IND vs IRE: ಸೋಲಿನ ಆಘಾತದ ನಡುವೆ ಕೊನೆಯ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ರೆಡಿ

India vs Ireland 2nd T20: ಐರ್ಲೆಂಡ್ ವಿರುದ್ಧದ ಮೊದಲ T20 ಪಂದ್ಯ ಸೋತು ಸರಣಿಯಲ್ಲಿ 1-0 ಹಿನ್ನಡೆ ಅನುಭವಿಸಿರುವ ಭಾರತ ತಂಡ, ಎರಡನೇ ಹಾಗೂ ಅಂತಿಮ T20 ಪಂದ್ಯಕ್ಕೆ ಸಜ್ಜಾಗಿದೆ. ಜೂನ್ 28 ರಂದು ಬೆಲ್‌ಫಾಸ್ಟ್‌ನಲ್ಲಿ ನಡೆಯುವ ಈ ನಿರ್ಣಾಯಕ ಪಂದ್ಯವನ್ನು ಭಾರತ ಗೆಲ್ಲಲೇಬೇಕಿದೆ. ಸಂಜೆ 6 ಗಂಟೆಗೆ ಸೋನಿ ಸ್ಪೋರ್ಟ್ಸ್‌ನಲ್ಲಿ ಲೈವ್ ವೀಕ್ಷಿಸಿ, ಸರಣಿ ಸಮಬಲಗೊಳಿಸಲು ಭಾರತದ ಹೋರಾಟವನ್ನು ನೋಡಿ.

IND vs IRE: ಸೋಲಿನ ಆಘಾತದ ನಡುವೆ ಕೊನೆಯ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ರೆಡಿ
Ind Vs Ire

Updated on: Jun 27, 2026 | 7:22 PM

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು 34 ರನ್​ಗಳಿಂದ ಸೋತ ಆಘಾತದಲ್ಲಿರುವ ಟೀಂ ಇಂಡಿಯಾ (India vs Ireland) ಇದೀಗ ಎರಡನೇ ಟಿ20 ಪಂದ್ಯಕ್ಕೆ ಸಜ್ಜಾಗಿದೆ. ಮೊದಲ ಪಂದ್ಯವನ್ನು ಗೆದ್ದುಕೊಂಡಿರುವ ಐರ್ಲೆಂಡ್ 2 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಇದೀಗ ನಾಳೆ ನಡೆಯಲಿರುವ ಕೊನೆಯ ಟಿ20 ಪಂದ್ಯದಲ್ಲಿ ಭಾರತ ಸೋತರೆ, ಐರ್ಲೆಂಡ್ 2-0 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಒಂದು ವೇಳೆ ಭಾರತ ಗೆದ್ದರೆ ಸರಣಿ 1-1 ರ ಸಮಬಲದೊಂದಿಗೆ ಅಂತ್ಯವಾಗಲಿದೆ. ಹೀಗಾಗಿ ಸರಣಿ ಗೆಲ್ಲುವ ಅವಕಾಶ ಕಳೆದುಕೊಂಡಿರುವ ಭಾರತ, ಸರಣಿ ಸೋಲಿನಿಂದ ಪಾರಾಗಲು ಈ ಪಂದ್ಯವನ್ನು ಗೆಲ್ಲಲೇಬೇಕಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದ್ದು, ಪಂದ್ಯದ ಬಗ್ಗೆಗಿನ ಪೂರ್ಣ ವಿವರ ಇಲ್ಲಿದೆ.

ಭಾರತ ಹಾಗೂ ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯ ಜೂನ್ 28 ರಂದು ನಡೆಯಲಿದೆ.

ಭಾರತ ಹಾಗೂ ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯ ಬೆಲ್‌ಫಾಸ್ಟ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಭಾರತ ಹಾಗೂ ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 6 ಗಂಟೆಗೆ ಪ್ರಾರಂಭವಾಗುತ್ತದೆ.

ಭಾರತ ಹಾಗೂ ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಹಾಗೂ ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ವೀಕ್ಷಿಸಬಹುದು.

ಹೀಗೊಂದು ಕಾಕತಾಳೀಯ; 2028 ರ ಟಿ20 ವಿಶ್ವಕಪ್ ಕೂಡ ಭಾರತದ್ದೇ

ಉಭಯ ತಂಡಗಳು

ಐರ್ಲೆಂಡ್ ತಂಡ: ಲೋರ್ಕನ್ ಟಕರ್ (ನಾಯಕ), ರಾಸ್ ಅಡೈರ್, ಬೆನ್ ಕೌಲ್ಟಿಡ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಮ್ಯಾಥ್ಯೂ ಹಂಫ್ರೈಸ್, ಗ್ಯಾವಿನ್ ಹೋಯ್, ಮ್ಯಾಥ್ಯೂ ಹೊಲ್ಲಾರ್ಡ್, ಲಿಯಾಮ್ ಮೆಕಾರ್ಥಿ, ಜೇ ಮುಂದ್ರಾ, ಹ್ಯಾರಿ ಟೆಕ್ಟರ್, ಟಿಮ್ ಟೆಕ್ಟರ್, ರೂಬೆನ್ ವಿಲ್ಸನ್.

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Sat, 27 June 26

Follow Us