Rahul Dravid: ರಾಹುಲ್ ದ್ರಾವಿಡ್ ಬಂದ್ಮೇಲೆ ಟೀಮ್ ಇಂಡಿಯಾದ ಅದೃಷ್ಟ ಬದಲಾಯಿತಾ?

India vs South Africa 3rd Test: ಟಿ20 ವಿಶ್ವಕಪ್​ ಸೋಲಿಗೆ ಟೀಮ್ ಇಂಡಿಯಾ ಟಾಸ್ ಸೋತಿರುವುದು ಕೂಡ ಒಂದು ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಏಕೆಂದರೆ ಟೀಮ್ ಇಂಡಿಯಾ ಟಾಸ್ ಸೋತ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದ ಪರಾಜಯಗೊಂಡಿತು.

Rahul Dravid: ರಾಹುಲ್ ದ್ರಾವಿಡ್ ಬಂದ್ಮೇಲೆ ಟೀಮ್ ಇಂಡಿಯಾದ ಅದೃಷ್ಟ ಬದಲಾಯಿತಾ?
Rahul Dravid-Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 11, 2022 | 6:09 PM

ಭಾರತ-ದಕ್ಷಿಣ ಆಫ್ರಿಕಾ (India vs South Africa 3rd Test) ವಿರುದ್ದದ ಮೂರು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಮೂರು ಪಂದ್ಯಗಳಲ್ಲೂ ಟಾಸ್ ಗೆದ್ದಿರುವುದು ವಿಶೇಷ. ಅದರಲ್ಲೂ ಟಾಸ್ ವಿಷಯದಲ್ಲಿ ನತದೃಷ್ಟ ನಾಯಕರಾಗಿ ಗುರುತಿಸಿಕೊಂಡಿದ್ದ ವಿರಾಟ್ ಕೊಹ್ಲಿ (Virat Kohli) ಬ್ಯಾಕ್ ಟು ಬ್ಯಾಕ್ ಟಾಸ್ ಗೆಲ್ಲುವ ಮೂಲಕ ಗಮನ ಸೆಳೆದಿದ್ದಾರೆ. ವಿಶೇಷ ಎಂದರೆ ರಾಹುಲ್ ದ್ರಾವಿಡ್ (Rahul Dravid) ಕೋಚ್ ಆದ ಬಳಿಕ ಟೀಮ್ ಇಂಡಿಯಾ ಟಾಸ್ ಸೋತಿಲ್ಲ ಎಂಬುದು ಇಲ್ಲಿ ಗಮನಾರ್ಹ. ಅಂದರೆ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಒಟ್ಟು 8 ಪಂದ್ಯಗಳನ್ನು ಆಡಿದೆ. ಈ 8 ಪಂದ್ಯಗಳಲ್ಲೂ ಭಾರತ ತಂಡವೇ ಟಾಸ್ ಗೆದ್ದಿದೆ.

ನ್ಯೂಜಿಲೆಂಡ್ ವಿರುದ್ದದ 2 ಟೆಸ್ಟ್ ಪಂದ್ಯಗಳಲ್ಲಿ ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದರೆ, ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯ ಮೂರು ಪಂದ್ಯಗಳಲ್ಲೂ ಟಾಸ್ ಜಯಿಸಿದೆ. ಇನ್ನೂ ರಾಹುಲ್ ದ್ರಾವಿಡ್ ಕೋಚಿಂಗ್ ಅಡಿಯಲ್ಲಿ ವಿರಾಟ್ ಕೊಹ್ಲಿ ಮೂರು ಬಾರಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಮೂರು ಬಾರಿ ಕೂಡ ಕೊಹ್ಲಿ ಟಾಸ್ ಗೆದ್ದಿರುವುದು ವಿಶೇಷ.

ಅತ್ತ ಟಿ20 ವಿಶ್ವಕಪ್​ ಸೋಲಿಗೆ ಟೀಮ್ ಇಂಡಿಯಾ ಟಾಸ್ ಸೋತಿರುವುದು ಕೂಡ ಒಂದು ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಏಕೆಂದರೆ ಟೀಮ್ ಇಂಡಿಯಾ ಟಾಸ್ ಸೋತ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದ ಪರಾಜಯಗೊಂಡಿತು. ಈ ಹೀನಾಯ ಸೋಲುಗಳ ಬಳಿಕ ಟೀಮ್ ಇಂಡಿಯಾ ಸತತವಾಗಿ 8 ಬಾರಿ ಟಾಸ್ ಗೆದ್ದಿರುವುದೇ ಅಚ್ಚರಿ.

ಹೀಗಾಗಿ ರಾಹುಲ್ ದ್ರಾವಿಡ್ ಅವರ ಆಗಮನ ಟೀಮ್ ಇಂಡಿಯಾದ ಅದೃಷ್ಟ ಬದಲಾಯಿತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಒಟ್ಟಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಟೀಮ್ ಇಂಡಿಯಾ ಕೇಪ್​ ಟೌನ್​ನಲ್ಲಿ ಮೂರನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು, ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಸರಣಿ ಗೆದ್ದ ಐತಿಹಾಸಿಕ ದಾಖಲೆ ನಿರ್ಮಿಸಲಿದೆ. ಏಕೆಂದರೆ ಕಳೆದ 30 ವರ್ಷಗಳಲ್ಲಿ ಟೀಮ್ ಇಂಡಿಯಾ ಸೌತ್ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಹೀಗಾಗಿ ರಾಹುಲ್ ದ್ರಾವಿಡ್ ಆಗಮನ ಟೀಮ್ ಇಂಡಿಯಾದ ಅದೃಷ್ಟವನ್ನು ಬದಲಿಸಲಿದೆಯಾ ಎಂಬುದು ಈ ಪಂದ್ಯದ ಫಲಿತಾಂಶದಿಂದ ನಿರ್ಧಾರವಾಗಲಿದೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(India has never lost a toss, since Rahul Dravid becomes the Head coach)

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ