Charanjit Singh: ಒಲಿಂಪಿಕ್ ಚಿನ್ನದ ಪದಕ ವಿಜೇತ, ಭಾರತದ ಹಾಕಿ ದಂತಕಥೆ ಚರಂಜಿತ್ ಸಿಂಗ್ ನಿಧನ

Charanjit Singh: ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಹಿರಿಯ ಆಟಗಾರ ಚರಂಜಿತ್ ಸಿಂಗ್ ಗುರುವಾರ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

Charanjit Singh: ಒಲಿಂಪಿಕ್ ಚಿನ್ನದ ಪದಕ ವಿಜೇತ, ಭಾರತದ ಹಾಕಿ ದಂತಕಥೆ ಚರಂಜಿತ್ ಸಿಂಗ್ ನಿಧನ
ಚರಂಜಿತ್ ಸಿಂಗ್
Follow us
| Updated By: ಪೃಥ್ವಿಶಂಕರ

Updated on: Jan 27, 2022 | 2:45 PM

ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಹಿರಿಯ ಆಟಗಾರ ಚರಂಜಿತ್ ಸಿಂಗ್ ಗುರುವಾರ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಚರಂಜಿತ್ ಅವರು ಭಾರತೀಯ ಹಾಕಿಯ ಸುವರ್ಣ ಯುಗದ ಭಾಗವಾಗಿದ್ದರು ಮತ್ತು ದೇಶಕ್ಕೆ ಅನೇಕ ಸ್ಮರಣೀಯ ವಿಜಯಗಳ ಭಾಗವಾಗಿದ್ದಾರೆ. 92 ವರ್ಷದ ಚರಂಜಿತ್ ಸಿಂಗ್ ಹಿಮಾಚಲದ ಉನಾದಲ್ಲಿ ಕೊನೆಯುಸಿರೆಳೆದಿದ್ದಾರೆ. ಅರ್ಜುನ ಪ್ರಶಸ್ತಿಯ ಜೊತೆಗೆ ಪದ್ಮಶ್ರೀ ಗೌರವವೂ ಅವರಿಗೆ ಸಂದಿದೆ.

ಅವರ ನಾಯಕತ್ವದಲ್ಲಿ, ಚರಂಜಿತ್ ಸಿಂಗ್ ಅವರು 1964 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕವನ್ನು ಗೆದ್ದರು. ಇದಲ್ಲದೆ, 1960 ರಲ್ಲಿ ರೋಮ್ನಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಅವರು ತಂಡದ ಭಾಗವಾಗಿದ್ದರು. ಆ ಕ್ರೀಡಾಕೂಟದಲ್ಲಿ ಭಾರತವು ಬೆಳ್ಳಿ ಪದಕವನ್ನು ಗೆದ್ದುಕೊಂಡಿತು. ಅದೇ ಸಮಯದಲ್ಲಿ, ಎರಡು ವರ್ಷಗಳ ನಂತರ, ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಪಡೆಯುವಲ್ಲಿ ಚರಂಜಿತ್ ಸಿಂಗ್ ಕೂಡ ಪ್ರಮುಖ ಪಾತ್ರ ವಹಿಸಿದರು.

ಚರಂಜಿತ್ ಸಿಂಗ್ ಹಿಮಾಚಲ ವಿಶ್ವವಿದ್ಯಾಲಯದಲ್ಲಿ ನಿರ್ದೇಶಕರಾಗಿದ್ದರು ಚರಂಜಿತ್ ಅವರು ಉನಾದ ಮೇರಿ ಗ್ರಾಮದಲ್ಲಿ 22 ನವೆಂಬರ್ 1930 ರಂದು ಜನಿಸಿದರು. ಅವರು ಪಂಜಾಬ್ ವಿಶ್ವವಿದ್ಯಾಲಯ ಮತ್ತು ಬ್ರೌನ್ ಕೇಂಬ್ರಿಡ್ಜ್ ಶಾಲೆಯಲ್ಲಿ ಅಧ್ಯಯನ ಮಾಡಿದರು. ನಿವೃತ್ತಿಯ ನಂತರ, ಚರಂಜಿತ್ ಹಿಮಾಚಲ ವಿಶ್ವವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿದ್ದರು. 1964 ರ ಹೊರತಾಗಿ, ಅವರು 1960 ರ ರೋಮ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ತಂಡದ ಭಾಗವಾಗಿದ್ದರು. ವಯಸ್ಸಾದ ಕಾರಣ, ಅವರು ದೀರ್ಘಕಾಲದವರೆಗೆ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು.

ರೋಮ್ ಒಲಿಂಪಿಕ್ಸ್-1960 ರ ಫೈನಲ್‌ನಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸಿತು. 1964 ರಲ್ಲಿ ಚರಣ್‌ಜಿತ್ ಸಿಂಗ್‌ಗೆ ನಾಯಕತ್ವವನ್ನು ನೀಡಿದಾಗ, ಮತ್ತೊಮ್ಮೆ ತಂಡವನ್ನು ಚಾಂಪಿಯನ್ ಮಾಡುವ ಅವಕಾಶವನ್ನು ಹೊಂದಿದ್ದರು. ಪಾಕಿಸ್ತಾನ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ತನ್ನ ಸುವರ್ಣ ಪಯಣಕ್ಕೆ ಬ್ರೇಕ್ ಹಾಕಿತು. ಎರಡು ಡ್ರಾಗಳ ನಂತರ, ಲೀಗ್ ಹಂತದ ಉಳಿದ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಸೆಮಿಫೈನಲ್‌ಗೆ ಪ್ರವೇಶಿಸಿತು. ಇಲ್ಲಿ ಅವರು ಆಸ್ಟ್ರೇಲಿಯಾವನ್ನು 3-1 ಗೋಲುಗಳಿಂದ ಸೋಲಿಸಿದರು. ಈ ತಂಡ ಫೈನಲ್‌ನಲ್ಲಿ ಮತ್ತೆ ಪಾಕಿಸ್ತಾನದ ಎದುರು ನಿಂತಿತ್ತು. ಈ ಪಂದ್ಯದಲ್ಲಿ ಭಾರತ 1-0 ಅಂತರದಲ್ಲಿ ಪಾಕಿಸ್ತಾನವನ್ನು ಸೋಲಿಸಿತ್ತು.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್