IND vs BAN: ನಾವು ವಿಶ್ವಕಪ್‌ ಗೆಲ್ಲಲು ಇಲ್ಲಿಗೆ ಬಂದಿಲ್ಲ, ಆದರೆ ಭಾರತ..? ಬಾಂಗ್ಲಾ ನಾಯಕನ ಶಾಕಿಂಗ್ ಹೇಳಿಕೆ

T20 World Cup 2022: ಟಿ20 ವಿಶ್ವಕಪ್ ಗೆಲ್ಲುವ ಉದ್ದೇಶದಿಂದ ಟೀಂ ಇಂಡಿಯಾ ಇಲ್ಲಿಗೆ ಬಂದಿದೆ. ಆದರೆ ನಾವು ವಿಶ್ವಕಪ್ ಗೆಲ್ಲಲು ಇಲ್ಲಿಗೆ ಬಂದಿಲ್ಲ ಎಂದು ಶಕೀಭ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

IND vs BAN: ನಾವು ವಿಶ್ವಕಪ್‌ ಗೆಲ್ಲಲು ಇಲ್ಲಿಗೆ ಬಂದಿಲ್ಲ, ಆದರೆ ಭಾರತ..? ಬಾಂಗ್ಲಾ ನಾಯಕನ ಶಾಕಿಂಗ್ ಹೇಳಿಕೆ
Shakib Al Hasan
Follow us
TV9 Web
| Updated By: ಪೃಥ್ವಿಶಂಕರ

Updated on:Nov 01, 2022 | 1:37 PM

ಒಂದೆಡೆ, ಟಿ20 ವಿಶ್ವಕಪ್ (T20 World Cup) ಗೆದ್ದು ವಿಶ್ವ ಚಾಂಪಿಯನ್ ಎನಿಸಿಕೊಳ್ಳುವ ಸಲುವಾಗಿ ಎಲ್ಲಾ ತಂಡಗಳು ಶ್ರಮಿಸುತ್ತಿವೆ. ಅದರಂತೆ ಟಿ20 ವಿಶ್ವ ಚಾಂಪಿಯನ್ ಆಗಲು ಪ್ರತಿ ತಂಡವೂ ಬೆವರು ಹರಿಸುತ್ತಿದ್ದರೆ, ಮತ್ತೊಂದೆಡೆ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ (Shakib Al Hasan) ತಮ್ಮ ತಂಡ ಟಿ20 ವಿಶ್ವಕಪ್ ಗೆಲ್ಲಲು ಬಂದಿಲ್ಲ ಎಂಬ ಶಾಕಿಂಗ್ ಹೇಳಿಕೆ ನೀಡುವ ಮೂಲಕ ಎಲ್ಲರನ್ನು ಅಚ್ಚರಿ ಪಡಿಸಿದ್ದಾರೆ. ನವೆಂಬರ್ 2 ರಂದು ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಕಣಕ್ಕಿಳಿಯಲಿದ್ದು, ಈ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್,  ಟಿ20 ವಿಶ್ವಕಪ್ ಗೆಲ್ಲುವ ಉದ್ದೇಶದಿಂದ ಟೀಂ ಇಂಡಿಯಾ ಇಲ್ಲಿಗೆ ಬಂದಿದೆ. ಆದರೆ ನಾವು ವಿಶ್ವಕಪ್ ಗೆಲ್ಲಲು ಇಲ್ಲಿಗೆ ಬಂದಿಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಶಕೀಬ್ ಅಲ್ ಹಸನ್, ‘ವಿಶ್ವಕಪ್ ಗೆಲ್ಲುವ ಉದ್ದೇಶದಿಂದ ಇಲ್ಲಿಗೆ ಬಂದಿರೋದು ಭಾರತ, ನಾವಲ್ಲ’. ಬಾಂಗ್ಲಾದೇಶ, ಭಾರತವನ್ನು ಸೋಲಿಸಿದರೆ ಅದು ತಿರುಗುಬಾಣವಾಗುತ್ತದೆ’ ಹೀಗಾಗಿ ನಾವು ಭಾರತವನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಈ 8 ತಂಡಗಳಲ್ಲಿ ಯಾರಿಗೆ ಸೆಮಿಫೈನಲ್ ಟಿಕೆಟ್? ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ ಅಂತಿಮ ಪಟ್ಟಿ

ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನ

ಸೂಪರ್-12 ಸುತ್ತಿನಲ್ಲಿ ಬಾಂಗ್ಲಾದೇಶ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದಿದೆ. ಈ ಮೂಲಕ ಗುಂಪು 2 ರ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಆದರೆ, ತಂಡದ ನೆಟ್ ರನ್ ರೇಟ್ -1.533 ಆಗಿರುವುದು ಪ್ರಮುಖ ಸಮಸ್ಯೆಯಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿನ ಏಕಪಕ್ಷೀಯ ಸೋಲಿನಿಂದಾಗಿ ಬಾಂಗ್ಲಾದೇಶಕ್ಕೆ ಈ ಸ್ಥಿತಿ ಬಂದಿದೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತ ಬಳಿಕ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿರುವ ಬಾಂಗ್ಲಾದೇಶ, ನೆದರ್ಲೆಂಡ್ಸ್ ಮತ್ತು ಜಿಂಬಾಬ್ವೆಯನ್ನು ಮಣಿಸುವುದರಲ್ಲಿ ಯಶಸ್ವಿಯಾಗಿದೆ.

ಭಾರತದೆದುರು ಗೆಲ್ಲುವುದು ಅಷ್ಟು ಸುಲಭವಲ್ಲ

ಬಾಂಗ್ಲಾದೇಶ ತಂಡಕ್ಕೆ ಭಾರತ ತಂಡವನ್ನು ಮಣಿಸುವುದು ಅಷ್ಟು ಸುಲಭವಲ್ಲ. ಭಾರತ ತನ್ನ ಕೊನೆಯ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಸೋತಿರಬಹುದು ಆದರೆ ಭಾರತೀಯ ಬ್ಯಾಟಿಂಗ್ ಘಟಕ ಅದ್ಭುತ ಫಾರ್ಮ್‌ನಲ್ಲಿದೆ ಎಂಬುದಂತೂ ನಿಜ. ಅದರಲ್ಲೂ ಸೂರ್ಯಕುಮಾರ್ ಯಾದವ್ ಕಳೆದೆರಡು ಪಂದ್ಯಗಳಲ್ಲಿ ಸತತ ಅರ್ಧಶತಕ ಬಾರಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಬಾಂಗ್ಲಾದೇಶಕ್ಕೆ ದೊಡ್ಡ ಬೆದರಿಕೆ ಎಂಬುದನ್ನು ಸ್ವತಃ ಶಕೀಬ್ ಅಲ್ ಹಸನ್ ಒಪ್ಪಿಕೊಂಡಿದ್ದಾರೆ. ಅಲ್ಲದೆ ಸೂರ್ಯಕುಮಾರ್ ಯಾದವ್ ಅವರನ್ನು ಹೊಗಳಿರುವ ಬಾಂಗ್ಲಾ ನಾಯಕ, ಸೂರ್ಯಕುಮಾರ್ ಭಾರತದ ಅತ್ಯುತ್ತಮ ಟಿ20 ಬ್ಯಾಟ್ಸ್‌ಮನ್ ಎಂದಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಶಕೀಬ್ ಫ್ಲಾಪ್

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಶಕೀಬ್ ಅಲ್ ಹಸನ್ ಅವರ ಪ್ರದರ್ಶನ ತುಂಬಾ ಕಳಪೆಯಾಗಿದೆ. ಬಾಂಗ್ಲಾದೇಶದ ನಾಯಕ ಆಡಿರುವ 3 ಪಂದ್ಯಗಳಲ್ಲಿ 10.33 ಸರಾಸರಿಯಲ್ಲಿ 31 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಅಲ್ಲದೆ ಅವರ ಸ್ಟ್ರೈಕ್ ರೇಟ್ ಕೂಡ 100ಕ್ಕಿಂತ ಕಡಿಮೆಯಿದೆ. ಬೌಲಿಂಗ್‌ನಲ್ಲಿ ಶಕೀಬ್ 3 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅವರ ಎಕಾನಮಿ ರೇಟ್ ಪ್ರತಿ ಓವರ್‌ಗೆ 9 ರನ್ ಆಗಿರುವುದು ಅವರು ದುಬಾರಿ ಬೌಲರ್ ಎಂಬುದಕ್ಕೆ ಸಾಕ್ಷಿಯಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:28 pm, Tue, 1 November 22

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ