India vs New Zealand T20: ರೋಹಿತ್-ದ್ರಾವಿಡ್ ಮಾಸ್ಟರ್ ಪ್ಲಾನ್​ಗೆ ಮಕಾಡೆ ಮಲಗಿದ ನ್ಯೂಜಿಲೆಂಡ್: ಸರಣಿ ಕೈವಶ

India vs New Zealand, 2nd T20I: ಪರಿಪೂರ್ಣ ನಾಯಕನಾಗಿ ರೋಹಿತ್ ಶರ್ಮಾ, ಕೋಚ್ ಆಗಿ ರಾಹುಲ್ ದ್ರಾವಿಡ್ ತಮ್ಮ ಕೆಲಸವನ್ನು ಸಖತ್ ಆಗಿ ಶುರು ಮಾಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯವನ್ನೂ ಗೆಲ್ಲುವ ಮೂಲಕ ಭಾರತ ಸರಣಿ ವಶಪಡಿಸಿಕೊಂಡಿದೆ.

India vs New Zealand T20: ರೋಹಿತ್-ದ್ರಾವಿಡ್ ಮಾಸ್ಟರ್ ಪ್ಲಾನ್​ಗೆ ಮಕಾಡೆ ಮಲಗಿದ ನ್ಯೂಜಿಲೆಂಡ್: ಸರಣಿ ಕೈವಶ
India vs New Zealand
Follow us
TV9 Web
| Updated By: Vinay Bhat

Updated on: Nov 20, 2021 | 7:26 AM

ರಾಂಚಿಯ ಜೆಎಸ್‌ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೂ ಭಾರತ (India vs New Zealand, 2nd T20I) ಅಮೋಘ ಗೆಲುವು ಕಂಡಿದೆ. ಬೌಲರ್​ಗಳ ಸಂಘಟಿತ ಪ್ರದರ್ಶನ ಮತ್ತು ಬ್ಯಾಟಿಂಗ್​ನಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಉಪ ನಾಯಕ ಕೆಎಲ್ ರಾಹುಲ್ (KL Rahul) ಅವರ ಭರ್ಜರಿ ಆಟದ ನೆರವಿನಿಂದ 7 ವಿಕೆಟ್​ಗಳಿಂದ ಗೆದ್ದು ಬೀಗಿದೆ. ಇಷ್ಟೇ ಅಲ್ಲದೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸುವ ಮೂಲಕ ಸರಣಿಯನ್ನೂ ವಶಪಡಿಸಿಕೊಂಡಿದೆ. ಈ ಮೂಲಕ ಪರಿಪೂರ್ಣ ನಾಯಕನಾಗಿ ರೋಹಿತ್ ಶರ್ಮಾ, ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ತಮ್ಮ ಕೆಲಸವನ್ನು ಸಖತ್ ಆಗಿ ಶುರು ಮಾಡಿದ್ದಾರೆ. ಸರಣಿ ಗೆಲುವಿಗಾಗಿ ಇವರಿಬ್ಬರ ಮಾಸ್ಟರ್ ಪ್ಲಾನ್ ಕೂಡ ಸರಿಯಾಗಿ ವರ್ಕ್ ಆಗಿದೆ. ಉಳಿದಿರುವ ಒಂದು ಪಂದ್ಯವನ್ನ ಗೆದ್ದರೆ ಸರಣಿ ಕ್ಲೀನ್ ಸ್ವೀಪ್ ಮಾಡಿದ ಸಾಧನೆ ಮಾಡಲಿದೆ.

ಟಾಸ್ ಗೆಲ್ಲುವಲ್ಲಿ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಲಕ್ಕಿ ಎಂಬುದು ಮತ್ತೊಮ್ಮೆ ಸಾಬೀತಾಯಿತು. ಹಿಟ್​ಮ್ಯಾನ್ ಬೌಲಿಂಗ್ ಆಯ್ಕೆ ಮಾಡಿಕೊಂಡು ನ್ಯೂಜಿಲೆಂಡ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಓಪನರ್ ಮಾರ್ಟಿನ್ ಗಪ್ಟಿಲ್ ಮತ್ತು ಡೇರಿಲ್ ಮಿಚೆಲ್ ಸ್ಫೋಟಕ ಆರಂಭವನ್ನೇ ನೀಡಿದರು. ಮೊದಲ ಓವರ್‌ನಲ್ಲೇ ಭುವನೇಶ್ವರ್ ಕುಮಾರ್ 14ರನ್‌ಗಳನ್ನ ನೀಡಿ ದುಬಾರಿಯಾದರು. ಭರ್ಜರಿ ಆರಂಭ ನೀಡಿದ್ದ ಈ ಜೋಡಿಗೆ ಬ್ರೇಕ್ ನೀಡಿದ್ದು, ದೀಪಕ್ ಚಹಾರ್. 15 ಎಸೆತಗಳಲ್ಲಿ 31 ರನ್‌ ಸಿಡಿಸಿದ್ದ ಗಪ್ಟಿಲ್ ರಿಷಭ್ ಪಂತ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿಕೊಂಡರು.

ಮೊದಲ ವಿಕೆಟ್ ಉರುಳುತ್ತಿದ್ದಂತೆ ಟೀಮ್ ಇಂಡಿಯಾ ಬೌಲರ್‌ಗಳು ಕಿವೀಸ್ ಬ್ಯಾಟ್ಸ್‌ಮನ್‌ಗಳನ್ನ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. 21 ರನ್‌ಗಳಿಸಿದ್ದ ಮಾರ್ಕ್ ಚಾಪ್ಮನ್ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರೆ, 31 ರನ್‌ಗಳಿಸಿ ಉತ್ತಮವಾಗಿ ಆಡ್ತಿದ್ದ ಡೇರಿಲ್ ಮಿಚೆಲ್, ಭಾರತದ ಪರ ಚೊಚ್ಚಲ ಟಿ20 ಪಂದ್ಯವನ್ನಾಡುತ್ತಿರುವ ಹರ್ಷಲ್ ಪಟೇಲ್‌ರ ಮೊದಲ ವಿಕೆಟ್ ಬಲಿಯಾದರು.

ಇನ್ನು ಮಿಡಲ್ ಓವರ್‌ಗಳಲ್ಲಿ ಉತ್ತಮ ಬೌಲಿಂಗ್ ದಾಳಿ ನಡೆಸಿದ ರವಿಚಂದ್ರನ್ ಅಶ್ವಿನ್ 13ರನ್‌ಗಳಿಸಿದ್ದ ಟಿಮ್ ಸೀಫರ್ಟ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಕೊನೆಯ ಎರಡು ಓವರ್‌ಗಳಲ್ಲಿ ನ್ಯೂಜಿಲೆಂಡ್ ರನ್‌ಗಳಿಸಲು ಪರದಾಡಿತು. ಅಂತಿಮವಾಗಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 153ರನ್ ಕಲೆಹಾಕಿತು. ಭಾರತದ ಪರ ಹರ್ಷಲ್ ಪಟೇಲ್ ಎರಡು ವಿಕೆಟ್ ಕಬಳಿಸಿದರೆ, ಭುವಿ, ದೀಪಕ್, ಅಕ್ಷರ್ ಪಟೇಲ್, ಅಶ್ವಿನ್ ತಲಾ ಒಂದು ವಿಕೆಟ್ ಕಿತ್ತರು.

ಸವಾಲಿನ ಗುರಿ ಬೆನ್ನತ್ತಿದ್ದ ಭಾರತ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಉತ್ತಮ ಆರಂಭ ನೀಡಿದರು. ರೋಹಿತ್ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರೆ, ರಾಹುಲ್ ಆಕ್ರಮಣಕಾರಿ ಆಟದ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸತತ ಐದನೇ ಪಂದ್ಯದಲ್ಲಿ ಮೊದಲ ವಿಕೆಟ್ ಗೆ ಅರ್ಧ ಶತಕದ ಜೊತೆಯಾಟ ಕಟ್ಟಿದ್ದರು. ಈ ಮಧ್ಯೆ ಉತ್ತಮವಾಗಿ ಆಡುತ್ತಿದ್ದ ರಾಹುಲ್ ವಿಕೆಟ್ ಒಪ್ಪಿಸಿದರು. 49 ಎಸೆತಗಳನ್ನು ಎದುರಿಸಿದ ರಾಹುಲ್ 6 ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 65 ರನ್ ಗಳಿಸಿದರು.

ರೋಹಿತ್ 35 ಎಸೆತಗಳಲ್ಲಿ ಅರ್ಧ ಶತಕದ ಸಾಧನೆ ಮಾಡಿದರು. ಇದು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಮಾಡಿದ 25ನೇ ಅರ್ಧ ಶತಕವಾಗಿದೆ. ಆದರೆ, ಗೆಲುವಿನ ಆಂಚಿನಲ್ಲಿ ರೋಹಿತ್ ವಿಕೆಟ್ ಪತನವಾಯಿತು. ರೋಹಿತ್ ಐದು ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 55 ರನ್ ಗಳಿಸಿದರು. ಅಂತಿಮವಾಗಿ ವೆಂಕಟೇಶ್ ಅಯ್ಯರ್ ಅವರ 12 ಹಾಗೂ ರಿಷಭ್ ಪಂತ್ ಅವರ 12 ರನ್ ಗಳ ನೆರವಿನಿಂದ ಭಾರತ ಇನ್ನೂ 16 ಎಸೆತ ಬಾಕಿ ಇರುವಾಗಲೇ 17.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಕಿವೀಸ್ ಪರ ನಾಯಕ ಟಿಮ್ ಸೌಥಿ ಮೂರು ವಿಕೆಟ್ ಪಡೆದರು. ಆದರೆ, ಇದು ತಂಡದ ಗೆಲುವಿಗೆ ಯಾವುದೇ ಪ್ರಯೋಜನ ನೀಡಲಿಲ್ಲ.

BAN vs PAK: ಬಾಂಗ್ಲಾ ವಿರುದ್ಧ ಮೊದಲ ಟಿ20 ಗೆದ್ದ ಪಾಕಿಸ್ತಾನ; ಮಿಂಚಿದ ಹಸನ್ ಅಲಿ

(India have hammered New Zealand by 7 wickets and Rohit Sharma Team clinch series)

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ