ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
Team India: ಈ ಬಾರಿಯ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆಡಿರುವ 9 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 18 ಅಂಕಗಳೊಂದಿಗೆ ಸೆಮಿಫೈನಲ್ಗೆ ಪ್ರವೇಶಿಸಿದೆ. ಬುಧವಾರ ಮುಂಬೈನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಎದುರಾಳಿ ನ್ಯೂಝಿಲೆಂಡ್.
ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳ ಅಬ್ಬರ ಮುಂದುವರೆದಿದೆ. ಅದರಲ್ಲೂ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಭಾರತೀಯ ಬ್ಯಾಟರ್ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್ಗಳಲ್ಲಿ 410 ರನ್ ಕಲೆಹಾಕಿತ್ತು. ಈ ವೇಳೆ ಭಾರತ ತಂಡದ ಅಗ್ರ ಕ್ರಮಾಂಕದ 6 ಬ್ಯಾಟರ್ಗಳು ಒಟ್ಟು 16 ಸಿಕ್ಸರ್ಗಳನ್ನು ಸಿಡಿಸಿದ್ದರು.
ವಿಶೇಷ ಎಂದರೆ ಈ ಹದಿನಾರು ಸಿಕ್ಸ್ಗಳೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಕ್ಯಾಲೆಂಡರ್ ವರ್ಷವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ.ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿತ್ತು.
2019 ರಲ್ಲಿ ವೆಸ್ಟ್ ಇಂಡೀಸ್ ದಾಂಡಿಗರು ಏಕದಿನ ಕ್ರಿಕೆಟ್ನಲ್ಲಿ ಬರೋಬ್ಬರಿ 209 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ 2023 ರಲ್ಲಿ ಕೇವಲ 30 ಪಂದ್ಯಗಳ ಮೂಲಕ ಟೀಮ್ ಇಂಡಿಯಾ ಬ್ಯಾಟರ್ಗಳು ಒಟ್ಟು 215 ಸಿಕ್ಸ್ಗಳನ್ನು ಬಾರಿಸಿದ್ದಾರೆ.
ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸರ್ಗಳನ್ನು ಸಿಡಿಸಿದ ತಂಡ ಎಂಬ ಹಿರಿಮೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ.
ಏಕದಿನ ಕ್ರಿಕೆಟ್ನಲ್ಲಿ ವರ್ಷವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ತಂಡಗಳು:
- 215 ಸಿಕ್ಸ್ – ಭಾರತ (2023)
- 209 ಸಿಕ್ಸ್ – ವೆಸ್ಟ್ ಇಂಡೀಸ್ (2019)
- 203 ಸಿಕ್ಸ್ – ಸೌತ್ ಆಫ್ರಿಕಾ (2023)
- 179 ಸಿಕ್ಸ್ – ನ್ಯೂಝಿಲೆಂಡ್ (2015)
- 165 ಸಿಕ್ಸ್ – ಆಸ್ಟ್ರೇಲಿಯಾ (2023)
ಭಾರತ ಸೋಲಿಲ್ಲದ ಸರದಾರ:
ಈ ಬಾರಿಯ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆಡಿರುವ 9 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 18 ಅಂಕಗಳೊಂದಿಗೆ ಸೆಮಿಫೈನಲ್ಗೆ ಪ್ರವೇಶಿಸಿದೆ. ಬುಧವಾರ ಮುಂಬೈನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಎದುರಾಳಿ ನ್ಯೂಝಿಲೆಂಡ್.
ಏಕದಿನ ಕ್ರಿಕೆಟ್ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಇದುವರೆಗೆ 117 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 57 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 50 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಟೈಯಾದರೆ, 7 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.
ಅಂದರೆ ಮೇಲ್ನೋಟಕ್ಕೆ ಇಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು. ಇದಾಗ್ಯೂ ಕೊನೆಯ ಮುಖಾಮುಖಿಯಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ ತಂಡ 4 ವಿಕೆಟ್ಗಳಿಂದ ಜಯ ಸಾಧಿಸಿತ್ತು. ಹೀಗಾಗಿ ಇದೇ ಆತ್ಮ ವಿಶ್ವಾಸದಲ್ಲಿ ಸೆಮಿಫೈನಲ್ನಲ್ಲೂ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.
ಇದನ್ನೂ ಓದಿ: Virat Kohli: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
Published On - 2:52 pm, Mon, 13 November 23