AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಶೇಕಡಾ 90 ರಷ್ಟು ಮಳೆ..! ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ

India vs Ireland T20: ಭಾರತ ಮತ್ತು ಐರ್ಲೆಂಡ್ ನಡುವಿನ ಟಿ20 ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಜೂನ್ 26 ರಂದು ಬೆಲ್‌ಫಾಸ್ಟ್‌ನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ. ಹವಾಮಾನ ವರದಿಯ ಪ್ರಕಾರ, ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಪಿಚ್ ವೇಗಿಗಳಿಗೆ ಅನುಕೂಲಕರವಾಗಿದೆ. ವೈಭವ್ ಸೂರ್ಯವಂಶಿ ಸೇರಿದಂತೆ ಕೆಲ ಆಟಗಾರರು ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

IND vs IRE: ಶೇಕಡಾ 90 ರಷ್ಟು ಮಳೆ..! ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ
Ire Vs Ind Weather
ಪೃಥ್ವಿಶಂಕರ
|

Updated on:Jun 25, 2026 | 10:12 PM

Share

ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಟಿ20 ಸರಣಿ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಮೊದಲ ಪಂದ್ಯ ಜೂನ್ 26 ರಂದು ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ 2007 ರಲ್ಲಿ ಏಕದಿನ ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಬರೋಬ್ಬರಿ 19 ವರ್ಷಗಳ ನಂತರ ಈ ಮೈದಾನಲ್ಲಿ ಟೀಂ ಇಂಡಿಯಾ ಟಿ20 ಪಂದ್ಯವನ್ನು ಆಡುತ್ತಿದೆ. ಈ ಪಂದ್ಯದಲ್ಲೂ ಟೀಂ ಇಂಡಿಯಾ ಪರ ಎರಡರಿಂದ ಮೂರು ಆಟಗಾರರು ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಸಾಧ್ಯತೆಗಳಿವೆ. ಅದರಲ್ಲೂ ವೈಭವ್ ಸೂರ್ಯವಂಶಿ ಈ ಪಂದ್ಯದಲ್ಲಿ ಆಡುವುದು ಖಚಿತವೆನ್ನಲಾಗುತ್ತಿದೆ. ಆದರೆ ಹವಾಮಾನ ವರದಿಯ ಪ್ರಕಾರ, ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಶೇಕಡಾ 90 ರಷ್ಟು ಮಳೆ

ಬೆಲ್‌ಫಾಸ್ಟ್‌ನಲ್ಲಿ ಹವಾಮಾನದ ಕುರಿತು ಹೇಳುವುದಾದರೆ, ಜೂನ್ 26 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ವೆಬ್‌ಸೈಟ್ ಅಕ್ಯೂವೆದರ್ ಪ್ರಕಾರ, ಗುರುವಾರ 5.1 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಶೇಕಡಾ 90 ರಷ್ಟು ಮೋಡ ಕವಿದ ವಾತಾವರಣವಿರಲಿದ್ದು, ಗಾಳಿ ಗಂಟೆಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ. ಮಳೆಯಾಗುವ ಸಾಧ್ಯತೆ ಶೇಕಡಾ 90 ರಷ್ಟು ಇರುವ ಕಾರಣ, ಪಂದ್ಯಕ್ಕೆ ಮಳೆ ಅಡ್ಡಿಯಾಗಬಹುದು. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡುವ ಸಾಧ್ಯತೆಯಿದೆ.

ಪಿಚ್ ವರದಿ

ಐರ್ಲೆಂಡ್‌ನ ಬೆಲ್‌ಫಾಸ್ಟ್‌ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿರುವ ಪಿಚ್ ಸಾಮಾನ್ಯವಾಗಿ ವೇಗದ ಬೌಲರ್‌ಗಳಿಗೆ ಅನುಕೂಲಕರವಾಗಿರುತ್ತದೆ. ಆದಾಗ್ಯೂ, ಆರಂಭಿಕ ಓವರ್‌ಗಳ ನಂತರ, ಬ್ಯಾಟ್ಸ್‌ಮನ್‌ಗಳು ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸುತ್ತಾರೆ. ಬ್ಯಾಟ್ಸ್‌ಮನ್‌ಗಳು ತಾಳ್ಮೆಯಿಂದ ಬ್ಯಾಟಿಂಗ್ ಮಾಡಿ ಕ್ರೀಸ್‌ನಲ್ಲಿ ಸಮಯ ಕಳೆದರೆ, ರನ್ ಗಳಿಸುವುದು ಸುಲಭವಾಗುತ್ತದೆ.

ಭಾರತ- ಐರ್ಲೆಂಡ್ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಉಭಯ ತಂಡಗಳು

ಐರ್ಲೆಂಡ್ ತಂಡ: ಲೋರ್ಕನ್ ಟಕರ್ (ನಾಯಕ), ರಾಸ್ ಅಡೈರ್, ಬೆನ್ ಕೌಲ್ಟಿಡ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಮ್ಯಾಥ್ಯೂ ಹಂಫ್ರೈಸ್, ಗ್ಯಾವಿನ್ ಹೋಯ್, ಮ್ಯಾಥ್ಯೂ ಹೊಲ್ಲಾರ್ಡ್, ಲಿಯಾಮ್ ಮೆಕಾರ್ಥಿ, ಜೇ ಮುಂದ್ರಾ, ಹ್ಯಾರಿ ಟೆಕ್ಟರ್, ಟಿಮ್ ಟೆಕ್ಟರ್, ರೂಬೆನ್ ವಿಲ್ಸನ್.

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 pm, Thu, 25 June 26

Follow Us
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ