿತ್ತು. ಆಸ್ಟ್ರೇಲಿಯಾದ ಎದುರು ದಕ್ಷಿಣ ಆಫ್ರಿಕಾದ ಸೋಲಿನ ನಂತರ ಭಾರತಕ್ಕೆ ಮುಂಬಡ್ತಿ ಸಿಕ್ಕಿದೆ. ಅಂದರೆ ಭಾರತ ಈಗ ದಕ್ಷಿಣ ಆಫ್ರಿಕಾದ ಸ್ಥಾನವನ್ನು ವಶಪಡಿಸಿಕೊಂಡಿದೆ.

3. ಎರಡನೇ ಸ್ಥಾನದಲ್ಲಿ ಭಾರತ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಗೆಲುವಿನ ನಂತರ, ಆಸ್ಟ್ರೇಲಿಯಾ 76.92% ಸರಾಸರಿಯೊಂದಿಗೆ ಮೊದಲ ಸ್ಥಾನದಲ್ಲಿದೆ. ಮತ್ತೊಂದೆಡೆ, ಸೋಲಿನಿಂದ ಗಾಯಗೊಂಡಿರುವ ದಕ್ಷಿಣ ಆಫ್ರಿಕಾ 54.55% ನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ. ಹರಿಣಗಳ ಸೋಲಿನ ಲಾಭ ಪಡೆದ ಭಾರತ ತಂಡ ಇದೀಗ ಎರಡನೇ ಸ್ಥಾನಕ್ಕೆ ತಲುಪಿದೆ. ಭಾರತವು 55.77% ಗೆಲುವಿನ ಸರಾಸರಿ ಹೊಂದಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಈ ಮುನ್ನಡೆಯನ್ನು ಕಾಯ್ದುಕೊಳ್ಳಲು ಭಾರತಕ್ಕೆ ಈಗ ಸುವರ್ಣಾವಕಾಶವಿದೆ. ಎರಡನೇ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಾದರೆ, ಭಾರತ- ಬಾಂಗ್ಲಾದೇಶ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಬೇಕಾಗಿದೆ. ಅಂದರೆ 1-0 ಮುನ್ನಡೆಯನ್ನು 2-0 ಆಗಿ ಪರಿವರ್ತಿಸಬೇಕು. ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಯಲ್ಲಿ ಆಸ್ಟ್ರೇಲಿಯಾ ತನ್ನ ಪ್ರಬಲ ಪ್ರದರ್ಶನವನ್ನು ಮುಂದುವರಿಸಲು ಪ್ರಾರ್ಥಿಸಬೇಕು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:49 pm, Sun, 18 December 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!